ಚಿಕ್ಕಮಗಳೂರು

ಪಡಿತರ ಬಿಡುಗಡೆ

Published On :

ಚಿಕ್ಕಮಗಳೂರು: ಡಿಸೆಂಬರ್ನಲ್ಲಿ ಜಿಲ್ಲೆಯ ಪೊಲೀಸ್ ಸಿಬ್ಬಂದಿ, ಅಗ್ನಿ ಶಾಮಕ ಮತ್ತು ತುರ್ತು ಸೇವೆಗಳ ಇಲಾಖೆ  ಅಗ್ನಿಶಾಮಕ ಠಾಣಾಧಿಕಾರಿ ಹಾಗೂ ಅವರಿಗಿಂತ ಕೆಳದರ್ಜೆಯ ಸಿಬ್ಬಂದಿಗೆ ಹಾಗೂ ಗೃಹ ರಕ್ಷಕ ಇಲಾಖೆ  ಕಾರ್ಯನಿರ್ವಾಹಕ ಸಿಬ್ಬಂದಿ ಎ.ಪಿ.ಎಲ್. ಪಡಿತರ  ಚೀಟಿದಾರರಿಗೆ 30 ಕೆ.ಜಿ. ಗೋಧಿ ಬಿಡುಗಡೆ ಮಾಡಲಾಗಿದೆ. ಸಂಬಂಧಪಟ್ಟ ನ್ಯಾಯಬೆಲೆ ಅಂಗಡಿಯಿಂದ ತಿಂಗಳ ಒಳಗೆ ಪಡೆದುಕೊಳ್ಳುವಂತೆ ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


ಪ್ರತಿಭಾ ಕಾರಂಜಿ
ನರಸಿಂಹರಾಜಪುರ: ತಾಲೂಕು ಮಟ್ಟದ ಪ್ರೌಢಶಾಲಾ ವಿಭಾಗದ ಪ್ರತಿಭಾ ಕಾರಂಜಿ ಕಾರ್ಯಕ್ರಮ ಶೆಟ್ಟಿಕೊಪ್ಪದ ಬರ್ಕ್ಮನ್ ಪ್ರೌಢಶಾಲೆ ಆಶ್ರಯದಲ್ಲಿ ಡಿ. 13 ರ ಶುಕ್ರವಾರ ನಡೆಯಲಿದೆ. ಬೆಳಗ್ಗೆ 9 ಗಂಟೆಗೆ ಉದ್ಘಾಟನಾ  ಸಮಾರಂಭ ನಡೆಯಲಿದೆ. ಭದ್ರಾವತಿಯ ಧರ್ಮ ಪ್ರಾಂತ್ಯದ ಧರ್ಮಾಧ್ಯಕ್ಷ ಜೋಸೆಫ್ ಅರುಮ ಚಾಡತ್ ಉದ್ಘಾಟಿಸಲಿದ್ದಾರೆ. ಸಂಜೆ 5 ಗಂಟೆಗೆ ಸಮಾರೋಪ ನಡೆಯಲಿದ್ದು, ಜನಪ್ರತಿನಿಧಿಗಳು ಭಾಗವಹಿಸಿ ವಿಜೇತ ಮಕ್ಕಳಿಗೆ ಬಹುಮಾನ ವಿತರಿಸಲಿದ್ದಾರೆ.



ಅಹವಾಲು ಸ್ವೀಕಾರ
ಚಿಕ್ಕಮಗಳೂರು: ಆಹಾರ ಭದ್ರತೆ ಯೋಜನೆಗಳಾದ ಸಾರ್ವಜನಿಕ ವಿತರಣಾ ಪದ್ಧತಿ ಐ.ಸಿ.ಡಿ.ಎಸ್. ಕೂಲಿಗಾಗಿ ಕಾಳು, ಮಧ್ಯಾಹ್ನ ಉಪಹಾರ ಯೋಜನೆ ಇತ್ಯಾದಿಗಳಿಗೆ ಸಂಬಂಧಿಸಿದಂತೆ ಡಿ.13ರ ಬೆಳಗ್ಗೆ 10 ಗಂಟೆಗೆ  ಡಿಸಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾಧಿಕಾರಿಗಳು, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳು, ಮುಖ್ಯ ಕಾರ್ಯನಿರ್ವಹಣಾ ಅಧಿಕಾರಿಗಳು, ಜಿಪಂ ಚಿಕ್ಕಮಗಳೂರು ಅವರನ್ನು ಒಳನ್ನೊಳಗೊಂಡ ಸದಸ್ಯರ ಸಮಿತಿ  ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಲಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.