ಚಿಕ್ಕಮಗಳೂರು

ಸರ್ಕಾರ, ಸಂಘಸಂಸ್ಥೆಯ ಶಿಕ್ಷಣ ಸವಲತ್ತು ಬಳಸಿ

Published On :

ಚಿಕ್ಕಮಗಳೂರು: ಶಿಕ್ಷಣಕ್ಕಾಗಿ ಸರ್ಕಾರ ಮತ್ತು ಸಂಘಸಂಸ್ಥೆಗಳಿಂದ ದೊರೆಯುವ ಸವಲತ್ತುಗಳನ್ನು ವಿದ್ಯಾರ್ಥಿಗಳು ಸದುಪಯೋಗಪಡಿಸಿಕೊಳ್ಳಬೇಕು ಎಂದು ಮಲೆನಾಡು ವಿದ್ಯಾಸಂಸ್ಥೆ ಅಧ್ಯಕ್ಷ ಎಂ.ಎಸ್. ಅನಂತರಾಮಯ್ಯ ಹೇಳಿದ್ದಾರೆ.
ಜಿಲ್ಲಾ ವಿಪ್ರ ನೌಕರರ ಕ್ಷೇಮಾಭ್ಯುದಯ ಸಂಘ ನಗರದ ಎಂಇಎಸ್ ಕಾಲೇಜಿನಲ್ಲಿ ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿ ವಿದ್ಯಾರ್ಥಿಗಳಿಗೆ ಹಮ್ಮಿಕೊಂಡಿರುವ 2 ದಿನಗಳ ಪರೀಕ್ಷಾ ಪೂರ್ವ ತರಬೇತಿ ಕಾರ್ಯಾಗಾರಕ್ಕೆ ಭಾನುವಾರ ಚಾಲನೆ ನೀಡಿ ಅವರು ಮಾತನಾಡಿದರು.
ಕೆಲ ದಶಕಗಳ ಹಿಂದೆ ಬಡವರಿಗೆ ಶಿಕ್ಷಣ ಮರೀಚಿಕೆಯಾಗಿತ್ತು. ಗ್ರಾಮೀಣ ಮಕ್ಕಳು ವಿದ್ಯಾರ್ಜನೆಗೆ ನಗರ ಪ್ರದೇಶಗಳಿಗೆ ತೆರಳಬೇಕಾಗಿತ್ತು. ಅವರಿವರ ಮನೆಯಲ್ಲಿ ವಾರಾನ್ನ ಮಾಡಿ ಓದಬೇಕಾಗಿತ್ತು. ಎಂದರು.
ವಿದ್ಯಾರ್ಥಿಗಳು ಈ ಸವಲತ್ತುಗಳ ಲಾಭ ಪಡೆದು ಶ್ರದ್ಧೆ ಮತ್ತು ಪರಿಶ್ರಮದಿಂದ ವಿದ್ಯಾರ್ದನೆ ಮಾಡಬೇಕು. ವಿದ್ಯೆಯ ಜೊತೆಗೆ ವಿನಯ, ವಿಧೇಯತೆ, ಸಂಸ್ಕೃತಿ, ಸಂಸ್ಕಾರಗಳನ್ನು ಬೆಳೆಸಿಕೊಂಡು ಉತ್ತಮ ನಾಗರಿಕರಾಗಿ ಹೊರಹೊಮ್ಮಬೇಕು ಎಂದು ಹೇಳಿದರು.
ಸಂಸ್ಥೆಯ ಕಾರ್ಯದರ್ಶಿ ಡಾ. ಡಿ.ಎಲ್. ವಿಜಯಕುಮಾರ್ ಮಾತನಾಡಿ, ವಿದ್ಯಾರ್ಥಿಗಳು ಕೀಳರಿಮೆ ಬಿಟ್ಟು ಆತ್ಮವಿಶ್ವಾಸ ಬೆಳೆಸಿಕೊಂಡಾಗ ಮಾತ್ರ ಪರೀಕ್ಷೆಗಳನ್ನು ಸಮರ್ಥವಾಗಿ ಎದುರಿಸಲು ಸಾಧ್ಯ ಎಂದರು.
ಜಿಲ್ಲಾ ವಿಪ್ರ ನೌಕರರ ಕ್ಷೇಮಾಭ್ಯುದಯ ಸಂಘದ ಅಧ್ಯಕ್ಷ ಎ.ವಿ. ಅನಂತರಾಮಯ್ಯ ಮಾತನಾಡಿ, ವಿದ್ಯಾರ್ಥ್ಥಿಗಳು ಪರೀಕ್ಷೆಗಳನ್ನು ಹೇಗೆ ಎದುರಿಸಬೇಕು ಮತ್ತು ಆತ್ಮಸ್ಥೈರ್ಯವನ್ನು ಹೇಗೆ ಬೆಳೆಸಿಕೊಳ್ಳಬೇಕು ಎಂಬುದನ್ನು ಕಲಿಸುವ ಉದ್ದೇಶದಿಂದ ಕಳೆದ 3 ವರ್ಷಗಳಿಂದ ಪರೀಕ್ಷಾಪೂರ್ವ ತರಭೇತಿ ಕಾರ್ಯಾಗಾರಗಳನ್ನು ಸಂಘ ಏರ್ಪಡಿಸುತ್ತಿದೆ.  ವಿದ್ಯಾರ್ಥಿಗಳು ಅದರ ಲಾಭ ಪಡೆದುಕೊಳ್ಳಬೇಕು ಎಂದು ಮನವಿ ಮಾಡಿದರು.
ತಾಲೂಕು ಬ್ರಾಹ್ಮಣ ಮಹಾಸಭಾದ ಖಜಾಂಚಿ ಗಣೇಶ್ ಕುಮಾರ್, ನಿವೃತ್ತ ಶಿಕ್ಷಕ ಶಂಕರ ನಾರಾಯಣಭಟ್, ಉಪನ್ಯಾಸಕಿ ಗಣಪಿ ಎನ್. ಹೆಗ್ಡೆ, ಮುಖ್ಯ ಶಿಕ್ಷಕಿ ಉಮಾ ಶಿವಕುಮಾರ್, ಸಂಘದ ನಿರ್ದೇಶಕ ಯು. ವಿನೀತ್‌ಕುಮಾರ್ ಉಪಸ್ಥಿತರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.