ಪ್ರಾಮಾಣಿಕ, ಪಕ್ಷ ನಿಷ್ಠರಿಗೆ 'ಕೈ' ಮಣೆ
ಕ.ಪ್ರ.ವಾರ್ತೆ, ಚಿಕ್ಕಮಗಳೂರು, ಡಿ.5
ಕಾಂಗ್ರೆಸ್ನಲ್ಲಿ ನಿಷ್ಠೆ ಹಾಗೂ ಪ್ರಾಮಾಣಿಕವಾಗಿ ಪಕ್ಷದ ಕೆಲಸ ಮಾಡುವ ಕಾರ್ಯಕರ್ತರನ್ನು ಗುರುತಿಸಿ ಅವರಿಗೆ ಪಕ್ಷದಲ್ಲಿ ಸ್ಥಾನ ಹಾಗೂ ಸರ್ಕಾರಿ ನಾಮ ನಿರ್ದೇಶನಕ್ಕೆ ಶಿಫಾರಸು ಮಾಡುವುದಾಗಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಡಾ. ವಿಜಯಕುಮಾರ್ ಹೇಳಿದರು.
ನಗರದ ಬ್ಲಾಕ್ ಕಾಂಗ್ರೆಸ್ ಸಮಿತಿ ಸಭೆಯಲ್ಲಿ ಕಾರ್ಯಕರ್ತರ ಅಭಿಪ್ರಾಯ ಸಂಗ್ರಹಿಸಿ ಉತ್ತರಿಸಿದ ಅವರು, ಸರಿಯಾಗಿ ಕಾರ್ಯನಿರ್ವಹಿಸದೆ ಇರುವ ಕೆಲವು ಬೂತ್ ಹಾಗೂ ವಾರ್ಡ್ ಮತ್ತು ಹೋಬಳಿ ಸಮಿತಿಗಳನ್ನು ಬದಲಾವಣೆ ಮಾಡಲಾಗುವುದು ಎಂದರು.
ಸಾರ್ವಜನಿಕರಿಗೆ ತಿಳಿಸಿ: ಮುಂದಿನ ಲೋಕಸಭಾ ಚುನಾವಣೆಗೆ ಪಕ್ಷದ ಕಾರ್ಯಕರ್ತರು ಹಾಗೂ ಎಲ್ಲಾ ಘಟಕಗಳು ಸಜ್ಜಾಗಬೇಕು ಮತ್ತು ಕೇಂದ್ರ, ರಾಜ್ಯ ಸರ್ಕಾರದ ಹಲವು ಜನಪರ ಯೋಜನೆಗಳನ್ನು ಹಾಗೂ ಕಾರ್ಯಕ್ರಮಗಳ ಬಗ್ಗೆ ಸಾರ್ವಜನಿಕರಿಗೆ ಪ್ರಚಾರಪಡಿಸಿ ಸರ್ಕಾರದ ಸೌಲಭ್ಯ ಪಡೆಯಲು ಸಾರ್ವಜನಿಕರಿಗೆ ನೆರವು ಆಗಬೇಕು ಎಂದು ಕಾರ್ಯಕರ್ತರಲ್ಲಿ ಮನವಿ ಮಾಡಿದರು.
ಸಭೆಯ ಅಧ್ಯಕ್ಷತೆ ವಹಿಸಿದ್ದ ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಶ್ರೀಧರ್ ಉರಾಳ್ ಮಾತನಾಡಿ, ಡಿಸೆಂಬರ್ ಅಂತ್ಯದೊಳಗೆ ಸದಸ್ಯತ್ವ ನೋಂದಾವಣಿ ಪ್ರಕ್ರಿಯೆ ಪೂರ್ಣಗೊಳಿಸಲಾಗುವುದು. ಸದಸ್ಯರಾಗದವರು ಕೂಡಲೇ ಸದಸ್ಯತ್ವ ನೋಂದಣಿ ಮಾಡಿಕೊಳ್ಳಬೇಕು ಎಂದರು.
ಹಲವು ಯೋಜನೆ: ಜಿಲ್ಲಾ ಕಾಂಗ್ರೆಸ್ ಸಮಿತಿ ಉಪಾಧ್ಯಕ್ಷ ಕೆ.ಎಸ್. ಶಾಂತೇಗೌಡ ಮಾತನಾಡಿ, ಮುಖ್ಯಮಂತ್ರಿ ಸಿದ್ದರಾಮಯ್ಯನವರು ಅನೇಕ ಜನಪರ ಬಡವರ್ಗದ ಜನರಿಗೆ ಅನೇಕ ಯೋಜನೆಗಳನ್ನು ಜಾರಿಗೆ ತಂದಿದ್ದಾರೆ. ಈ ವಿಚಾರಗಳ ಬಗ್ಗೆ ಗ್ರಾಮೀಣ ಪ್ರದೇಶದ ಬಡವರಿಗೆ ತಿಳಿ ಹೇಳುವ ಕೆಲಸವನ್ನು ಕಾರ್ಯಕರ್ತರು ಮಾಡಬೇಕು ಎಂದು ಹೇಳಿದರು.
ಮಾಜಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಂ.ಎಲ್. ಮೂರ್ತಿ ಅವರಿಗೆ ರಾಜ್ಯ ನಿಗಮ ಅಥವಾ ಮಂಡಳಿ ಅಧ್ಯಕ್ಷರನ್ನಾಗಿ ನೇಮಿಸುವಂತೆ ಸಭೆಯಲ್ಲಿ ಸರ್ವಾನುಮತದಿಂದ ನಿರ್ಣಯ ತೆಗೆದುಕೊಳ್ಳಲಾಯಿತು. ಈ ಬಗ್ಗೆ ಕೆಪಿಸಿಸಿ ಅಧ್ಯಕ್ಷರು ಹಾಗೂ ಮುಖ್ಯಮಂತ್ರಿಗಳಿಗೆ ನಿರ್ಣಯದ ಪ್ರತಿ ಕಳುಹಿಸಲು ತೀರ್ಮಾನಿಸಲಾಯಿತು.
ನೂತನ ಜಿಲ್ಲಾಧ್ಯಕ್ಷ ಡಾ. ವಿಜಯಕುಮಾರ್ ಅವರನ್ನು ಅಭಿನಂದಿಸಲಾಯಿತು. ಸಭೆಯಲ್ಲಿ ಜಿಲ್ಲಾ ಮುಖಂಡ ವನಮಾಲ, ಮಂಜುನಾಥ್, ಶ್ರೀಧರ್, ನಗರಸಭಾ ಸದಸ್ಯ ಲಕ್ಷ್ಮಣ್, ರೂಬಿನ್ ಮೊಸೆಸ್, ಎಚ್.ಎಸ್. ಪುಟ್ಟಸ್ವಾಮಿ, ಸುರೇಖಾ ಸಂಪತ್ರಾಜ್ ಮಾತನಾಡಿದರು. ಜೇಮ್ಸ್ ಡಿಸೋಜಾ ಸ್ವಾಗತಿಸಿದರು, ಹಿರೇಮಗಳೂರು ರಾಮಚಂದ್ರ ವಂದಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

