ತಾಲೂಕು ಮಟ್ಟಕ್ಕೆ ವಿದ್ಯಾರ್ಥಿಗಳ ಆಯ್ಕೆ
ತರೀಕೆರೆ: ಸಮೀಪದ ಯಲುಗೆರೆಯಲ್ಲಿ ನಡೆದ ಬಾವಿಕೆರೆ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿಯಲ್ಲಿ ಗಂಜಿಗೆರೆ ಸರ್ಕಾರಿ ಹಿ.ಪ್ರಾ. ಶಾಲೆಯ ಮಕ್ಕಳು ವಿಜೇತರಾಗಿ ತಾಲೂಕು ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ವಿಜೇತ ಮಕ್ಕಳಿಗೆ, ಸಹ ಶಿಕ್ಷಕರಿಗೆ ಶಾಲೆ ಎಸ್ಡಿಎಂಸಿ ಅಧ್ಯಕ್ಷರಾದ ಟಿ. ತೋಪಣ್ಣ, ಶಾಲೆ ಮುಖ್ಯೋಪಾಧ್ಯಾಯ ಕೆ.ಆರ್. ಶಿವಕುಮಾರ್ ಅಭಿನಂದಿಸಿದ್ದಾರೆ.
ಶಿಕ್ಷಕಿ ಕಮಲಗೆ ಬೀಳ್ಕೊಡುಗೆ
ತರೀಕೆರೆ: ಇಲ್ಲಿಗೆ ಸಮೀಪದ ಎ.ರಂಗಾಪುರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸೇವೆಯಿಂದ ನಿವೃತ್ತರಾದ ಶಿಕ್ಷಕಿ ಎಸ್.ಎಚ್. ಕಮಲ ಅವರಿಗೆ ಶಾಲೆಯಲ್ಲಿ ಸನ್ಮಾನ, ಬೀಳ್ಕೊಡುಗೆ ಸಮಾರಂಭ ಏರ್ಪಡಿಸಲಾಗಿತ್ತು. ಶಾಲೆ ಎಸ್ಡಿಎಂಸಿ ಅಧ್ಯಕ್ಷ ಅಣ್ಣಪ್ಪ, ಉಪಾಧ್ಯಕ್ಷೆ ಸುಮಾ, ಗ್ರಾ.ಪಂ. ಸದಸ್ಯ ರವಿಕುಮಾರ್, ರೇಣುಕ, ತಾಲೂಕು ಶಿಕ್ಷಕ ಸಂಘದ ಅಧ್ಯಕ್ಷ ಉಮೇಶ್, ಕಾರ್ಯದರ್ಶಿ ಆನಂದ್, ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ರಾಮಚಂದ್ರಪ್ಪ, ಉಪನ್ಯಾಸಕ ಡಾ.ಜಗದೀಶ್, ಶಾಲಾ ಮುಖ್ಯ ಶಿಕ್ಷಕ ಜಿ.ಪಿ. ಜಯ್ಯಣ್ಣ ಮತ್ತಿತರರು ಭಾಗವಹಿಸಿದ್ದರು. ನಿವೃತ್ತ ಶಿಕ್ಷಕಿ ಕಮಲ ಅವರನ್ನು ಆತ್ಮೀಯವಾಗಿ ಸನ್ಮಾನಿಸಿ ಬೀಳ್ಕೊಡಲಾಯಿತು.
ಹಾಸ್ಟೆಲ್ಗೆ ಭೇಟಿ, ವಾಸ್ತವ್ಯ: ಸಚಿವ
ಶಿವಮೊಗ್ಗ: ಹಾಸ್ಟೆಲ್ಗೆ ದಿಢೀರ್ ಭೇಟಿ ಕೊಡುತ್ತೇನೆ. ಅಲ್ಲೇ ಊಟ, ವಾಸ್ತವ್ಯ ಮಾಡುತ್ತೇನೆ. ಈ ಮೂಲಕ ಹಾಸ್ಟೆಲ್ಗಳಲ್ಲಿರುವ ಸಮಸ್ಯೆ ಪರಿಹರಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳುತ್ತೇನೆ ಎಂದು ಸಮಾಜ ಕಲ್ಯಾಣ ಸಚಿವ ಆಂಜನೇಯ ಹೇಳಿದರು.
ಭಾನುವಾರ ಸಂಜೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಹಾಸ್ಟೆಲ್ನಲ್ಲಿ ಸಾಕಷ್ಟು ಸಮಸ್ಯೆಗಳಿವೆ ಎಂದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

