ಚಿಕ್ಕಮಗಳೂರು

ತಾಲೂಕು ಮಟ್ಟದ ಪ್ರತಿಭಾ ಕಾರಂಜಿ ಸಮಾರೋಪ

Published On :

ನರಸಿಂಹರಾಜಪುರ: ಶೆಟ್ಟಿಕೊಪ್ಪದಲ್ಲಿ ನಡೆದ ತಾಲೂಕು ಮಟ್ಟದ ಪ್ರೌಢ ಶಾಲಾ ವಿಭಾಗದ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ಪಟ್ಟಣದ ಡಿಸಿಎಂಸಿ(ಶಾರದಾ ವಿದ್ಯಾ ಮಂದಿರ) ಶಾಲೆಯ ಮಕ್ಕಳು 8 ಸ್ಪರ್ಧೆಗಳಲ್ಲಿ ಪ್ರಥಮ ಸ್ಥಾನ ಪಡೆದು ಜಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ ಎಂದು ಪ್ರಾಂಶುಪಾಲೆ ಪದ್ಮರಮೇಶ್ ತಿಳಿಸಿದ್ದಾರೆ.
8 ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಅಲ್ಲದೆ ಇತರೆ 3 ಸ್ಪರ್ಧೆಗಳಲ್ಲಿ ತೃತೀಯ ಹಾಗೂ 3 ಸ್ಪರ್ಧೆಗಳಲ್ಲಿ ದ್ವಿತೀಯ ಸ್ಥಾನ ಪಡೆದಿದ್ದಾರೆ. ಉತ್ತಮ ಸಾಧನೆ ಮಾಡಿ ಶಾಲೆಗೆ ಕೀರ್ತಿ ತಂದ ವಿದ್ಯಾರ್ಥಿ, ವಿದ್ಯಾರ್ಥಿನಿಯರನ್ನು ಶಾಲಾ ಆಡಳಿತ ಮಂಡಳಿ, ಪ್ರಾಂಶುಪಾಲರು ಅಭಿನಂದಿಸಿದ್ದಾರೆ.
ವಿಜೇತರು: ಕನ್ನಡ ಭಾಷಣ ಸ್ಪರ್ಧೆಯಲ್ಲಿ ಕು. ಇಂಚರ, ಇಂಗ್ಲಿಷ್ ಭಾಷಣ ಸ್ಪರ್ಧೆಯಲ್ಲಿ ನೇಸರ, ಹಿಂದಿ ಭಾಷಣ ಸ್ಪರ್ಧೆಯಲ್ಲಿ ಆಝಾಶೇಖ್, ತುಳು ಭಾಷಣ ಸ್ಪರ್ಧೆಯಲ್ಲಿ ಸಿಂಚನಶೆಟ್ಟಿ, ಆಶುಭಾಷಣ ಸ್ಪರ್ಧೆಯಲ್ಲಿ ಕು. ವಿಜೇತ, ವಿಜ್ಞಾನ ಮಾದರಿ ಸ್ಪರ್ಧೆಯಲ್ಲಿ ಮನೋಜ್ ಮತ್ತು ಚೇತನ, ಹಿಂದೂಸ್ತಾನಿ ಶಾಸ್ತ್ರೀಯ ಸಂಗೀತದಲ್ಲಿ ಸಾಕ್ಷಿಜಾ, ಗಜಲ್ ಸ್ಪರ್ಧೆಯಲ್ಲಿ ಆಫ್ರಿನ್ ವಿಜೇತರಾಗಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.