ಚಿಕ್ಕಮಗಳೂರು

ಬ್ಯಾನರ್ ತೆರವು: ಬಜರಂಗದಳ ಪ್ರತಿಭಟನೆ

Published On :

ಕ.ಪ್ರ.ವಾರ್ತೆ  ಚಿಕ್ಕಮಗಳೂರು  ಡಿ.10
ಬಜರಂಗದಳ ಹಾಗೂ ವಿಶ್ವಹಿಂದೂ ಪರಿಷತ್ ಹಮ್ಮಿಕೊಂಡಿರುವ ದತ್ತಮಾಲಾ ಅಭಿಯಾನ ಹಾಗೂ ದತ್ತಜಯಂತಿ ಸಮೀಪಿಸುತ್ತಿದೆ. ಇದಕ್ಕಾಗಿ ನಗರದೆಲ್ಲೆಡೆ ಕೇಸರಿ ಬಂಟಿಂಗ್ಸ್, ಬ್ಯಾನರ್‌ಗಳು, ಭಗವಾಧ್ವಜಗಳು ರಾರಾಜಿಸುತ್ತಿವೆ.
ಚಿಕ್ಕಮಗಳೂರು ನಗರವನ್ನು ಸಿಂಗಾರಗೊಳಿಸುವ ಕೆಲಸದಲ್ಲಿ ಬಜರಂಗದಳ ಹಾಗೂ ವಿಶ್ವಹಿಂದೂ ಪರಿಷತ್ ಕಾರ್ಯಕರ್ತರು ತೊಡಗಿದ್ದು, ಇಲ್ಲಿನ ಉಪ್ಪಳ್ಳಿ ವೃತ್ತದಲ್ಲಿ ಹಾಕಿದ್ದ ಬ್ಯಾನರ್‌ಗಳನ್ನು ಕೆಲವು ಕಿಡಿಗೇಡಿಗಳು ಸೋಮವಾರ ರಾತ್ರಿ ತೆರವುಗೊಳಿಸಿದ್ದಾರೆ. ಇದನ್ನು ಖಂಡಿಸಿ ವಿಶ್ವಹಿಂದೂ ಪರಿಷತ್ ಹಾಗೂ ಬಜರಂಗದಳ ಕಾರ್ಯಕರ್ತರು ಉಪ್ಪಳ್ಳಿ ವೃತ್ತದಲ್ಲಿ ಮಂಗಳವಾರ ಪ್ರತಿಭಟನೆ ನಡೆಸಿದರು.
ಕಿಡಿಗೇಡಿಗಳನ್ನು ಪತ್ತ ಹಚ್ಚಿ ಬಂಧಿಸಬೇಕು. ಅವರ ವಿರುದ್ಧ ಕಾನೂನು ಕ್ರಮ ಜರುಗಿಸಬೇಕೆಂದು ಪ್ರತಿಭಟನಾಕಾರರು ಘೋಷಣೆ ಹಾಕಿದರು.
ಇದರ ಜತೆ ಜತೆಗೆ ಉಪ್ಪಳ್ಳಿ ವೃತ್ತದಲ್ಲಿ ಬ್ಯಾನರ್ ಹಾಗೂ ಭಗವಾಧ್ವಜವನ್ನು ಕಟ್ಟಿ ಪ್ರತಿಭಟನೆಯಿಂದ ಹಿಂದೆ ಸರಿದರು. ಪ್ರತಿಭಟನೆಯಲ್ಲಿ ದತ್ತಪೀಠ ಸಂವರ್ಧನಾ ಸಮಿತಿಯ ಅಧ್ಯಕ್ಷ ಶ್ರೀಕಾಂತ್ ಪೈ, ಸಂಘಟನೆಯ ಮುಖಂಡರುಗಳಾದ ಶಿವಶಂಕರ್, ಯೋಗೀಶ್ ರಾಜ್ ಅರಸ್, ಪ್ರದೀಪ್ ಸೇರಿದಂತೆ ಕಾರ್ಯಕರ್ತರು ಪಾಲ್ಗೊಂಡಿದ್ದರು.
ವಧುವಿನಂತೆ ಸಿಂಗಾರ: ಡಿ.14 ರಿಂದ ಮೂರು ದಿನಗಳ ಕಾಲ ನಡೆಯಲಿರುವ ದತ್ತಜಯಂತಿಯ ಅಂಗವಾಗಿ ಬಜರಂಗದಳ ಹಾಗೂ ವಿಶ್ವ ಹಿಂದೂ ಪರಿಷತ್ ಕಾರ್ಯಕರ್ತರು ಚಿಕ್ಕಮಗಳೂರು ನಗರದೆಲ್ಲೆಡೆ ಬಂಟಿಂಗ್ಸ್, ಬ್ಯಾನರ್ ಹಾಗೂ ಭಗವಾಧ್ವಜಗಳನ್ನು ಕಟ್ಟಿ ಸಿಂಗಾರಗೊಳಿಸುತ್ತಿದ್ದಾರೆ. ಈ ಬಾರಿಯ ದತ್ತಜಯಂತಿ ಉತ್ಸವನ್ನು ಅದ್ಧೂರಿಯಾಗಿ ಆಚರಿಸಲು ಸಂಘಟನೆಯ ಬೈಠಕ್ ಗಳನ್ನು ಸಹ ನಡೆಸಲಾಗಿದ್ದು, ಡಿ.15 ರಂದು ನಗರದಲ್ಲಿ ಶೋಭಾಯಾತ್ರೆ ನಡೆಯಲಿದೆ. ದತ್ತಜಯಂತಿ ಅಂಗವಾಗಿ ಬುಧವಾರ ನಗರದಲ್ಲಿ ಸಂಘಟನೆಯ ಕಾರ್ಯಕರ್ತರು ಬೆಳಿಗ್ಗೆ 11 ಗಂಟೆಗೆ ಇಲ್ಲಿನ ರತ್ನಗಿರಿ ರಸ್ತೆಯಲ್ಲಿರುವ ರಾಮಮಂದಿರದಿಂದ ನಗರದ ಪ್ರಮುಖ ರಸ್ತೆಗಳಲ್ಲಿ ಬೈಕ್ ಜಾಥವನ್ನು ಹಮ್ಮಿಕೊಂಡಿದ್ದಾರೆ. ದತ್ತಪೀಠಕ್ಕೆ ದತ್ತ ಭಕ್ತರು ಬರುವುದರಿಂದ ದತ್ತಪೀಠದಲ್ಲಿ ಕುಡಿಯುವ ನೀರು ಸೇರಿದಂತೆ ಸೌಲಭ್ಯ ಕಲ್ಪಿಸಲು ಜಿಲ್ಲಾಡಳಿತ ಸಿದ್ಧತೆ ಮಾಡಿಕೊಳ್ಳುತ್ತಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.