ಚಿಕ್ಕಮಗಳೂರು

ಹೈನುಗಾರಿಕೆ ಕುರಿತು ಮಾಹಿತಿ ಕಾರ್ಯಾಗಾರ

Published On :

ಕ.ಪ್ರ.ವಾರ್ತೆ  ತರೀಕೆರೆ  ಡಿ.10
ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಸಮೀಪದ ದೋರನಾಳು ಗ್ರಾಮದ ಸುಲೋಚನಮ್ಮ ಅವರ ನಿವಾಸದಲ್ಲಿ ಹೈನುಗಾರಿಕೆ ಮತ್ತು ಎರೆಗೊಬ್ಬರ ಸಂಬಂಧ ಮಾಹಿತಿ ನೀಡುವ ಕಾರ್ಯಕ್ರಮ ಏರ್ಪಡಿಸಲಾಗಿದೆ.
ಯೋಜನೆಯ ಕೃಷಿ ಅಧಿಕಾರಿ ಶಾರಿಕಾ ಮಾದರಿ ಹೈನುಗಾರಿಕೆ ನಿರ್ವಹಣೆ ಕುರಿತು ಮಾಹಿತಿ ನೀಡಿದರು. ಹೈನುಗಾರಿಕೆ ರೂಪುರೇಷೆಗಳು, ಪಾಲಿಸಬೇಕಾದ ಅಗತ್ಯ ಕ್ರಮಗಳು, ದನದ ಕೊಟ್ಟಿಗೆಯ ನಿರ್ಮಾಣ, ಅಲ್ಲಿರಬೇಕಾದ ವಾತಾವರಣ, ಶುಚಿತ್ವ ಇತ್ಯಾದಿ ಬಗ್ಗೆ ಸಮಗ್ರ ಮಾಹಿತಿ ನೀಡಿದರು. ವಲಯ ಮೇಲ್ವಿಚಾರಕ ದಿನೇಶ್‌ಗೌಡ ಅವರು ಎರೆಗೊಬ್ಬರ ತೊಟ್ಟಿ ನಿರ್ಮಾಣ, ವಾತಾವರಣ ಶುಚಿತ್ವ ಕುರಿತ ಮಾಹಿತಿ ನೀಡಿದರು. ಒಕ್ಕೂಟದ ಅಧ್ಯಕ್ಷರು, ಸದಸ್ಯರು ಮತ್ತು ಗ್ರಾಮಸ್ಥರು ಭಾಗವಹಿಸಿದ್ದರು. ಕಾರ್ಯಕ್ರಮದಲ್ಲಿ ಗಾಯತ್ರಿ ವಂದಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.