ಸುದ್ದಿ ಸಂಕ್ಷೇಪ
15ರಂದು ತರಬೇತಿ ಕಾರ್ಯಾಗಾರ
ಚಿಕ್ಕಮಗಳೂರು: ಜಿಲ್ಲಾ ವಿಪ್ರ ನೌಕರರ ಕ್ಷೇಮಾಭ್ಯುದಯ ಸಂಘ ನಗರದ ಎಂಇಎಸ್ ಕಾಲೇಜಿನಲ್ಲಿ ಎಸ್.ಎಸ್.ಎಲ್.ಸಿ. ಮತ್ತು ಪಿಯುಸಿ ವಿದ್ಯಾರ್ಥಿಗಳಿಗೆ ಉಚಿತ ಪರೀಕ್ಷಾಪೂರ್ವ ತರಬೇತಿ ಕಾರ್ಯಾಗಾರವನ್ನು ಡಿ.15 ಮತ್ತು 22 ರಂದು ಹಮ್ಮಿಕೊಂಡಿದೆ.
ಕನ್ನಡ ಮತ್ತು ಇಂಗ್ಲೀಷ್ ಎರಡೂ ಮಾಧ್ಯಮದ ವಿದ್ಯಾರ್ಥಿಗಳಿಗೆ ಗಣಿತ, ವಿಜ್ಞಾನ, ಇಂಗ್ಲೀಷ್ ಗ್ರಾಮರ್, ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಪಿಸಿಎಂಬಿ, ಗಣಿತಶಾಸ್ತ್ರ, ಭೌತಶಾಸ್ತ್ರ, ಜೀವಶಾಸ್ತ್ರ, ರಸಾಯನಶಾಸ್ತ್ರ ವಿಷಯಗಳಲ್ಲಿ ನುರಿತ ಉಪನ್ಯಾಸಕರು ಮತ್ತು ಶಿಕ್ಷಕರಿಂದ ತರಬೇತಿ ನೀಡಲಾಗುವುದು ಎಂದು ಸಂಘದ ಅಧ್ಯಕ್ಷ ಎ.ವಿ. ಅನಂತರಾಮಯ್ಯ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಎರಡೂ ದಿನ ಬೆಳಿಗ್ಗೆ 9 ರಿಂದ ಸಂಜೆ 4.30 ರವರೆಗೆ ತರಬೇತಿ ಕಾರ್ಯಾಗಾರ ನಡೆಯಲಿದ್ದು ಭಾಗವಹಿಸುವ ವಿದ್ಯಾರ್ಥಿಗಳಿಗೆ ಉಚಿತ ಊಟದ ವ್ಯವಸ್ಥೆ ಕಲ್ಪಿಸಲಾಗುವುದು ಎಂದಿರುವ ಅವರು, ಆಸಕ್ತ ವಿದ್ಯಾರ್ಥಿಗಳು ಡಿ. 13ರೊಳಗೆ 9449687439 ಸಂಖ್ಯೆಗೆ ಸಂಪರ್ಕಿಸಿ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳುವಂತೆ ಮನವಿ ಮಾಡಿದ್ದಾರೆ.
