ಚಿಕ್ಕಮಗಳೂರು

ರೈಲು ನಿಲ್ದಾಣಕ್ಕೆ ಬಸ್

Published On :

ಕ.ಪ್ರ.ವಾರ್ತೆ  ಚಿಕ್ಕಮಗಳೂರು  ಡಿ.14
ನಗರದ ರೈಲ್ವೆ ನಿಲ್ದಾಣಕ್ಕೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ವತಿಯಿಂದ ಬಸ್ ಸೌಲಭ್ಯ ಕಲ್ಪಿಸಲಾಗಿದೆ.
ಡಿ.8 ರಿಂದ ಬಸ್ ಸೌಲಭ್ಯ ಕಲ್ಪಿಸಲಾಗಿದೆ ಎಂದು ಚಿಕ್ಕಮಗಳೂರು ವಿಭಾಗದ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ವಿಭಾಗೀಯ ನಿಯಂತ್ರಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ರೈಲ್ವೆ ನಿಲ್ದಾಣಕ್ಕೆ ಬಸ್ಸಿನ ಸೌಲಭ್ಯ ಇಲ್ಲದೆ ಪ್ರಯಾಣಿಕರಿಗೆ ಆಗುತ್ತಿದ್ದ ಅನಾನುಕೂಲದ ಬಗ್ಗೆ 'ಕನ್ನಡಪ್ರಭ'ದಲ್ಲಿ ಡಿ. 4 ರಂದು ವರದಿ ಪ್ರಕಟಗೊಂಡಿತ್ತು. ರೈಲು ಪ್ರಯಾಣಿಕರಿಗೆ ಅನುಕೂಲವಾಗುವ ದೃಷ್ಟಿಯಿಂದ ಕೆಎಸ್‌ಆರರ್ಟಿಸಿ ಬಸ್ ಗಳನ್ನು ರೈಲ್ವೆ ನಿಲ್ದಾಣಕ್ಕೆ ಬಿಡಲಾಗಿದೆ.
ಚಿಕ್ಕಮಗಳೂರಿನಿಂದ- ಶಿವಮೊಗಕ್ಕೆ ಬೆಳಿಗ್ಗೆ 6.15ಕ್ಕೆ ನಿರ್ಗಮಿಸುತ್ತಿದ್ದು, ಶಿವಮೊಗ್ಗದಿಂದ ಚಿಕ್ಕಮಗಳೂರಿಗೆ ರಾತ್ರಿ 9.15 ಕ್ಕೆ ರೈಲು ಗಾಡಿ ಬಂದು ಸೇರುತ್ತದೆ. ಈ ಸಂದರ್ಭದಲ್ಲಿ ಪ್ರಯಾಣಿಕರ ಅನುಕೂಲಕ್ಕಾಗಿ ರೈಲು ನಿಲ್ದಾಣಕ್ಕೆ ಬಸ್ ಸೌಲಭ್ಯ ಕಲ್ಪಿಸಲಾಗಿದೆ.
ಬೆಳಗ್ಗೆಯಿಂದ ಪ್ರಾರಂಭ: ಚಿಕ್ಕಮಗಳೂರು- ಜಾವಗಲ್ ಮಾರ್ಗದ ಬಸ್ಸು ಬೆಳಿಗ್ಗೆ 5.45 ಕ್ಕೆ ಚಿಕ್ಕಮಗಳೂರು ವಾಹನ ನಿಲ್ದಾಣದಿಂದ ರೈಲ್ವೆ ನಿಲ್ದಾಣಕ್ಕೆ ಹೋಗಿ ಜಾವಗಲ್‌ಗೆ ಕಾರ್ಯಾಚರಿಸಲಿದೆ. ಚಿಕ್ಕಮಗಳೂರು- ಹನಿಕೆ- ಬೇಲೂರು ಮಾರ್ಗದ ಬಸ್ಸು ಬೆಳಿಗ್ಗೆ 5.50 ಕ್ಕೆ ಚಿಕ್ಕಮಗಳೂರು ವಾಹನ ನಿಲ್ದಾಣದಿಂದ ರೈಲ್ವೆ ನಿಲ್ದಾಣಕ್ಕೆ ಹೋಗಿ ಬೇಲೂರಿಗೆ ಕಾರ್ಯಾಚರಿಸಲಿದೆ. ಬೆಂಗಳೂರು- ಚಿಕ್ಕಮಗಳೂರು ಮಾರ್ಗದ ಬಸ್ಸು ರಾತ್ರಿ 9.15 ಕ್ಕೆ ಚಿಕ್ಕಮಗಳೂರು ಬಸ್ ನಿಲ್ದಾಣದಿಂದ ರೈಲ್ವೆ ನಿಲ್ದಾಣಕ್ಕೆ ಹೋಗಿ ಪ್ರಯಾಣಿಕರನ್ನು ಕರೆತರೆಲಾಗುವುದು.
ಅರಸೀಕೆರೆ ಘಟಕದ ಬೆಂಗಳೂರಿನಿಂದ ಚಿಕ್ಕಮಗಳೂರು ಮಾರ್ಗದ ಬಸ್ಸು ರಾತ್ರಿ 9.15 ಕ್ಕೆ ಚಿಕ್ಕಮಗಳೂರು ಬಸ್ ನಿಲ್ದಾಣದಿಂದ ರೈಲ್ವೇ ನಿಲ್ದಾಣಕ್ಕೆ ಹೋಗಿ ಪ್ರಯಾಣಿಕರನ್ನು ಕರೆತರಲಿದೆ. ಅರಸೀಕೆರೆಯಿಂದ ಚಿಕ್ಕಮಗಳೂರು ಮಾರ್ಗದ ಬಸ್ಸು ರಾತ್ರಿ 9.30 ಕ್ಕೆ ಚಿಕ್ಕಮಗಳೂರು ಬಸ್ ನಿಲ್ದಾಣದಿಂದ ರೈಲ್ವೇ ನಿಲ್ದಾಣಕ್ಕೆ ಹೋಗಿ ಪ್ರಯಾಣಿಕರನ್ನು ಕರೆತರಲಿದೆ.
ಸೂಕ್ತ ನಿರ್ದೇಶನ: ಚಿಕ್ಕಮಗಳೂರು ವಾಹನ ನಿಲ್ದಾಣದಿಂದ ರೈಲ್ವೇ ನಿಲ್ದಾಣಕ್ಕೆ ಒಂದು ಹಂತದ ದರವನ್ನು ನಿಗಧಿಪಡಿಸಿದ್ದು, ಇಟಿಎಂನಲ್ಲಿ ಅಳವಡಿಸಲಾಗಿದೆ. ಸದರಿ ಸಾರಿಗೆಗಳ ಬಗ್ಗೆ ಯಾವುದೇ ಸಾರ್ವಜನಿಕ ದೂರುಗಳು ಬರದಂತೆ ಕ್ರಮ ಕೈಗೊಳ್ಳುವುದು.
ಈ ಕುರಿತು ಚಿಕ್ಕಮಗಳೂರು ವಾಹನ ನಿಲ್ದಾಣಾಧಿಕಾರಿಗಳು ರಾತ್ರಿ ಪಾಳಿಯಲ್ಲಿ ಕರ್ತವ್ಯ ನಿರ್ವಹಿಸುವ ಸಂಚಾರ ನಿಯಂತ್ರಕರಿಗೆ ಸೂಕ್ತ ನಿರ್ದೇಶನಗಳನ್ನು ನೀಡಿ ಸಂಬಂಧಿಸಿದ ಚಾಲಕ, ನಿರ್ವಾಹಕರ ಮಾರ್ಗಪತ್ರ ಹಾಗೂ ಲಾಗ್‌ಶೀಟ್‌ನಲ್ಲಿ ನಮೂದಿಸಿ, ಸಾರ್ವಜನಿಕ ಪ್ರಯಾಣಿಕರಿಗೆ ತೊಂದರೆಯಾಗದಂತೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಚಿಕ್ಕಮಗಳೂರು ವಿಭಾಗದ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ವಿಭಾಗೀಯ ನಿಯಂತ್ರಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.