ಚಿಕ್ಕಮಗಳೂರು

ನಾಳೆ ಕುವೆಂಪು ಪ್ರಶಸ್ತಿ ಪ್ರದಾನ

Published On :

ಶೃಂಗೇರಿ: ಶೃಂಗಾದ್ರಿ ಕಲ್ಚರಲ್ ಟ್ರಸ್ಟ್ ಆಶ್ರಯದಲ್ಲಿ ಡಿ.13 ರಂದು ಪಟ್ಟಣದ ಜೆಸಿಬಿಎಂ ಕಾಲೇಜಿನ ಡಾ. ಟಿಎಂಎ ಪೈ ಸಭಾಂಗಣದಲ್ಲಿ ಕೆ.ಎಸ್. ನಿಸಾರ್ ಅಹ್ಮದ್ ಗೀತಗಾಯನ, ಕಾವ್ಯ ಕುಂಚ, ಕುವೆಂಪು ಗೀತಗಾಯನ, ಕುವೆಂಪು ಪ್ರಶಸ್ತಿ ಪ್ರದಾನ ಸಮಾರಂಭ ಏರ್ಪಡಿಸಲಾಗಿದೆ. ಕವಿ ಕೆ.ಎಸ್. ನಿಸಾರ್ ಅಹ್ಮದ್ ಅವರು ಬೆಳಗ್ಗೆ 10 ಗಂಟೆಗೆ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ಶೃಂಗಾದ್ರಿ ಕಲ್ಚರಲ್ ಟ್ರಸ್ಟ್ ಅಧ್ಯಕ್ಷ ನಾರಾಯಣ ಅಧ್ಯಕ್ಷತೆ, ಆದಿಚುಂಚನಗಿರಿ ಶೃಂಗೇರಿ ಶಾಖಾ ಮಠದ ಶ್ರೀ ಗುಣನಾಥಸ್ವಾಮೀಜಿ ಸಾನ್ನಿಧ್ಯ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಕಡೂರು ಶಾಸಕ ವೈಎಸ್ವಿ ದತ್ತಾ, ಗಾಯಕಿ, ಸಂಗೀತ ನಿರ್ದೇಶಕಿ ಶಮಿತಾ ಮಲ್ನಾಡ್, ಟಿ.ಡಿ. ರಾಜೇಗೌಡ, ಕರ್ನಾಟಕ ರಕ್ಷಣಾ ವೇದಿಕೆ ಅಧ್ಯಕ್ಷ ನಾರಾಯಣ ಗೌಡ ಮತ್ತಿತರರು ಪಾಲ್ಗೊಳ್ಲಲಿದ್ದಾರೆ.
ಸಂಜೆ ನಡೆಯುವ ಸಮಾರೋಪದಲ್ಲಿ ದಲಿತ ಮುಖಂಡ ಕೆ.ಎಂ. ಗೋಪಾಲ್ ಅವರಿಗೆ ಕುವೆಂಪು ಪ್ರಶಸ್ತಿ ಪ್ರದಾನ ಮಾಡಲಾಗುವುದು.
ಅರ್ಜಿ ಆಹ್ವಾನ
ಚಿಕ್ಕಮಗಳೂರು: ಬೆಂಗಳೂರು ವಾರ್ತಾ ಇಲಾಖೆ ವತಿಯಿಂದ 2013- 14ನೇ ಸಾಲಿನಲ್ಲಿ ವಿಶೇಷ ಘಟಕ ಯೋಜನೆಯಡಿ ಸಾಮಾಜಿಕ ಸಮಾನತೆಯ ಸಂದೇಶ ಸಾರುವ 'ಮನುಷ್ಯ ಜಾತಿ ತಾನೊಂದೇ ವಲಂ' ಧ್ವನಿ-ಬೆಳಕು  ಕಾರ್ಯಕ್ರಮವನ್ನು ನಡೆಸಲು ಅರ್ಹ ಕಲಾವಿದರಿಂದ ಅರ್ಜಿ ಆಹ್ವಾನಿಸಲಾಗಿದೆ. ಆಯಾ ಜಿಲ್ಲೆಯ ವಾರ್ತಾಧಿಕಾರಿಗಳಿಗೆ ಡಿ.20 ರೊಳಗೆ ಅರ್ಜಿ ಸಲ್ಲಿಸಬೇಕು. ವಾರ್ತಾ ಇಲಾಖೆ, ಇವರನ್ನು ಸಂಪರ್ಕಿಸಬಹುದು.
ಅವಧಿ ವಿಸ್ತರಣೆ
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಜಿಲ್ಲಾ ಬಾಲಭವನದಲ್ಲಿ ವಾರ್ಷಿಕ ಚಟುವಟಿಕೆಗಳಾದ ಚಿತ್ರಕಲೆ, ಕರಕುಶಲ, ಜೇಡಿಮಣ್ಣಿನ ಕಲೆ, ರಂಗ ತರಬೇತಿ, ಸಮೂಹ ನೃತ್ಯ, ಸಂಗೀತ, ಕರಾಟೆ ಮತ್ತು ಯೋಗ ತರಬೇತಿಯನ್ನು ನುರಿತ ತರಬೇತಿದಾರರಿಂದ ಪ್ರತಿ ಶನಿವಾರ ಮಧ್ಯಾಹ್ನ ಮತ್ತು ಭಾನುವಾರದ ದಿನಗಳಲ್ಲಿ ಹಮ್ಮಿಕೊಳ್ಳಲು ಉದ್ದೇಶಿಸಲಾಗಿದೆ. ಮಕ್ಕಳನ್ನು ನೋಂದಾಯಿಸಲು ನಿಗದಿಪಡಿಸಲಾಗಿದ್ದ ನ.30 ಅಂತಿಮ ದಿನವನ್ನು ಡಿ.20ರವರೆಗೆ ವಿಸ್ತರಿಸಲಾಗಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.