ಚಿಕ್ಕಮಗಳೂರು

ಚಂಪಾಷಷ್ಠಿ ಬ್ರಹ್ಮರಥೋತ್ಸವ

Published On :

ಸುಬ್ರಹ್ಮಣ್ಯ: ಕುಕ್ಕೆಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಭಾನುವಾರ ಮುಂಜಾನೆ  ಸಂಭ್ರಮದ ಚಂಪಾಷಷ್ಠಿ ಬ್ರಹ್ಮರಥೋತ್ಸವ ನೆರವೇರಿತು. ಮೊದಲು ದೇವಳದ ಹೊರಾಂಗಣದಲ್ಲಿ ಕುಕ್ಕೆ ಸುಬ್ರಹ್ಮಣ್ಯ ಮತ್ತು ಉಮಾಮಹೇಶ್ವರ ದೇವರ ಪಲ್ಲಕ್ಕಿ ಉತ್ಸವ ನೆರವೇರಿತು. ನಂತರ ರಾಜಬೀದಿಯಲ್ಲಿ ನಾಗಸ್ವರ, ಪಂಚವಾದ್ಯ, ಬ್ಯಾಂಡ್, ಜಾಗಟೆ, ಶಂಖ ವಾದ್ಯ ಮತ್ತು ಚೆಂಡೆ ವಾದನಗಳ ಹಿಮ್ಮೇಳದಲ್ಲಿ ಸಾಲಂಕೃತ ಆನೆ, ಬಿರುದಾವಳಿ, ಭಕ್ತಜನರ ಜಯಘೋಷದ ನಡುವೆ ಬೆಳಗ್ಗೆ 8.12ರ ಧನುರ್ಲಗ್ನ ಸುಮುಹೂರ್ತದಲ್ಲಿ ಶ್ರೀ ಸುಬ್ರಹ್ಮಣ್ಯ ಸ್ವಾಮಿಯು ಬ್ರಹ್ಮ ರಥಾರೂಢರಾದರು. ಪಂಚಮಿರಥದಲ್ಲಿ ಉಮಾಮಹೇಶ್ವರ ದೇವರು ಆಸೀನರಾದರು. ಶ್ರೀ ದೇವಳದ ಪ್ರಧಾನ ಅರ್ಚಕ ವೇದಮೂರ್ತಿ ಕೇಶವ ಜೋಗಿತ್ತಾಯರು ಶ್ರೀದೇವರಿಗೆ ಸುವರ್ಣವೃಷ್ಟಿಗೈದರು. ಭಕ್ತಾಧಿಗಳಿಗೆ ಧನ, ಕನಕ, ಹೂವು, ಫಲವಸ್ತು ಪ್ರಸಾದಗಳನ್ನು ಅರ್ಚಕರು ರಥದಿಂದ ಎಸೆದರು. ಭಕ್ತಾಧಿಗಳು ನಾಣ್ಯ, ಕಾಳು ಮೆಣಸು, ಸಾಸಿವೆಗಳನ್ನು ರಥಕ್ಕೆ ಎಸೆದರು. ಬಳಿಕ ಪ್ರಥಮವಾಗಿ ಪಂಚಮಿ ರಥೋತ್ಸವ ನೆರವೇರಿತು.
575 ಮಂದಿ ಭಕ್ತರಿಂದ ಮಡೆಸ್ನಾನ: ಪುಣ್ಯ ಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಚಂಪಾಷಷ್ಠಿ ಜಾತ್ರೋತ್ಸವದ ಷಷ್ಠಿ ದಿನವಾದ ಭಾನುವಾರ ಸುಮಾರು 575 ಭಕ್ತರು ಮಡೆಸ್ನಾನ ಸೇವೆ ಸಲ್ಲಿಸಿದರು.  ಮಧ್ಯಾಹ್ನ ಮಹಾಪೂಜೆ ಬಳಿಕ ಹೊರಾಂಗಣದಲ್ಲಿ ಬ್ರಾಹ್ಮಣರು ಉಂಡ ಎಂಜಲೆಲೆ ಮೇಲೆ ದರ್ಪಣ ತೀರ್ಥದಲ್ಲಿ ಸ್ನಾನ ಮಾಡಿ ನಿಂತದ್ದ ಅಪಾರ ಸಂಖ್ಯೆಯ ಭಕ್ತರು ಮಡೆಸ್ನಾನ ಸೇವೆ ಸಲ್ಲಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.