120 ಬಿಪಿಎಲ್ ಕಾರ್ಡುದಾರರ ಆರೋಗ್ಯ ತಪಾಸಣೆ
ನರಸಿಂಹರಾಜಪುರ: ಇಲ್ಲಿನ ಸರ್ಕಾರಿ ಆಸ್ಪತ್ರೆಯಲ್ಲಿ ಬುಧವಾರ ನಡೆದ ವಾಜಪೇಯಿ ಆರೋಗ್ಯಶ್ರೀ ಉಚಿತ ಆರೋಗ್ಯ ತಪಾಸಣೆ ಶಿಬಿರದಲ್ಲಿ 120 ಬಿಪಿಎಲ್ ಕಾರ್ಡುದಾರರು ಆರೋಗ್ಯ ತಪಾಸಣೆಗೊಳಗಾದರು. ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯ ಜಸ್ಟೀಸ್ ಕೆ.ಎಸ್.ಹೆಗ್ಡೆ ಚಾರಿಟೇಬಲ್ ಆಸ್ಪತ್ರೆಯ ವೈದ್ಯರಾದ ಹೃದಯ ತಜ್ಞ ಡಾ.ಸುಬ್ರಮಣ್ಯ, ನರರೋಗ ತಜ್ಞ ಡಾ.ಅನಂತ, ಮೂತ್ರರೋಗ ತಜ್ಞ ಡಾ.ರಾಜೀವ್, ಡಾ.ಮುರುಳಿ ಆಗಮಿಸಿ ರೋಗಿಗಳ ಆರೋಗ್ಯ ತಪಾಸಣೆ ನಡೆಸಿದರು. ಇವರಲ್ಲಿ 16 ಜನರಿಗೆ ಹೃದಯ ರೋಗ, 13 ಜನರಿಗೆ ನರರೋಗಕ್ಕೆ ಸಂಬಂಧಪಟ್ಟ ಕಾಯಿಲೆ ಇರುವುದು ಪತ್ತೆಯಾಯಿತು. ಇವರನ್ನು ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿನ ಕೆ.ಎಸ್.ಹೆಗ್ಡೆ ಚಾರಿಟಬಲ್ ಆಸ್ಪತ್ರೆಗೆ ಬರುವಂತೆ ಸೂಚಿಸಲಾಯಿತು. ನರಸಿಂಹರಾಜಪುರ ಸರ್ಕಾರಿ ಆಸ್ಪತ್ರೆಯ ವೈದ್ಯರು. ಸಿಬ್ಬಂದಿ ಶಿಬಿರಕ್ಕೆ ಸಹಕಾರ ನೀಡಿದರು.
21ರಂದು ಬಿಲ್ಲವ ಸಂಘ ಉದ್ಘಾಟನೆ
ಶೃಂಗೇರಿ: ಪಟ್ಟಣದ ಡಾ.ಗೌರೀಶಂಕರ ಸಭಾಂಗಣದಲ್ಲಿ ಡಿ.21ರಂದು ಬ್ರಹ್ಮಶ್ರೀ ನಾರಾಯಣಗುರು ಬಿಲ್ಲವ ಸಮಾಜ ಉದ್ಘಾಟನಾ ಸಮಾರಂಭ ನಡೆಯಲಿದೆ. ಬೆಳಿಗ್ಗೆ 10 ಗಂಟೆಗೆ ರಾಷ್ಟ್ರೀಯ ಬಿಲ್ಲವ ಮಹಾಮಂಡಳಿ ಅಧ್ಯಕ್ಷರಾದ ಜಯಸುವರ್ಣ ಉದ್ಘಾಟಿಸಲಿದ್ದಾರೆ. ತಾಲೂಕು ನಾರಾಯಣ ಬಿಲ್ಲವ ಸಮಾಜ ಅಧ್ಯಕ್ಷ ಮಹಾಬಲ ಪೂಜಾರಿ ಅಧ್ಯಕ್ಷತೆ ವಹಿಸಲಿದ್ದಾರೆ. ಅತಿಥಿಗಳಾಗಿ ಜಿಲ್ಲಾ ಉಸ್ತುವಾರಿ ಸಚಿವ ಕೆ.ಅಭಯಚಂದ್ರ ಜೈನ್, ನಗರಾಭಿವೃದ್ಧಿ ಸಚಿವ ವಿನಯಕುಮಾರ್ ಸೊರಕೆ, ರಾಜ್ಯಸಭಾ ಸದಸ್ಯ ಹಾಗೂ ಎಐಸಿಸಿ ಪ್ರಧಾನ ಕಾರ್ಯದರ್ಶಿ ಬಿ.ಕೆ. ಹರಿಪ್ರಸಾದ್, ಉಡುಪಿ ಚಿಕ್ಕಮಗಳೂರು ಸಂಸದ ಕೆ.ಜಯಪ್ರಕಾಶ್ ಹೆಗ್ಡೆ, ಶಾಸಕಿ ಗಾಯತ್ರಿ ಶಾಂತೇಗೌಡ, ಕೋಟ ಶ್ರೀನಿವಾಸ್ ಪೂಜಾರಿ ಮತ್ತಿತರರು ಪಾಲ್ಗೊಳ್ಳಲಿದ್ದಾರೆ.
