ಚಿಕ್ಕಮಗಳೂರು

ಎಂಇಎಸ್ ಶಾಸಕರ ವಿರುದ್ಧ ಕ್ರಮಕ್ಕೆ ಆಗ್ರಹ

Published On :

ಚಿಕ್ಕಮಗಳೂರು: ಕರ್ನಾಟಕ ವಿಭಜನೆಯ ಬಗ್ಗೆ ಧ್ವನಿ ಎತ್ತಿರುವ ಎಂಇಎಸ್ ಶಾಸಕರ ವಿರುದ್ಧ ಕ್ರಮ ಕೈಗೊಳ್ಳುವಂತೆ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ರಾಜ್ಯ ಸರ್ಕಾರವನ್ನು ಆಗ್ರಹಿಸಿದೆ.
ಈ ಸಂಬಂಧ ಕಸಾಪ ಪದಾಧಿಕಾರಿಗಳು ಜಿಲ್ಲಾಧಿಕಾರಿ ಬಿ.ಎಸ್.ಶೇಖರಪ್ಪ ಅವರಿಗೆ ಗುರುವಾರ ಮನವಿ ಸಲ್ಲಿಸಿದರು. ಎಂಇಎಸ್ ಶಾಸಕರಾದ ಸಂಬಾಜಿ ಪಾಟೀಲ್, ಅರವಿಂದ್ ಪಾಟೀಲ್ ಹಾಗೂ ಉಮೇಶ್ ಕತ್ತಿ ಅವರು ಸದನದಲ್ಲಿ ಬೆಳಗಾವಿಯನ್ನು ಮಹಾರಾಷ್ಟ್ರಕ್ಕೆ ಸೇರಿಸಿ ಎಂಬ ಧ್ವನಿ ಎತ್ತಿದ್ದಲ್ಲದೆ ಕನ್ನಡಿಗರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ್ದಾರೆ. ಅವರು ಕನ್ನಡಿಗರ ತಾಳ್ಮೆಯನ್ನು ಪರೀಕ್ಷಿಸಲು ಹೊರಟಿದ್ದು, ಉದ್ಧಟನವನ್ನು ಪ್ರದರ್ಶಿಸಿದ್ದಾರೆ ಎಂದು ಮನವಿಯಲ್ಲಿ ತಿಳಿಸಿದ್ದಾರೆ.
ನಾಡದ್ರೋಹವೆಸಗಿರುವ ಇವರನ್ನು ವಿಧಾನಸಭಾ ಸದಸ್ಯತ್ವದಿಂದ ಅನರ್ಹಗೊಳಿಸಬೇಕು. ಅವರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಿ ಗಡಿಪಾರು ಮಾಡಬೇಕು. ರಾಜ್ಯದಲ್ಲಿ ಎಂಇಎಸ್ ಸಂಘಟನೆಯನ್ನು ನಿಷೇಧಿಸಬೇಕು ಎಂದು ಆಗ್ರಹಿಸಿದ್ದಾರೆ.
ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದ ಸಂದರ್ಭದಲ್ಲಿ ಕಸಾಪ ಜಿಲ್ಲಾಧ್ಯಕ್ಷ ಎನ್.ಎಸ್. ಶಿವಸ್ವಾಮಿ, ತಾಲೂಕು ಅಧ್ಯಕ್ಷ ನಟರಾಜ್, ಶಿವಾನಂದಸ್ವಾಮಿ, ದೀಪಕ್ ದೊಡ್ಡಯ್ಯ, ವಾಣಿ ಚಂದ್ರಯ್ಯನಾಯ್ಡು, ಚನ್ನಪ್ಪ ಹಾಜರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.