ಚಿಕ್ಕಮಗಳೂರು

ಲಕ್ಷ ದೀಪೋತ್ಸವ

Published On :

ನರಸಿಂಹರಾಜಪುರ: ಲಕ್ಷ ದೀಪೋತ್ಸವ ಸಮಿತಿ ಆಶ್ರಯದಲ್ಲಿ ಅಗ್ರಹಾರದ ಉಮಾ ಮಹೇಶ್ವರ ದೇವಸ್ಥಾನದಲ್ಲಿ 21ನೇ ವರ್ಷದ ಲಕ್ಷ ದೀಪೋತ್ಸವ, ಧಾರ್ಮಿಕ ಕಾರ್ಯಕ್ರಮ ಸೋಮವಾರ ನಡೆಯಿತು.
ಸೋಮವಾರ ಸಂಜೆ ತಹಸೀಲ್ದಾರ್ ಕೃಷ್ಣಮೂರ್ತಿ, ಜಿಪಂ ಉಪಾಧ್ಯಕ್ಷೆ ಸುಜಾತಾ, ತಾಪಂ ಅಧ್ಯಕ್ಷ ಜೆ.ಜಿ.ನಾಗರಾಜ್ ಲಕ್ಷ ದೀಪೋತ್ಸವಕ್ಕೆ ಚಾಲನೆ ನೀಡಿದರು.
ವೇ.ಬ್ರ. ಕೃಷ್ಣಭಟ್ ಲಕ್ಷ ದೀಪೋತ್ಸವದ ಮಹತ್ವದ ಬಗ್ಗೆ ಧಾರ್ಮಿಕ ಉಪನ್ಯಾಸ ನೀಡಿದರು. ಇದೇ ಸಂದರ್ಭದಲ್ಲಿ ಕಳೆದ ಸಾಲಿನಲ್ಲಿ ತಾಲೂಕಿನಲ್ಲಿ ಎಸ್ಸೆಸೆಲ್ಸಿಯಲ್ಲಿ ಅತಿ ಹೆಚ್ಚು ಅಂಕ ಪಡೆದ ಪಿ.ಕೆ. ಸುಜಿತ್ ಹಾಗೂ ಎ.ವಿ. ಸುಷ್ಮಾ ಅವರನ್ನು ಲಕ್ಷ ದೀಪೋತ್ಸವ ಸಮಿತಿಯಿಂದ ಸನ್ಮಾನಿಸಲಾಯಿತು.
ಈ ಸಂದರ್ಭದಲ್ಲಿ ಲಕ್ಷ ದೀಪೋತ್ಸವ ಸಮಿತಿ ಅಧ್ಯಕ್ಷ ನಂಜುಂಡಸ್ವಾಮಿ, ಕಾರ್ಯದರ್ಶಿ ನಟರಾಜರಾವ್ ಉಪಸ್ಥಿತರಿದ್ದರು. ಭಾಗ್ಯಾ ನಂಜುಂಡಸ್ವಾಮಿ ಕಾರ್ಯಕ್ರಮ ನಿರೂಪಿಸಿದರು.
ಧಾರ್ಮಿಕ ಕಾರ್ಯಕ್ರಮ: ಲಕ್ಷ ದೀಪೋತ್ಸವ ಪ್ರಯುಕ್ತ ಸೋಮವಾರ ಬೆಳಗ್ಗೆ ಉಮಾ ಮಹೇಶ್ವರ ದೇವಸ್ಥಾನದಲ್ಲಿ ವೇ.ಬ್ರ. ಕೃಷ್ಣಭಟ್ ನೇತೃತ್ವದಲ್ಲಿ ಏಕಾದಶವಾರು ರುದ್ರ ಪಂಚಾಮೃತ ಅಭಿಷೇಕ, ಪವಮಾನ ಸೂಕ್ತ, ಸಹಸ್ರ ಬಿಲ್ಚಾರ್ಚನೆ ಮಹಾಮಂಗಳಾರತಿ ನಡೆಯಿತು. ಸಂಜೆ ಪ್ರದೋಷ ಪೂಜೆ, ಅಷ್ಟಾವಧಾನ ಸೇವೆ ಮುಂತಾದ ಧಾರ್ಮಿಕ ಕಾರ್ಯಕ್ರಮ ನಡೆಯಿತು.
--

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.