ದತ್ತಮಾಲಾ ಅಭಿಯಾನಕ್ಕೆ ಚಾಲನೆ
ಕ.ಪ್ರ.ವಾರ್ತೆ ಟಿ ಚಿಕ್ಕಮಗಳೂರು ಟಿ ಡಿ.7
ಸಂಘ ಪರಿವಾರ ನೇತೃತ್ವದ ದತ್ತಮಾಲಾ ಅಭಿಯಾನಕ್ಕೆ ಶನಿವಾರ ಚಾಲನೆ ನೀಡಲಾಯಿತು.
ನಗರದ ಕಾಮಧೇನು ಗಣಪತಿ ದೇವಾಲಯದಲ್ಲಿ ಹೋಮ, ಹವನ ಹಾಗೂ ಪೂಜೆ ಸಲ್ಲಿಸಿ ಬಜರಂಗದಳ ರಾಜ್ಯ ಸಂಚಾಲಕ ಸೂರ್ಯನಾರಾಯಣ ಅವರ ನೇತೃತ್ವದಲ್ಲಿ ವಿಎಚ್ಪಿ ಜಿಲ್ಲಾ ಕಾರ್ಯದರ್ಶಿ ಶಿವಶಂಕರ್ ಸೇರಿದಂತೆ ಬಜರಂಗದಳ ಹಾಗೂ ವಿಶ್ವ ಹಿಂದೂ ಪರಿಷತ್ ಕಾರ್ಯಕರ್ತರು ದತ್ತಮಾಲೆ ಧರಿಸಿದರು. ಇದೇ ಸಂದರ್ಭದಲ್ಲಿ ಶಾಸಕ ಸಿ.ಟಿ. ರವಿ, ಬಿಜೆಪಿ ಚಿಕ್ಕಮಗಳೂರು ನಗರಾಧ್ಯಕ್ಷ ವರಸಿದ್ದಿ ವೇಣುಗೋಪಾಲ್ ಹಾಜರಿದ್ದರು.
ಇದೇ ಸಂದರ್ಭದಲ್ಲಿ ಮಾತನಾಡಿದ ಸೂರ್ಯನಾರಾಯಣ್, ಪ್ರತಿ ವರ್ಷದಂತೆ ಈ ಬಾರಿಯೂ ದತ್ತ ಜಯಂತಿ ಉತ್ಸವ ಅತ್ಯಂತ ವಿಜೃಂಭಣೆಯಿಂದ ಆಚರಿಸಲು ಸಂಘಟನೆ ತೀರ್ಮಾನ ತೆಗೆದುಕೊಂಡಿದೆ. ಉತ್ಸವದ ಯಶಸ್ವಿಗಾಗಿ ರಾಜ್ಯಾದ್ಯಂತ ಬೈಠಕ್ ನಡೆಸಲಾಗಿದೆ ಎಂದು ಹೇಳಿದರು.
ಡಿ. 14 ರಂದು ದತ್ತಪೀಠದಲ್ಲಿ ಅನುಸೂಯದೇವಿ ಜಯಂತಿ ನಡೆಯಲಿದ್ದು, ರಾಜ್ಯದ ವಿವಿಧೆಡೆಗಳಿಂದ ಮಾತೆಯರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವ ನಿರೀಕ್ಷೆ ಇದೆ. ಚಿಕ್ಕಮಗಳೂರಿನಲ್ಲಿ ಡಿ. 15 ರಂದು ಶೋಭಾಯಾತ್ರೆ ನಡೆಯಲಿದ್ದು, ಇದರ ಅಂಗವಾಗಿ ನಡೆಯಲಿರುವ ಧಾರ್ಮಿಕ ಸಭೆಯನ್ನು ಆಜಾದ್ ಪಾರ್ಕ್ ವೃತ್ತದಲ್ಲಿ ನಡೆಸಲು ಜಿಲ್ಲಾಡಳಿತಕ್ಕೆ ಅನುಮತಿ ಕೋರಲಾಗಿದೆ. ಈವರೆಗೆ ಒಪ್ಪಿಗೆ ದೊರೆತಿಲ್ಲ ಎಂದು ತಿಳಿಸಿದರು.
ದತ್ತಪೀಠದಲ್ಲಿ ತ್ರಿಕಾಲ ಪೂಜೆ ನಡೆಯಬೇಕು. ಹಿಂದು ಅರ್ಚಕರ ನೇಮಕ ಸೇರಿದಂತೆ ವಿವಿಧ ಬೇಡಿಕೆಗಳನ್ನು ಸರ್ಕಾರ ಈಡೇರಿಸಬೇಕು ಎಂದು ಹೇಳಿದರು.
ವಿಎಚ್ಪಿ ಜಿಲ್ಲಾ ಕಾರ್ಯದರ್ಶಿ ಶಿವಶಂಕರ್ ಮಾತನಾಡಿ, ಆಜಾದ್ ಪಾರ್ಕ್ ವೃತ್ತದಲ್ಲಿ ಧಾರ್ಮಿಕ ಸಭೆ ನಡೆಸಲು ಅನುಮತಿ ಕೇಳಿದ್ದೇವೆ ಎಂದು ತಿಳಿಸಿದರು.
ದತ್ತಪೀಠದ ಗುಹೆಯೊಳಗೆ ಮಠಾಧೀಶರುಗಳಿಗೆ ಪ್ರವೇಶಿಸಲು ಅವಕಾಶ ನೀಡಬೇಕು. ದತ್ತ ಗುಹೆಯ ಮುಂಭಾಗದಲ್ಲೇ ಹೋಮ- ಹವನ ಹಾಗೂ ಪೂಜೆಗೆ ಅವಕಾಶ ನೀಡಬೇಕು ಎಂದು ಆಗ್ರಹಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

