ಪಕ್ಷ ಸಂಘಟನೆಗೆ ಕಾರ್ಯಕರ್ತರು ಸಜ್ಜಾಗಿ: ಶಾಂತೇಗೌಡ
ಚಿಕ್ಕಮಗಳೂರು: ಮುಂಬರಲಿರುವ ಲೋಕಸಭೆ ಚುನಾವಣೆಯಲ್ಲಿ ಜಯಭೇರಿ ಸಾಧಿಸಲು ಪಕ್ಷವನ್ನು ಸಂಘಟಿಸಿ ಸಜ್ಜುಗೊಳಿಸಲು ಕಾರ್ಯಕರ್ತರು ಕಾರ್ಯ ಪ್ರವೃತ್ತರಾಗಬೇಕು ಎಂದು ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಕೆ.ಎಸ್. ಶಾಂತೇಗೌಡ ಸಲಹೆ ಮಾಡಿದರು.
ಚಿಕ್ಕಮಗಳೂರು ವಿಧಾನಸಭಾ ಕ್ಷೇತ್ರದ ನಿಡಘಟ್ಟದ ಕಾಂಗ್ರೆಸ್ ಮುಖಂಡ ರಾಜಣ್ಣ ಅವರ ಮನೆ ಆವರಣದಲ್ಲಿ ಬುಧವಾರ ನಡೆದ ಸಖರಾಯಪಟ್ಟಣ ಬ್ಲಾಕ್ ಕಾಂಗ್ರೆಸ್ ಸಭೆಯಲ್ಲಿ ಅವರು ಮಾತನಾಡಿ, ಸದಸ್ಯತ್ವ ಆಂದೋಲನ ನಡೆಯುತ್ತಿದೆ. ಎಲ್ಲ ವರ್ಗದ ಜನರಿಗೆ ಸದಸ್ಯತ್ವವನ್ನು ನೀಡಬೇಕು. ನಿಗದಿತ ಅವಧಿಯೊಳಗೆ ಸದಸ್ಯತ್ವ ಪುಸ್ತಕಗಳನ್ನು ಹಿಂದಿರುಗಿಸಬೇಕು. ನಮ್ಮ ಗುರಿ ಮುಂಬರಲಿರುವ ಲೋಕಸಭೆ ಚುನಾವಣೆಯಲ್ಲಿ ಕೇಂದ್ರೀಕೃತವಾಗಬೇಕಿದೆ ಎಂದು ಹೇಳಿದರು.
ಚಿಕ್ಕಮಗಳೂರು ನಗರಸಭೆ ಸದಸ್ಯ ಎಚ್.ಎಸ್. ಪುಟ್ಟಸ್ವಾಮಿ ಮಾತನಾಡಿ, ಶಾಸಕರು ಎಂಟು ನೂರು ಕೋಟಿ ಹಣ ತಂದು ಅಭಿವೃದ್ಧಿಪಡಿಸಿರುವುದಾಗಿ ಚುನಾವಣೆಯಲ್ಲಿ ಸುಳ್ಳು ಹೇಳುವ ಮೂಲಕ ಗೆದ್ದು ಬಂದರು. ಆದರೆ, ಕರಗಡ ಏತ ನೀರಾವರಿ ಯೋಜನೆಗೆ ಅಗತ್ಯ ಹಣವನ್ನು ಕೊಡಿಸಲು ಅವರಿಂದ ಸಾಧ್ಯವಾಗಲಿಲ್ಲ ಏಕೆ ಎಂದು ಪ್ರಶ್ನಿಸಿದ ಅವರು, ಮೆಡಿಕಲ್ ಕಾಲೇಜು, ಎಂಜಿನಿಯರಿಂಗ್ ಕಾಲೇಜು ಹೆಸರಿನಲ್ಲಿ ಶಾಸಕರು ವೋಟ್ ರಾಜಕಾರಣ ಮಾಡಿದರು ಎಂದು ಆರೋಪಿಸಿದರು.
ಅಧ್ಯಕ್ಷತೆ ವಹಿಸಿದ್ದ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೆಂಗೇಗೌಡ ಮಾತನಾಡಿ, ಸರಕಾರದ ವಿವಿಧ ನಿಗಮ ಮಂಡಳಿಗಳ ನಾಮನಿರ್ದೇಶನದ ಸಂದರ್ಭದಲ್ಲಿ ಪಕ್ಷದ ಕಾರ್ಯಕರ್ತರನ್ನು ಗುರುತಿಸುವ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ಗಮನಕ್ಕೆ ತರಬೇಕು. ಕಾರ್ಯಕರ್ತರ ಕಾರ್ಯಗಳಿಗೆ ಹೆಚ್ಚಿನ ಮನ್ನಣೆ ನೀಡಬೇಕು ಎಂದು ಹೇಳಿದರು.
ಜಿಪಂ ಮಾಜಿ ಸದಸ್ಯ ಎನ್.ಎಂ. ಅಣ್ಣೇಗೌಡ ಮಾತನಾಡಿದರು.
ಅಂಬೇಡ್ಕರ್ ಯುವಜನ ಸಂಘ ಸ್ಥಾಪಿಸುವ ಕುರಿತು ಮತ್ತು ಹೋಬಳಿ ವ್ಯಾಪ್ತಿಯಲ್ಲಿನ ಪ್ರಮುಖ ಸಮಸ್ಯೆಗಳ ಪರಿಹಾರಕ್ಕೆ ಒತ್ತಾಯಿಸಿ ಕಾರ್ಯಕರ್ತರು ಶಾಂತೇಗೌಡ ಅವರಿಗೆ ಮನವಿಗಳನ್ನು ಸಲ್ಲಿಸಿದರು. ಜಿಪಂ ಮಾಜಿ ಸದಸ್ಯೆ ಹೇಮಾವತಿ, ಜಿಲ್ಲಾ ಕಾಂಗ್ರೆಸ್ ಕಾರ್ಯದರ್ಶಿ ಚಂದ್ರಶೇಖರ್, ಚಂದ್ರಣ್ಣ, ಕುಮಾರ್, ರಾಜಣ್ಣ, ಮುಖಂಡರಾದ ಹೊನ್ನಬೋವಿ, ಎನ್.ಡಿ. ಚಂದ್ರಪ್ಪ, ಚಟ್ನಳ್ಳಿ ಮಂಜುನಾಥ್, ಚನ್ನಬಸಪ್ಪ, ಎಚ್.ಆರ್. ಮೂರ್ತಿ ಮಾತನಾಡಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

