ಭ್ರಷ್ಟಾಚಾರ ನಿಯಂತ್ರಣಕ್ಕೆ ಆಗ್ರಹ
ಕ.ಪ್ರ.ವಾರ್ತೆ, ಕಡೂರು, ಡಿ.9
ಸರ್ಕಾರಿ ಕಚೇರಿಗಳಲ್ಲಿ ಹೆಚ್ಚುತ್ತಿರುವ ಲಂಚದ ಹಾವಳಿ ನಿಯಂತ್ರಣ, ಕಡೂರು ಆಸ್ಪತ್ರೆಯಲ್ಲಿ ಖಾಲಿಯಿರುವ ತಜ್ಞ ವೈದ್ಯರ ಹುದ್ದೆ ನೇಮಕ ಸೇರಿದಂತೆ ಕನ್ನಡದ ನೆಲ, ಜಲ, ಭಾಷೆ ಉಳಿಸುವಲ್ಲಿ ಕಾಂಗ್ರೆಸ್ ಸರ್ಕಾರ ವಿಫಲವಾಗುತ್ತಿದೆ ಎಂದು ಆರೋಪಿಸಿ ತಾಲೂಕು ಕರವೇ ವತಿಯಿಂದ ಪಟ್ಟಣದಲ್ಲಿ ಮಾನವ ಸರಪಳಿ ನಿರ್ಮಿಸಿ ರಸ್ತೆ ತಡೆ ಚಳವಳಿ ನಡೆಸಿತು.
ಪಟ್ಟಣದ ಮರವಂಜಿ ವೃತ್ತದಿಂದ ನೂರಾರು ಕರವೇ ಕಾರ್ಯಕರ್ತರು ರಾಜ್ಯ ಸರ್ಕಾರವು ನೆಲ, ಜಲ, ಗಡಿ ರಕ್ಷಿಸುವಲ್ಲಿ ವಿಫಲವಾಗಿದೆ. ಲಂಚದ ಹಾವಳಿ ಹೆಚ್ಚಾಗುತ್ತಿದೆ ಎಂದು ಘೋಷಣೆ ಕೂಗುತ್ತಾ ರಾಷ್ಟ್ರೀಯ ಹೆದ್ದಾರಿ ಮೂಲಕ ಕೆ.ಎಲ್.ವಿ. ವೃತ್ತದವರೆಗೆ ಸಾಗಿ ಪೇಟೆ ಗಣಪತಿ ಆಂಜನೇಯ ದೇವಾಲಯದ ಬಳಿ ಮಾನವ ಸರಪಳಿ ನಿರ್ಮಿಸಿದರು.
ಇದೇ ಸಂದರ್ಭದಲ್ಲಿ ಕರವೇ ಅಧ್ಯಕ್ಷ ಸಿದ್ದಪ್ಪ ಮಾತನಾಡಿ, ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಕಾಂಗ್ರೆಸ್ ಸರ್ಕಾರವು ಭ್ರಷ್ಟಾಚಾರ ನಿಯಂತ್ರಿಸುವಲ್ಲಿ ವಿಫಲವಾಗಿದೆ. ಅಧಿಕಾರಿಗಳನ್ನು ಹಿಡಿತದಲ್ಲಿಟ್ಟುಕೊಳ್ಳುವಲ್ಲಿ ವಿಫಲವಾಗಿದೆ. ಸಾರ್ವಜನಿಕರು, ರೈತರು ಪ್ರತಿದಿನ ಕಚೇರಿಗೆ ಅಲೆದರೂ ಕೆಲಸ ಮಾಡಿಕೊಡಲು ಅಧಿಕಾರಿಗಳು ಸತಾಯಿಸುತ್ತಿದ್ದಾರೆ. ಪಹಣಿ ದಾಖಲೆ ವಿತರಣೆ ವಿಳಂಬ ನಿವಾರಣೆಗೆ ಹೆಚ್ಚಿನ ಕೌಂಟರ್ ತೆರೆಯಬೇಕು. ಈ ಬಗ್ಗೆ ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಆರೋಪಿಸಿದರು.
ಆನಂತರ ಜೈನ್ ದೈವಾಲಯ ರಸ್ತೆ ಮೂಲಕ ಸಾಗಿದ ಪ್ರತಿಭಟನಾಕಾರರು ತಾಲೂಕು ಕಚೇರಿ ಮುಂದೆ ಜಮಾಯಿಸಿ ತಹಸೀಲ್ದಾರರಿಗೆ ಮನವಿ ಸಲ್ಲಿಸಿದರು. ಪುರಸಭೆ ಮತ್ತು ತಾಲೂಕು ವ್ಯಾಪ್ತಿಯ ಗ್ರಾಮೀಣ ರಸ್ತೆ ದುರಸ್ತಿ ಮಾಡಬೇಕು. ಪಟ್ಟಣದಲ್ಲಿ ನೈರ್ಮಲ್ಯ ಕಾಪಾಡಲು ಚರಂಡಿಗಳ ಶುಚಿಕಾರ್ಯ ಕೈಗೊಳ್ಳಬೇಕು. ಕಡೂರು ಪುರಸಭೆ ಎದುರಿರುವ ಖಾಸಗಿ ಬಸ್ ನಿಲ್ದಾಣವನ್ನು ಹಳೇ ಎಪಿಎಂಸಿ ಆವರಣಕ್ಕೆ ಸ್ಥಳಾಂತರಿಸಬೇಕು. ಕಡೂರು- ಚಿಕ್ಕಮಗಳೂರು ರಸ್ತೆ ಗುಂಡಿ ಗೊಟರು ಬಿದ್ದು ಹಾಳಾಗಿದ್ದು, ಶೀಘ್ರ ದುರಸ್ತಿಗೊಳಿಸಬೇಕು ಹಾಗೂ ಸಂಬಂಧಿಸಿದ ಇಲಾಖಾಧಿಕಾರಿಗಳಿಗೆ ಸೂಕ್ತ ಕ್ರಮಕ್ಕೆ ಆದೇಶಿಸಬೇಕು ಎಂದು ಮನವಿಯಲ್ಲಿ ತಿಳಿಸಲಾಗಿದೆ.
ಸಿದ್ದಪ್ಪ, ಶೈಲಜಾ, ಎಂ.ಟಿ. ಲತಾ, ಜಿ. ಶ್ರೀನಿವಾಸ್, ಈಶ್ವರ್, ಜಿ. ಸುಧಾಕರ್ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು. ಕರವೇ ಬಿ.ಕೆ. ರಾಜಪ್ಪ, ರಾಜು, ರಮೇಶ್, ಆರ್. ಉಲ್ಲಾಸ್, ಡಿ.ಜಿ. ಶೋಭಾರಾಣಿ, ಬಿ.ವೈ. ಸಂದೀಪ್, ಇ. ಸ್ವಾಮಿ, ಜಿ.ಎಸ್. ಮಂಜುನಾಥ್, ದಾದಾಪೀರ್, ಚೇತನ್, ಟಿ.ಜಿ. ಜಗನ್ನಾಥ್ ಅನೇಕರು ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

