ಚಿಕ್ಕಮಗಳೂರು

ಸುದ್ದಿ ಸಂಕ್ಷೇಪ

Published On :

ರಸಪ್ರಶ್ನೆ ಸ್ಪರ್ಧೆಗೆ ಸೃಜನ್, ಕಾರ್ತೀಕ್
ಕೊಪ್ಪ:  ಸೋಮವಾರ ಮೈಸೂರಿನಲ್ಲಿ ಪದವಿಪೂರ್ವ ಶಿಕ್ಷಣ ಇಲಾಖೆ ನಡೆಸಿದ ಸಹಪಠ್ಯ ಹಾಗೂ ಪಠ್ಯೇತರ ಚಟುವಟಿಕೆಗಳ ವಿಭಾಗಮಟ್ಟದ ಸ್ಪರ್ಧೆಯಲ್ಲಿ ಕೊಪ್ಪ ಜಿಜೆಸಿಯ ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿಗಳಾದ ಸೃಜನ್ ರಾಘವ್ ಹಾಗೂ ಕಾರ್ತಿಕ್ ಎಂ.ಕೆ. ರಸಪ್ರಶ್ನೆ ವಿಭಾಗದಲ್ಲಿ ಪ್ರಥಮ ಸ್ಥಾನ ಗಳಿಸಿ ರಾಜ್ಯ ಮಟ್ಟಕ್ಕೆ ಅಯ್ಕೆಯಾಗಿದ್ದರೆ.
ರಾಜ್ಯಾದ್ಯಂತ ಮೋದಿ ಅಲೆ: ವಿಕಾಸ್
ಚಿಕ್ಕಮಗಳೂರು: ಸದೃಢ ದೇಶ ನಿರ್ಮಾಣಕ್ಕೆ ಮತ್ತು ಭಾರತೀಯ ಸಂಸ್ಕೃತಿಯ ಉಳಿವಿಗಾಗಿ ಯುವಕರು ಸ್ವಪ್ರೇರಿತವಾಗಿ ಸಂಘಟನೆಗೆ ಮುಂದಾಗಬೇಕೆಂದು ಬಿಜೆಪಿ ಯುವ ಮೋರ್ಚಾ ರಾಷ್ಟ್ರೀಯ ಕಾರ್ಯದರ್ಶಿ ವಿಕಾಸ್ ಪುತ್ತೂರು ಹೇಳಿದ್ದಾರೆ. ನಗರದ ಪಾಂಚಜನ್ಯ ಕಚೇರಿಯಲ್ಲಿ ಬಿಜೆಪಿ ಯುವ ಮೋರ್ಚಾ ಜಿಲ್ಲಾ ಕಾರ್ಯಕಾರಣಿ ಸಭೆಯನ್ನು ಮಂಗಳವಾರ ಉದ್ಘಾಟಿಸಿ ಮಾತನಾಡಿದ ಅವರು, ಮುಂಬರುವ ಚುನಾವಣೆಗೆ ದೇಶ ಮತ್ತು ರಾಜ್ಯದಲ್ಲಿ ನರೇಂದ್ರ ಮೋದಿಯವರ ಅಲೆ ಇದ್ದು ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರು ಹೆಚ್ಚು ಕ್ರಿಯಾಶೀಲರಾಗಿ ಕೆಲಸ ಮಾಡುವಂತೆ ತಿಳಿಸಿದರು. ಕರ್ನಾಟಕದಲ್ಲಿ ಕೃಷಿ ಶೇ.2 ರಷ್ಟಿದ್ದರೆ, ಗುಜರಾತ್‌ನಲ್ಲಿ ಶೇ.12.8 ರಷ್ಟು ಕೃಷಿ ಅವಲಂಬಿಸಿ ಮಾದರಿಯಾಗಿದೆ. 272 ಲೋಕಸಭಾ ಕ್ಷೇತ್ರಗಳಲ್ಲಿ ಪಕ್ಷದ ಅಭ್ಯರ್ಥಿಗಳನ್ನು ಗೆಲ್ಲಿಸಲು ಬಿಜೆಪಿಯ ಎಲ್ಲಾ ಕಾರ್ಯಕರ್ತರು ಒಗ್ಗಟ್ಟಿನಿಂದ ಕೆಲಸ ಮಾಡಬೇಕು ಎಂದರು.
ಆರೋಗ್ಯ ತಪಾಸಣೆ
ನರಸಿಂಹರಾಜಪುರ: ಬಿ.ಪಿ.ಎಲ್.ಕಾರ್ಡುದಾರರಿಗೆ ಉಚಿತವಾಗಿ ವಾಜಪೇಯಿ ಆರೋಗ್ಯ ಶ್ರೀ ಕಾರ್ಯಕ್ರಮದಡಿ ಸರ್ಕಾರಿ ಆಸ್ಪತ್ರೆಯಲ್ಲಿ ಆರೋಗ್ಯ ತಪಾಸಣೆ ಕಾರ್ಯಕ್ರಮವು ಡಿಸೆಂಬರ್ 11 ರಂದು ನಡೆಯಲಿದೆ. ಬೆಳಿಗ್ಗೆ 9 ರಿಂದ ಸಂಜೆ 4 ಗಂಟೆಯವರೆಗೆ ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ಜಸ್ಟೀಸ್ ಕೆ.ಎಸ್. ಹೆಗಡೆ ಚಾರಿಟಬಲ್ ಆಸ್ಪತ್ರೆ ತಜ್ಞ ವೈದ್ಯರು ತಪಾಸಣೆ ಮಾಡಲಿದ್ದಾರೆ. ಬಿಪಿಎಲ್ ಕಾರ್ಡುದಾರರು ಈ ಅವಕಾಶ ಸದುಪಯೋಗ ಪಡೆದುಕೊಳ್ಳುವಂತೆ ಪ್ರಕಟಣೆ ತಿಳಿಸಿದೆ.
ಎಟಿಎಂ ಉದ್ಘಾಟನೆ
ಕೊಪ್ಪ: ಕೊಪ್ಪ ಬಸ್ ನಿಲ್ದಾಣ ಮುಂಭಾಗದ ಪಟ್ಟಣ ಪಂಚಾಯಿತಿ ವಾಣಿಜ್ಯ ಸಂಕೀರ್ಣದಲ್ಲಿ ಕರ್ಣಾಟಕ ಬ್ಯಾಂಕ್‌ನ ಎಟಿಎಂ ಕೇಂದ್ರವನ್ನು ಮಂಗಳವಾರ ಬ್ಯಾಂಕ್‌ನ ಶಿವಮೊಗ್ಗ ವಿಭಾಗದ ಮುಖ್ಯಸ್ಥ ರಂಗನಾಥ್ ಉದ್ಘಾಟಿಸಿದರು. ವ್ಯವಸ್ಥಾಪಕ ನಾಗಭೂಷಣ್, ಉದ್ಯಮಿ ಎಚ್.ವೆಂಕಟೇಶ್, ಪಪಂ ಸದಸ್ಯರು ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.