ಚಿಕ್ಕಮಗಳೂರು

ತರೀಕೆರೆಯಲ್ಲಿ ಖರೀದಿ ಕೇಂದ್ರ ಉದ್ಘಾಟನೆ

Published On :

ತರೀಕೆರೆ: ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ, ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ವತಿಯಿಂದ ಸಮಿತಿ ಆವರಣದಲ್ಲಿ ಮೆಕ್ಕೆಜೋಳ ಖರೀದಿ ಕೇಂದ್ರದ ಉದ್ಘಾಟನೆ ಸಮಾರಂಭವನ್ನು ಏರ್ಪಡಿಸಲಾಗಿತ್ತು.
ಶಾಸಕ ಜಿ.ಎಚ್.ಶ್ರೀನಿವಾಸ್ ಅವರು ಮೆಕ್ಕಜೋಳ ಖರೀದಿ ಕೇಂದ್ರದ ಉದ್ಘಾಟನೆ ನೆರವೇರಿಸಿ ಮಾತನಾಡಿ, ಮೆಕ್ಕಜೋಳ ಖರೀದಿ ಕೇಂದ್ರ ತೆರೆಯಲಾಗಿದೆ ಹಾಗೂ ಭತ್ತ ಖರೀದಿ ಕೇಂದ್ರದಲ್ಲಿ ಜ್ಯೋತಿ ಭತ್ತವನ್ನು ಸ್ವೀಕರಿಸುವಂತೆ ವ್ಯವಸ್ಥೆ ಮಾಡಲಾಗಿದೆ. ಅಲ್ಲದೆ ರೈತರ ಉತ್ಪನ್ನಗಳ್ನು ಸುರಕ್ಷತವಾಗಿಡಲು ಅಜ್ಜಂಪುರ ಭಾಗದಲ್ಲಿ ಶೀಘ್ರದಲ್ಲೇ ಶೀತಲೀಕರಣ ಕೇಂದ್ರ ಪ್ರಾರಂಭಿಸಲಾಗುವುದು ಎಂದರು.
ಎಪಿಎಂಸಿ ಅಧ್ಯಕ್ಷ ಶಿವಕುಮಾರ್, ತಾ.ಪಂ.ಅಧ್ಯಕ್ಷೆ ಶಕುಂತಲ  ನಾಗರಾಜ್  ಜ.ಪಂ.ಮಾಜಿ ಅಧ್ಯಕ್ಷ ಎಚ್.ವಿಶ್ವನಾಥ್,ಎ.ಸಿ.ಚಂದ್ರಪ್ಪ, ಬೇಲೇನಹಳ್ಳಿ ಸೋಮಶೇಖರ್, ಆಹಾರ ಮತ್ತು ನಾಗರೀಕ ಸರಬರಾಜ ಇಲಾಖೆ ಸಹಾಯಕ ವ್ಯವಸ್ಥಾಪಕ ಮಂಜುನಾಥ್, ಮತ್ತಿತರರು ಮಾತನಾಡಿದರು.
ಸಮಿತಿ ಉಪಾಧ್ಯಕ್ಷೆ ಸುಮಾ, ಸಮಿತಿ ಸದಸ್ಯರು, ಸಮಿತಿಯ ನೂತನ ನಾಮಕರಣ ಸದಸ್ಯರಾದ ಸಿ.ಎಸ್.ಮರಿಯಪ್ಪ, ಟಿ.ಎಚ್.ಕೃಷ್ಣಮೂರ್ತಿ, ಜ.ಪಂ.ಸದಸ್ಯ ಕೆ.ಪಿ.ಕುಮಾರ್, ಪುರಸಭೆ ಸದಸ್ಯರು, ಮತ್ತಿತರರು ಉಪಸ್ಥಿತರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.