ವಿದ್ಯಾರ್ಥಿ ವೇತನ: ಅರ್ಜಿ ಆಹ್ವಾನ
ಚಿಕ್ಕಮಗಳೂರು: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ ಪ್ರತಿಭಾವಂತ, ಮಾಧ್ಯಮಿಕ, ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಕ್ರೀಡಾ ವಿದ್ಯಾರ್ಥಿ ವೇತನಕ್ಕೆ ಅರ್ಹ ಕ್ರೀಡಾಪಟುಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ವಾರ್ಷಿಕ 3000 ಗಳಂತೆ ಕ್ರೀಡಾ ವಿದ್ಯಾರ್ಥಿ ವೇತನ ನೀಡಲಾಗುವುದು. ಮಾಧ್ಯಮ ಅಥವಾ ಪ್ರೌಢಶಾಲೆಯಲ್ಲಿ ಓದುತ್ತಿರುವ ಹಾಗೂ 2013ರ ಜ.1ರ ನಂತರ ನಡೆಸಿದ ರಾಜ್ಯಮಟ್ಟದ ಸ್ಪರ್ಧೆಗಳಲ್ಲಿ ಭಾಗವಹಿಸಿ ಪ್ರಥಮ ಸ್ಥಾನ ಪಡೆದಿರುವ ಅಥವಾ ರಾಷ್ಟ್ರೀಯಮಟ್ಟದ ಪಂದ್ಯಾವಳಿಗಳಲ್ಲಿ ಭಾಗವಹಿಸಿರುವವರು ಅರ್ಜಿ ಸಲ್ಲಿಸಬಹುದಾಗಿದೆ. 2014 ಜ.31 ಅರ್ಜಿ ಸಲ್ಲಿಕೆಗೆ ಕೊನೆನ ದಿನ. ಅರ್ಜಿಗಳನ್ನು ಸಹಾಯಕ ಯುವ ಸಬಲೀಕರಣ ಮತ್ತು ಕ್ರೀಡಾಧಿಕಾರಿಗಳು ಅಥವಾ ತಾಲೂಕು ದೈಹಿಕ ಶಿಕ್ಷಣ ಪರಿವೀಕ್ಷಕರು, ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿಗಳಲ್ಲೂ ಪಡೆಯಬಹುದು. ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಚಿಕ್ಕಮಗಳೂರು ಇವರನ್ನು ಸಂಪರ್ಕಿಸಿ.
ಪ್ರತಿಭಾ ಪ್ರದರ್ಶನಕ್ಕೆ ಉತ್ತಮ ವೇದಿಕೆ: ಕುಮಾರ್
ಕ.ಪ್ರ.ವಾರ್ತೆ, ತರೀಕೆರೆ, ಡಿ.10
ಜನಪದ ಮತ್ತಿತರ ಕಲಾ ಪ್ರದರ್ಶನಕ್ಕೆ ಪ್ರತಿಭಾ ಕಾರಂಜಿ ಉತ್ತಮ ವೇದಿಕೆ ಮತ್ತು ಪ್ರೋತ್ಸಾಹದಾಯಕ ಕಾರ್ಯಕ್ರಮವಾಗಿದೆ ಎಂದು ಜಿ.ಪಂ. ಸದಸ್ಯ ಕೆ.ಪಿ.ಕುಮಾರ್ ತಿಳಿಸಿದ್ದಾರೆ. ಇಲ್ಲಿನ ಲಕ್ಕವಳ್ಳಿ ಪೂರ್ಣಚಂದ್ರ ಶಾಲೆ ವತಿಯಿಂದ ಸರ್ಕಾರ ಬಾಲಕರ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಏರ್ಪಡಿಸಲಾಗಿದ್ದ ಕ್ಲಸ್ಟರ್ಮಟ್ಟದ ಪ್ರತಿಭಾ ಕಾರಂಜಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ತಾ.ಪಂ. ಸದಸ್ಯ ಅನ್ಬು, ಕ್ಷೇತ್ರ ಶಿಕ್ಷಣಾಧಿಕಾರಿ ಹರಿಪ್ರಸಾದ್ ಮಾತನಾಡಿದರು. ಗ್ರಾ.ಪಂ. ಅಧ್ಯಕ್ಷೆ ರಾಜೇಶ್ವರಿ ನಂದಕುಮಾರ್ ಅಧ್ಯಕ್ಷತೆ ವಹಿಸಿದ್ದರು. ಕಾರ್ಯದರ್ಶಿ ರಂಗನಾಥ್, ಶಿವಕುಮಾರ್, ಬಸವರಾಜಯ್ಯ, ಮುಖ್ಯೋಪಾಧ್ಯಾಯರಾದ ಪೂರ್ಣಿಮ ದೇವರಾಜ್ ಮತ್ತಿತರರು ಹಾಜರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

