'ಮೌಢ್ಯ' ಜಾರಿಗೆ ಆಗ್ರಹ
ಕ.ಪ್ರ. ವಾರ್ತೆ, ಚಿಕ್ಕಮಗಳೂರು, ಡಿ.4
ಮೂಢನಂಬಿಕೆ ಆಚರಣೆ ಪ್ರತಿಬಂಧಕ ಮಸೂದೆಯನ್ನು ಜಾರಿಗೆ ತರುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿಯ ಕಾರ್ಯಕರ್ತರು ಜಿಲ್ಲಾಧಿಕಾರಿ ಕಚೇರಿ ಎದುರು ಬುಧವಾರ ಧರಣಿ ನಡೆಸಿದರು.
ದಸಂಸ ಜಿಲ್ಲಾ ಸಂಚಾಲಕ ಕೆ.ಪಿ. ರಾಜರತ್ನಂ ಅವರ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದ ಬಳಿಕ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಲಾಯಿತು.
ಸಮಾಜಕ್ಕೆ ಕೆಡುಕನ್ನು ಉಂಟು ಮಾಡುವಂತಹ ಧಾರ್ಮಿಕ ಮೂಢನಂಬಿಕೆಗಳ ಆಚರಣೆಗಳು ಮತ್ತು ನಂಬಿಕೆಗಳ ಮೇಲೆ ನಿಷೇಧ ಹೇರಬೇಕು, ಮಾಟ, ಮಂತ್ರದ ಹೆಸರಿನಲ್ಲಿ ಬಡವರನ್ನು ಬಲಿ ತೆಗೆದುಕೊಳ್ಳುವವರ ವಿರುದ್ಧ ಪ್ರಕರಣ ದಾಖಲಿಸಬೇಕು, ಮೂಢನಂಬಿಕೆ ವಿರೋಧಿ ಕಾನೂನನ್ನು ಮಹಾರಾಷ್ಟ್ರ ಸರ್ಕಾರದಂತೆ ಕರ್ನಾಟಕದಲ್ಲೂ ಜಾರಿಗೆ ತರಬೇಕೆಂದು ಆಗ್ರಹಿಸಿದರು.
ಮೂಢನಂಬಿಕೆ ಪ್ರತಿಬಂಧಕ ಮಸೂದೆಗೆ ಬೆಂಬಲ ನೀಡಿದ ನಿಡುಮಾಮಿಡಿ ಸ್ವಾಮೀಜಿಗೆ ಬೆದರಿಕೆ ಹಾಕಿರುವವರ ವಿರುದ್ಧ ಪ್ರಕರಣ ದಾಖಲಿಸಿ ಬಂಧಿಸಬೇಕು, ಸ್ವಾಮೀಜಿಗೆ ರಕ್ಷಣೆ ನೀಡಬೇಕೆಂದು ಒತ್ತಾಯಿಸಿದರು.
ಶೃಂಗೇರಿ ತಾಲೂಕು ಕಸಬಾ ಹೋಬಳಿಯ ಶುಂಠಿಹಕ್ಲು ಗ್ರಾಮದ ದಲಿತ ಮಹಿಳೆಗೆ ಅಂಗನವಾಡಿ ಶಿಕ್ಷಕಿಯಾಗಿ ನೇಮಿಸದೆ ಬೇರೆಯವರನ್ನು ನೇಮಕ ಮಾಡಿದ್ದು, ಈ ಕೂಡಲೇ ನೇಮಕಾತಿಯನ್ನು ರದ್ದುಗೊಳಿಸಬೇಕು ಎಂದು ಆಗ್ರಹಿಸಿದರು.
ದಲಿತರು ವಾಸಿಸುವ ಗ್ರಾಮಗಳಲ್ಲಿ ಸ್ಮಶಾನಕ್ಕೆ ಜಾಗದ ಕೊರತೆ ಉಂಟಾಗಿದ್ದು, ಕೂಡಲೇ ಪ್ರತಿ ಗ್ರಾಮಕ್ಕೆ 3 ಎಕರೆ ಜಮೀನನ್ನು ಮಂಜೂರು ಮಾಡಬೇಕು, ಅರ್ಜಿ ನಮೂನೆ 51 ಮತ್ತು 53ರಲ್ಲಿ ಅರ್ಜಿ ಸಲ್ಲಿಸಿರುವ ದಲಿತರಿಗೆ ಭೂಮಿ ಮಂಜೂರು ಮಾಡಬೇಕೆಂದು ಒತ್ತಾಯಿಸಿದರು.
ಜಿಲ್ಲಾ ಸಂಘಟನಾ ಸಂಚಾಲಕ ಯಲಗುಡಿಗೆ ಬಸವರಾಜ್, ತಾಲೂಕು ಸಂಚಾಲಕ ಸತ್ತಿಹಳ್ಳಿ ಜಯಪ್ಪ, ಮುಖಂಡರಾದ ಎನ್. ಕುಮಾರ್, ನಾಗರಾಜ್, ಬಾಲಕೃಷ್ಣ ಹಾಗೂ ದಸಂಸ ಕಾರ್ಯಕರ್ತರು ಪಾಲ್ಗೊಂಡಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