ಸರ್ಕಾರಿ ಯೋಜನೆ ಪ್ರಯೋಜನವಾಗಲಿ: ರವೀಂದ್ರ
ಕೊಪ್ಪ: ಕೌಶಲ್ಯ ಅಭಿವೃದ್ಧಿ ತರಬೇತಿ ನೀಡಿ ಬಡತನ ನಿವಾರಣೆ ಮಾಡಿ ಜನರ ಆರ್ಥಿಕ ಮಟ್ಟವನ್ನು ಉತ್ತಮಪಡಿಸುವ ಉದ್ಧೇಶದಿಂದ ರಾಜ್ಯ ಮತ್ತು ಕೇಂದ್ರ ಸರ್ಕಾರ ಸಮಗ್ರ ಜನರ ಅಭಿವೃದ್ಧಿ ಯೋಜನೆಯನ್ನು ಜಾರಿಗೆ ತಂದಿದೆ. ಇದರ ಪ್ರಯೋಜನ ಪಡೆದುಕೊಳ್ಳಬೇಕು ಎಂದು ಗುಡ್ಡೇ ತೋಟದ ಗ್ರಾಪಂ ಅಧ್ಯಕ್ಷ ರವೀಂದ್ರ ತಿಳಿಸಿದರು.
ಗುಡ್ಡೇ ತೋಟದಲ್ಲಿ ಜಲಾನಯನ ಹಾಗೂ ತರೀಕೆರೆ ವಿಕಸನ ಕ್ಷೇತ್ರ ಸರ್ಕಾರೇತರ ಸಂಸ್ಥೆಯ ಸಹಯೋಗದೊಂದಿಗೆ ಸಮಗ್ರ ಜಲಾನಯನ ನಿರ್ವಹಣಾ ಯೋಜನೆ ಅನುಷ್ಠಾನ ಹಮ್ಮಿಕೊಂಡಿದ್ದ ಮಹಿಳಾ ಸಂಘಗಳಿಗೆ ತರಬೇತಿ ಕಾರ್ಯಾಗಾರದ ಉದ್ಘಾಟನೆ ನೆರವೇರಿಸಿ ಮಾತನಾಡಿದರು.
ಸಂಪನ್ಮೂಲ ವ್ಯಕ್ತಿಯಾಗಿ ಗಿರೀಶ್ ಮಾತನಾಡಿ, ಇಲಾಖೆ, ಕ್ಷೇತ್ರ ಸರ್ಕಾರೇತರ ಸಂಸ್ಥೆ ಹಾಗೂ ಸಮುದಾಯ ಒಟ್ಟಾಗಿ ಯೋಜನೆಯ ಅನುಷ್ಠಾನ ಮಾಡಿದೆ. ಆದ್ದರಿಂದ ಈ ತರಬೇತಿಯಲ್ಲಿ ಪಾಲುಗೊಂಡು, ಈ ಯೋಜನೆಯಲ್ಲಿ ಸಿಗುವ ಸೌಲಭ್ಯವನ್ನು ಬಳಸಿಕೊಂಡು ಪಡೆದುತಮ್ಮ ಸ್ವಾಭಿಮಾನದ ಭವಿಷ್ಯ ರೂಪಿಸಿಕೊಳ್ಳಲು ಈ ಯೋಜನೆ ಸಹಕಾರಿ ಎಂದು ತಿಳಿಸಿದರು.
ಯೋಜನೆಯ ಸಿಬ್ಬಂದಿಗಳಾದ ರಶ್ಮಿ, ನಂದನ್, ಪರಮೇಶ್ವರ, ಚಿದಂಬರಂ, ನರಸಿಂಹಮೂರ್ತಿ, ತರಬೇತಿಯಲ್ಲಿ 3 ಸ್ವಸಹಾಯ ಸಂಘಗಳ ಮಹಿಳೆಯರು ಪಾಲ್ಗೊಂಡಿದ್ದರು. ಜಗದೀಶ್ ನಿರೂಪಿಸಿ, .ನಾಗರಾಜ್ ಸ್ವಾಗತಿಸಿ, ಮಹೇಶ್ ಬಾಬು ವಂದಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

