ಇಂದು ಕೆಡಿಪಿ ಸಭೆ
ಚಿಕ್ಕಮಗಳೂರು: ಚಿಕ್ಕಮಗಳೂರು ತಾಪಂ ಕೆಡಿಪಿ ಸಭೆ ಡಿ.6ರಂದು ಶುಕ್ರವಾರ ಬೆಳಗ್ಗೆ 11 ಗಂಟೆಗೆ ತಾಂಪಂ ಸಭಾಂಗಣದಲ್ಲಿ ತಾಪಂ ಅಧ್ಯಕ್ಷೆ ಅಂಬಿಕಾ ಶಿವಕುಮಾರ್ ಅಧ್ಯಕ್ಷತೆಯಲ್ಲಿ ನಡೆಯಲಿದೆ.
ಫಲಪುಷ್ಪ ಪ್ರದರ್ಶನ ವಿವಿಧ ಸ್ಪರ್ಧೆ
ಫಲಪುಷ್ಪ ಪ್ರದರ್ಶನ ಜ.26 ರಿಂದ 28ರವರೆಗೆ ನಗರದ ಜಿಲ್ಲಾ ತೋಟಗಾರಿಕೆ ಇಲಾಖೆ ಆವರಣದಲ್ಲಿ ನಡೆಯಲಿದ್ದು, ಜಿಲ್ಲೆಯ ರೈತ ಬಾಂಧವರು, ನಾಗರಿಕರು, ಸಂಘ ಸಂಸ್ಥೆಗಳು ವಿವಿಧ ಸ್ಪರ್ಧೆಯಲ್ಲಿ ಭಾಗವಹಿಸಬಹುದಾಗಿದೆ. ಫಲಪುಷ್ಪ ಪ್ರದರ್ಶನದಲ್ಲಿ ಅಲಂಕಾರಿಕ ತೋಟಗಳ (ಎಸ್ಟೇಟ್ ಹಾಗೂ ನಗರ) ಸ್ಪರ್ಧೆ, ಪ್ರದರ್ಶನ ಆವರಣದಲ್ಲಿ ಕುಂಡಗಳ ಜೋಡಣೆ, ತರಕಾರಿ-ಹಣ್ಣುಗಳಲ್ಲಿ ಕೆತ್ತನೆ ಹಾಗೂ ಜೋಡಣೆ ಸ್ಪರ್ಧೆ ನಡೆಸಲಾಗುವುದು. ಆಸಕ್ತರು ತಮ್ಮ ಹೆಸರನ್ನು ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರ ಕಚೇರಿ (ರಾಜ್ಯ ವಲಯ) ಕೆಎಂ ರಸ್ತೆ, ಬೋಳರಾಮೇಶ್ವರ ದೇವಸ್ಥಾನದ ಹತ್ತಿರ, ಚಿಕ್ಕಮಗಳೂರು ಅಥವಾ ತೋಟಗಾರಿಕೆ ಉಪ ನಿರ್ದೇಸಕರು (ಜಿಪಂ) ಚಿಕ್ಕಮಗಳೂರು ಇಲ್ಲಿ ನೋಂದಾಯಿಸಿಕೊಳ್ಳುವಂತೆ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಅರ್ಜಿ ಆಹ್ವಾನ
ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ನ್ಯಾಷನಲ್ ಇನ್ಸ್ಟಿಟಿಯೂಟ್ ಆಫ್ ಫ್ಯಾಷನ್ ಟೆಕ್ನಾಲಜಿ ಬೆಂಗಳೂರು ವತಿಯಿಂದ ತರಬೇತಿ ನೀಡಲು ಅರ್ಹ ನಿರುದ್ಯೋಗಿ ಮಹಿಳಾ ಮತ್ತು ಪುರುಷ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಗಾರ್ಮೆಂಟ್ ಮ್ಯಾನ್ಯುಫ್ಯಾಕ್ಚರಿಂಗ್ ಟೆಕ್ನಾಲಜಿ, ಅಪರೆಲ್ ಕ್ವಾಲಿಟಿ ಕಂಟ್ರೋಲ್, ಗಾರ್ಮೆಂಟ್ ಕನ್ಟ್ರ್ಸಕ್ಷನ್, ಇಂಡಸ್ಟ್ರಿಯಲ್ ಪ್ಯಾಟರ್ನ್ ತರಬೇತಿಗೆ ಅರ್ಜಿ ಸಲ್ಲಿಸಲು ಡಿ. 10 ಕೊನೆದಿನ. ದೂ.ಸಂ. 08262- 220922 ಇವರನ್ನು ಸಂಪರ್ಕಿಸಿ.
