ಚಿಕ್ಕಮಗಳೂರು

ನ.ರಾ. ಪುರದಿಂದಲೇ ಪ್ರತಿಭಾ ಕಾರಂಜಿ ಪ್ರಾರಂಭ; ರಾಜಪ್ಪ

Published On :

ನರಸಿಂಹರಾಜಪುರ: ತಾಲೂಕಿನ ಮೇಗರಮಕ್ಕಿ ಶಾಲೆಯಲ್ಲಿ ಕೆಲವು ವರ್ಷಗಳ ಹಿಂದೆ ಪ್ರಾರಂಭಗೊಂಡ ಮಕ್ಕಳ ಮೇಳವೇ ಈಗ ರಾಜ್ಯ ಮಟ್ಟದ ಪ್ರತಿಭಾ ಕಾರಂಜಿ ಕಾರ್ಯಕ್ರಮವಾಗಿ ಬೆಳವಣಿಗೆ ಹೊಂದಿದೆ ಎಂದು ಕ್ಷೇತ್ರ ಸಂಪನ್ಮೂಲ ಕೇಂದ್ರದ ಸಮನ್ವಯಾಧಿಕಾರಿ ಡಿ. ರಾಜಪ್ಪ ತಿಳಿಸಿದರು.
ಈಚಿಕೆರೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಗುರುವಾರ ನಡೆದ ನ.ರಾ. ಪುರ ಪಟ್ಟಣ  ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಅವರು ಮಾತನಾಡಿದ ಅವರು, ಮಕ್ಕಳಲ್ಲಿರುವ ಪ್ರತಿಭೆ ಹೊರ ತೆಗೆಯಲು ಮಕ್ಕಳ ಮೇಳ ಕಾರ್ಯಕ್ರಮವನ್ನು ನರಸಿಂಹರಾಜಪುರದಿಂದಲೇ ಪ್ರಾರಂಭಿಸಲಾಗಿತ್ತು ಎಂದು ನೆನಪಿಸಿಕೊಂಡರು.
ಗುಬ್ಬಿಗಾ ಗ್ರಾಪಂ ಸದಸ್ಯೆ ಸುನೀತ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಪಠ್ಯ ಪುಸ್ತಕಗಳ ಮಧ್ಯೆ ಪಠ್ಯೇತರ ಚಟುವಟಿಕೆಗಳಾಗಿ ಪ್ರತಿಭಾ ಕಾರಂಜಿ ಕಾರ್ಯಕ್ರಮವು ಉತ್ತಮ ಕಾರ್ಯಕ್ರಮವಾಗಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
ಸಮಾರಂಭದ ಅಧ್ಯಕ್ಷತೆಯನ್ನು ಈಚಿಕೆರೆ ಶಾಲೆಯ ಎಸ್‌ಡಿಎಂಸಿ ಅಧ್ಯಕ್ಷ ಮಹೇಶ್ ವಹಿಸಿದ್ದರು. ಅತಿಥಿಗಳಾಗಿ ಶಾಲೆಯ ಎಸ್‌ಡಿಎಂಸಿ ಮಾಜಿ ಅಧ್ಯಕ್ಷ ಕೆ. ರವಿ, ತಾಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಗೌಸ್ ಮೊಹಿದ್ದೀನ್, ತಾ. ಪ್ರಾ.ಶಿ. ಸಂಘದ ಕಾರ್ಯದರ್ಶಿ ಡಿ. ಬೋಗೇಶ್, ಖಜಾಂಚಿ ಎಸ್.ಬಿ. ಮಲ್ಲಿಕಾರ್ಜುನ, ಶಿಕ್ಷಣ ಇಲಾಖೆ ಕೃಷ್ಣನಾಯಕ್, ವೆಂಕಟರಾಜ್, ಪ್ರಕಾಶ್, ಉಪೇಂದ್ರ, ಕುಮಾರ್ ಮುಂತಾದವರಿದ್ದರು.
ಇದೇ ಸಂದರ್ಭದಲ್ಲಿ ಎಸ್‌ಡಿಎಂಸಿ ಮಾಜಿ ಅಧ್ಯಕ್ಷ ಕೆ. ರವಿ, ನಿವೃತ್ತ ಮುಖ್ಯ ಶಿಕ್ಷಕಿ ಎಲಿಬೆಜತ್, ಸಹ ಶಿಕ್ಷಕಿ ಡೈಸಿ ಅವರನ್ನು ಅಭಿನಂದಿಸಲಾಯಿತು. ಶಾಲಾ ಮುಖ್ಯೋಪಾಧ್ಯಾಯನಿ ಅಂಬಾದೇವಿ ಸ್ವಾಗತಿಸಿದರು. ಮೋಹನರಾಜ್ ನಿರೂಪಿಸಿದರು. 10 ಶಾಲೆಗಳ 500 ಮಕ್ಕಳು 21 ವಿವಿಧ ಸ್ಫರ್ಧೆಗಳಲ್ಲಿ ಭಾಗವಹಿಸಿದ್ದರು.
ಲೋಕಾಯುಕ್ತರ ಪ್ರವಾಸ
ಚಿಕ್ಕಮಗಳೂರು: ಲೋಕಾಯುಕ್ತ ಪೊಲೀಸ್ ಉಪ ಅಧೀಕ್ಷಕರು ಶುಕ್ರವಾರ ಜಿಲ್ಲೆಯ ವಿವಿಧೆಡೆ ಭೇಟಿ ನೀಡಲಿದ್ದಾರೆ.
ಬೆಳಗ್ಗೆ 10 ಗಂಟೆಗೆ ಶೃಂಗೇರಿ ಪ್ರವಾಸಿ ಮಂದಿರಕ್ಕೆ ಆಗಮಿಸಲಿದ್ದಾರೆ. ಆಯಾ ತಾಲೂಕಿನ ಸಾರ್ವಜನಿಕರು ಸರ್ಕಾರಿ ಕಚೇರಿಗಳಿಗೆ ತಮ್ಮ ಕೆಲಸದ ನಿಮಿತ್ತ ಅರ್ಜಿ, ದೂರು ಸಲ್ಲಿಸಿದ್ದು, ತಮ್ಮ ಅರ್ಜಿ, ದೂರನ್ನು ಸಂಬಂಧಿಸಿದ ಅಧಿಕಾರಿ ವಿಲೇ ಮಾಡದೆ, ಸಮಸ್ಯೆ ಬಗೆಹರಿಸದೆ ಇದ್ದಲ್ಲಿ ತಮ್ಮ ದೂರು ಸಲ್ಲಿಸಲು ಕೋರಲಾಗಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.