ಕ್ಯಾಮೆರಾ, ಮೊಬೈಲ್ ನಿಷೇಧ
ಚಿಕ್ಕಮಗಳೂರು: ಶ್ರೀ ಗುರು ದತ್ತಾತ್ರೇಯ ಬಾಬಾಬುಡನ್ ಸ್ವಾಮಿ ದರ್ಗಾ ಐ.ಡಿ.ಪೀಠದಲ್ಲಿ ಡಿ.14 ರಿಂದ 16 ರವರೆಗೆ ನಡೆಯಲಿರುವ ದತ್ತ ಜಯಂತಿ ಕಾರ್ಯಕ್ರಮಕ್ಕೆ ಐ.ಡಿ. ಪೀಠಕ್ಕೆ ಆಗಮಿಸುವ ಭಕ್ತಾಧಿಗಳು ಮೊಬೈಲ್, ಕ್ಯಾಮೆರಾ, ವಿಡಿಯೋ ಕ್ಯಾಮೆರಾ, ಹಿಡನ್ ಕ್ಯಾಮೆರ, ಪೆನ್ ಕ್ಯಾಮರಗಳನ್ನು ದತ್ತಪೀಠದಲ್ಲಿನ ನಿಷೇಧಿತ ಪ್ರದೇಶದ ಆವರಣದ ಒಳಗೆ ತರುವುದನ್ನು ನಿಷೇಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ಬಿ.ಎಸ್. ಶೇಖರಪ್ಪ ಹೇಳಿದ್ದಾರೆ.ತಮ್ಮ ಕಚೇರಿಯಲ್ಲಿ ಗುರುವಾರ ನಡೆದ ಸಭೆಯಲ್ಲಿ ಮಾತನಾಡಿದ ಅವರು, ಡಿ.16 ರಂದು ಶ್ರೀ ಗುರು ದತ್ತಾತ್ರೇಯ ಬಾಬಾಬುಡನ್ ಸ್ವಾಮಿ ದರ್ಗಾದಲ್ಲಿ ದತ್ತಮಾಲಾ ಮತ್ತು ದತ್ತ ಜಯಂತಿ ಅಂಗವಾಗಿ ಬೆಳಿಗ್ಗೆ 8 ರಿಂದ ಸಂಜೆ 6 ರವರೆಗೆ ಪಾದುಕೆಗಳ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ ಎಂದು ತಿಳಿಸಿದರು.ಶ್ರೀ ಗುರುದತ್ತಾತ್ರೇಯ ಬಾಬಾಬುಡನ್ ಸ್ವಾಮಿ ದರ್ಗಾದಲ್ಲಿ ಧಾರ್ಮಿಕ ದತ್ತಿ ಆಯುಕ್ತರ 1989 ಫೆಬ್ರವರಿ 25 ರ ಆದೇಶದಂತೆ 1975 ನೇ ಇಸವಿಗಿಂತ ಹಿಂದೆ ಇದ್ದ ಪದ್ದತಿಯಂತಯೇ ಧಾರ್ಮಿಕ ವಿಧಿ ವಿಧಾನಗಳನ್ನು ನಡೆಸಲು ಅವಕಾಶ ಕಲ್ಪಿಸಲಾಗಿದೆ ಎಂದರು. ಭಕ್ತಾಧಿಗಳಿಗೆ ಕುಡಿಯುವ ನೀರಿನ ವ್ಯವಸ್ಥೆ, ಪ್ರಸಾದ ವ್ಯವಸ್ಥೆ, ಶೆಡ್ ವ್ಯವಸ್ಥೆ, ವೈದ್ಯಕೀಯ ಸೇವೆ, ವಿಶೇಷ ಬಸ್ ಸೌಲಭ್ಯ, ಶೌಚಾಲಯ ಮುಂತಾದ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಲಾಗಿದೆ ಹಾಗೂ ಭಕ್ತರನ್ನು ಕೊಂಡೊಯ್ಯುವ ವಾಹನಗಳನ್ನು ಡಿ.16 ರಂದು ಬೆಳಿಗ್ಗೆ 7 ರಿಂದ ಮಧ್ಯಾಹ್ನ 1 ಗಂಟೆಯವರೆಗೆ ಕೈಮರ ಚೆಕ್ ಪೋಸ್ಟ್ನಿಂದ ಬಿಡಲಾಗುವುದು ಎಂದು ಹೇಳಿದರು. ಕಾನೂನು ಸುವ್ಯವಸ್ಥೆ, ಶಾಂತಿಪಾಲನೆ ದೃಷ್ಟಿಯಿಂದ ಹಾಗೂ ಧಾರ್ಮಿಕ ಕಾರ್ಯಕ್ರಮ ಸುಗಮವಾಗಿ ಜರುಗಲು ಭಕ್ತಾಧಿಗಳು ಸಹಕರಿಸುವಂತೆ ಜಿಲ್ಲಾಧಿಕಾರಿಗಳು ಮನವಿ ಮಾಡಿದ್ದಾರೆ. ಮುಜರಾಯಿ ತಹಸೀಲ್ದಾರ್ ಹಾಗೂ ಮತ್ತಿತರ ಅಧಿಕಾರಿಗಳು ಉಪಸ್ಥಿತರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

