ಚಿಕ್ಕಮಗಳೂರು

ಶೀಘ್ರವೇ ರಸ್ತೆ ಕಾಮಗಾರಿ ಪ್ರಾರಂಭ

Published On :

ಕೊಪ್ಪ: ರಾಜ್ಯ ಹೆದ್ದಾರಿ ಅಭಿವೃದ್ಧಿ ಯೋಜನೆಯಡಿಯಲ್ಲಿ ಆಲ್ದೂರು- ಶೃಂಗೇರಿ ರಸ್ತೆ ಅಭಿವೃದ್ಧಿಗೆ 23 ಕೋಟಿ ಮಂಜೂರಾಗಿದ್ದು, ಕಾಮಗಾರಿ ಶೀಘ್ರದಲ್ಲೇ ಪ್ರಾರಂಭವಾಗುವುದು ಎಂದು ಜಿಪಂ ಮಾಜಿ ಅಧ್ಯಕ್ಷ ಟಿ.ಡಿ. ರಾಜೇಗೌಡ ತಿಳಿಸಿದರು. ಪ್ರವಾಸಿ ಮಂದಿರದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಸಂಸದ ಜಯಪ್ರಕಾಶ್ ಹೆಗ್ಡೆಯವರ ನೇತೃತ್ವದಲ್ಲಿ ಸಭೆ ಕರೆದು ಶೃಂಗೇರಿ ಕ್ಷೇತ್ರದಲ್ಲಿ ಹಾಳಾಗಿರುವ ರಸ್ತೆಗಳ ಪಟ್ಟಿ ಸಲ್ಲಿಸುವಂತೆ ಜಿಪಂ ಮತ್ತು ಲೋಕೋಪಯೋಗಿ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಪಟ್ಟಿಯ ಆಧಾರ ಮೇಲೆ ಶೃಂಗೇರಿ ಕ್ಷೇತ್ರದ ರಸ್ತೆ ದುರಸ್ತಿಗೆ ಸರ್ಕಾರ ಹಣ ಮಂಜೂರು ಮಾಡಿಸಿಕೊಡಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವರು ಭರವಸೆ ನೀಡಿದ್ದಾರೆ ಎಂದರು.ದಾರಿ ತಪ್ಪಿಸುವ ಕೆಲಸ: ಕಸ್ತೂರಿ ರಂಗನ್ ಆಯೋಗ ಸಲ್ಲಿಸಿರುವ ಶಿಫಾರಸು ವರದಿ ಈ ಭಾಗದ ಜನರ ನಿದ್ದೆಗೆಡಿಸಿದೆ. ಕಸ್ತೂರಿ ರಂಗನ್ ಆಯೋಗ ಬರುವುದಕ್ಕೆ ಮೂಲ ಕಾರಣ ಆಗಿನ ಬಿಜೆಪಿ ಸರ್ಕಾರವಾಗಿದೆ. ಶೃಂಗೇರಿ ಕ್ಷೇತ್ರ ಶಾಸಕರು ಕಸ್ತೂರಿ ರಂಗನ್ ವರದಿ ಜಾರಿಗೆ ತರಬಾರದು ಎಂದು ಶಾಸನ ಸಭೆಯಲ್ಲಿ ವಿರೋಧ ಮಾಡುವ ಬದಲು ಕ್ಷೇತ್ರದಲ್ಲಿ ಪ್ರತಿಭಟನೆಗೆ ಮುಂದಾಗುವ ಮೂಲಕ ಜನರನ್ನು ದಾರಿ ತಪ್ಪಿಸುವಂತಹ ಕೆಲಸವನ್ನು ಮಾಡುತ್ತಿದ್ದಾರೆ ಎಂದು ದೂರಿದರು.ಸುದ್ದಿಗೋಷ್ಠಿಯಲ್ಲಿ ತಾಲೂಕು ಬ್ಲಾಕ್ ಕಾಂಗ್ರೆಸ್ ಉಪಾಧ್ಯಕ್ಷ ಓಣಿತೋಟ ರತ್ನಕಾರ್, ಬಿಂತ್ರವಳ್ಳಿ ಗ್ರಾಪಂ ಮಾಜಿ ಅಧ್ಯಕ್ಷ ರವಿಕುಮಾರ್, ಕೊಪ್ಪ ಗ್ರಾಮಾಂತರ ಮಾಜಿ ಅಧ್ಯಕ್ಷ ಚಂದ್ರೇಗೌಡ, ಕಾಂಗ್ರೆಸ್ ಮುಖಂಡರಾದ ಬರ್ಕತ್, ಶಶಿಕುಮಾರ್, ಅಲ್ಪಸಂಖ್ಯಾತರ ಘಟಕದ ಮುಖಂಡ ಖದರ್ ಮತ್ತಿತರರು ಇದ್ದರು.
ಸುಬ್ರಮಣ್ಯ ಸ್ವಾಮಿ ರಥೋತ್ಸವ
ನರಸಿಂಹರಾಜಪುರ: ಅಗ್ರಹಾರದ ಮೆಣಸೂರು ಸುಬ್ರಮಣ್ಯ ಸ್ವಾಮಿ ರಥೋತ್ಸವವು ಸಾವಿರಾರು ಭಕ್ತರ ಸಮ್ಮುಖದಲ್ಲಿ ಧಾರ್ಮಿಕ ಕಾರ್ಯಕ್ರಮದೊಂದಿಗೆ ಭಾನುವಾರ ನಡೆಯಿತು.  ಬೆಳಿಗ್ಗೆ ಏಕದಶವಾರ ರುದ್ರಾಭಿಷೇಕ, ಪೂರ್ವಕ ವಿಶೇಷ ಪೂಜೆ, ಮಹಾ ಮಂಗಳಾರತಿ ನಂತರ ಮಧ್ಯಾಹ್ನ 12 ಗಂಟೆಗೆ ರಾಜಬೀದಿಯಲ್ಲಿ ರಥಾರೋಹಣ ನಡೆಯಿತು. ತಹಶೀಲ್ದಾರ್ ಕೃಷ್ಣಮೂರ್ತಿ ರಥಾರೋಹಣಕ್ಕೆ ಚಾಲನೆ ನೀಡಿದರು. ಸಾವಿರಾರು ಭಕ್ತರು ರಥಾರೋಹಣದಲ್ಲಿ ಪಾಲ್ಗೊಂಡಿದ್ದರು.  ನಂತರ ಭಕ್ತರು ತಮ್ಮ ಹರಕೆಯಂತೆ ಅಕ್ಕಿ, ಬೆಲ್ಲ, ಬಾಳೆಕಾಯಿ, ತೆಂಗಿನಕಾಯಿಯೊಂದಿಗೆ ತುಲಾ ಭಾರ ನಡೆಸಿದರು. ನಂತರ ಸರತಿ ಸಾಲಿನಲ್ಲಿ ಬಂದ ಭಕ್ತರು ತೀರ್ಥ ಸ್ನಾನ ಮಾಡಿದರು. ಪ್ರಸಾದ ವಿತರಣೆ ಮಾಡಲಾಯಿತು. ಸಂಜೆ ಮತ್ತೆ ರಾಜಬೀದಿಯಲ್ಲಿ ರಥೋತ್ಸವ,ಮಹಾ ಮಂಗಳಾರತಿ ನಡೆಯಿತು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.