ಚಿಕ್ಕಮಗಳೂರು

ಕೃಷಿಯಲ್ಲಿ ಮಹಿಳೆ ಸಾಧನೆ ಅನನ್ಯ

Published On :

ಮೂಡಿಗೆರೆ: ಭಾರತ ಒಂದು ಕೃಷಿ ಆಧಾರಿತ ದೇಶವಾಗಿದ್ದು, ಕೃಷಿ ಕ್ಷೇತ್ರದಲ್ಲಿ ಭಾರತೀಯ ಮಹಿಳೆಯರ ಪಾತ್ರ ಮಹತ್ತರವಾಗಿದೆ ಎಂದು ಮೂಡಿಗೆರೆ ಕೃಷಿ ವಿಜ್ಞಾನ ಕೇಂದ್ರದ ಕಾರ್ಯಕ್ರಮ ಸಂಯೋಜಕಿ ಡಾ. ಸುಕನ್ಯಾ ಟಿ.ಎಸ್. ಅಭಿಪ್ರಾಯಪಟ್ಟರು.
ಪಟ್ಟಣದ ಛತ್ರ ಮೈದಾನದ ಸಭಾಂಗಣದಲ್ಲಿ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಸಹಯೋಗ ದೊಂದಿಗೆ ಕೃಷಿ ವಿಜ್ಞಾನ ಕೇಂದ್ರ ಮೂಡಿಗೆರೆ ಏರ್ಪಡಿಸಿದ್ದ ವಿಶ್ವ ಕೃಷಿ ನಿರತ ಮಹಿಳಾ ದಿನಾಚರಣೆ ಉದ್ಘಾಟಿಸಿ ಮಾತನಾಡಿದ ಅವರು, ಮಹಿಳೆಯರು ಪುರುಷನಿಗೆ ಸಮಾನವಾಗಿ ಕಾರ್ಯನಿರ್ವಹಿಸಿದ ಮೊದಲ ಕ್ಷೇತ್ರ  ಕೃಷಿಯಾಗಿದ್ದು, ಇಂದಿಗೂ ಭಾರತ ಕೃಷಿ ಕ್ಷೇತ್ರದಲ್ಲಿ ರೈತ ಮಹಿಳೆಯರು ಪಾಲು ಹೆಚ್ಚಾಗಿದೆ ಎಂದರು.
ವಲಯ ಕೃಷಿ ಮತ್ತು ತೋಟಗಾರಿಕೆ ಸಂಶೋಧನೆ ಕೇಂದ್ರದ ಸಹ ಸಂಶೋಧನಾ ನಿರ್ದೇಶಕ ಡಾ. ಎಸ್.ಡಿ. ರಂಗಸ್ವಾಮಿ ಮಾತನಾಡಿ, ಕೃಷಿಯಲ್ಲಿ ರೈತ ಮಹಿಳೆಯರು ತೊಡಗಿಕೊಂಡಾಗ ಕೃಷಿ ಕ್ಷೇತ್ರವು ಆರ್ಥಿಕ ಮಿತವ್ಯಯವನ್ನು ಸಾಧಿಸುವುದರಿಂದ ಕೃಷಿಯನ್ನು ಲಾಭದಾಯಕವಾಗಿಸುವುದರಲ್ಲಿ ಮಹಿಳೆ ಪಾತ್ರ ಅತ್ಯಮೂಲ್ಯವಾಗಿದೆ ಎಂದರು.
ಕೃಷಿ ವಿಜ್ಞಾನ ಕೇಂದ್ರದ ವಿಷಯ ತಜ್ಞ ಡಾ. ಗಿರೀಶ್ ಆರ್. ಮಾತನಾಡಿ, ರೈತ ಮಹಿಳೆಯರಿಗೆ ತಮ್ಮ ಕೃಷಿ ಚಟುವಟಿಕೆ ಜೊತೆಯಲ್ಲಿ ನಗರದ ತಾರಸಿ ಕೈತೋಟ ವಿಷಯವಾಗಿ ವಿವಿಧ ತರಕಾರಿ ಬೆಳೆ ಮತ್ತು ಸಾವಯವ ಕೃಷಿ ಬಗ್ಗೆ ಮಾಹಿತಿ ನೀಡಿದರು. ಕಾರ್ಯಕ್ರಮದಲ್ಲಿ ಸಹ ಸಂಶೋಧಕರಾದ ನಾಗರಾಜ ಗೋಕಾಂವಿ, ಮಧುಕಿರಣ್ ಹಾಗೂ ತಾಲೂಕಿನ ವಿವಿಧ ಪ್ರಗತಿಪರ ರೈತ ಮಹಿಳೆಯರು ಭಾಗವಹಿಸಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.