ಮಾನವ ಹಕ್ಕು ದಿನಾಚರಣೆ ಪೂರ್ವಭಾವಿ ಸಭೆ
ಚಿಕ್ಕಮಗಳೂರು: ವಿಶ್ವ ಮಾನವ ಹಕ್ಕುಗಳ ದಿನದ ಅಂಗವಾಗಿ ಡಿ.10ರಂದು ಮಾನವ ಹಕ್ಕು ದಿನಾಚರಣೆಯನ್ನು ಆಚರಿಸಲಾಗುವುದು ಎಂದು ಜಿಲ್ಲಾಧಿಕಾರಿ ಬಿ.ಎಸ್. ಶೇಖರಪ್ಪ ಹೇಳಿದರು.
ತಮ್ಮ ಕಚೇರಿ ಸಭಾಂಗಣದಲ್ಲಿ ಗುರುವಾರ ನಡೆದ ಮಾನವ ಹಕ್ಕು ದಿನಾಚರಣೆಯ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಅಧಿಕಾರಿಗಳು, ನೌಕರರು, ಸಾರ್ವಜನಿಕರು ಹಾಗೂ ಸ್ಥಳೀಯ ಸರ್ಕಾರೇತರ ಸಂಘ ಸಂಸ್ಥೆಗಳಿಗೆ ಮಾನವ ಹಕ್ಕುಗಳ ಬಗ್ಗೆ ಅರಿವು ಮೂಡಿಸುವುದಕ್ಕಾಗಿ ಮಾನವ ಹಕ್ಕುಗಳ ದಿನಾಚರಣೆಯನ್ನು ಡಿ.10ರಂದು ಬೆಳಗ್ಗೆ 10 ಗಂಟೆಗೆ ನಗರದ ಅಂಬೇಡ್ಕರ್ ಭವನದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದರು.
ಕಾರ್ಯಕ್ರಮದಲ್ಲಿ ಮಾನವ ಹಕ್ಕುಗಳ ಸಂರಕ್ಷಣೆಯ ಬಗ್ಗೆ ಅನುಭವಿ ಸಂಪನ್ಮೂಲ ವ್ಯಕ್ತಿಗಳಿಂದ ಉಪನ್ಯಾಸ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗುವುದು ಎಂದ ಅವರು, ಸಾರ್ವಜನಿಕರು ಹಾಗೂ ಸಂಘ ಸಂಸ್ಥೆಯ ಪ್ರತಿನಿಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕೆಂದು ಮನವಿ ಮಾಡಿದರು.
ಇದೇ ವೇಳೆ ಕಾರ್ಯಕ್ರಮದ ಯಶಸ್ಸಿಗೆ ವಿವಿಧ ಉಪ ಸಮಿತಿಗಳನ್ನು ರಚಿಸಲಾಯಿತು. ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಕೆ.ಪಿ. ಹೊನಕೇರಿ, ಚನ್ನಬಸಪ್ಪ, ಜಿ. ಅನುರಾಧ, ಕಾರ್ಮಿಕ ಆಯುಕ್ತೆ ಶ್ರೀವಳ್ಳಿ ಹಾಗೂ ಅಧಿಕಾರಿಗಳು ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

