ಖಾತ್ರಿ ಸದುಪಯೋಗವಾಗಲಿ: ಗ್ರಾಪಂ ಅಧ್ಯಕ್ಷ ದಿನೇಶರಾಜ್
ಚಿಕ್ಕಮಗಳೂರು: ಕೇಂದ್ರ ಸರ್ಕಾರದ ಮಹಾತ್ಮಾಕಾಂಕ್ಷಿ ಯೋಜನೆ ಉದ್ಯೋಗ ಖಾತ್ರಿ ಯೋಜನೆಯಲ್ಲಿ ಸೇರ್ಪಡೆಗೊಳ್ಳುವ ಮೂಲಕ ಗ್ರಾಮೀಣ ಜನತೆ ನಿರುದ್ಯೋಗ ಸಮಸ್ಯೆಯಿಂದ ಮುಕ್ತರಾಗಬೇಕು ಎಂದು ತೇಗೂರು ಗ್ರಾಮ ಪಂಚಾಯಿತಿ ಅಧ್ಯಕ್ಷ ದಿನೇಶ್ರಾಜ್ ಅರಸ್ ಹೇಳಿದ್ದಾರೆ.
ಗ್ರಾಪಂ ಕಚೇರಿಯಲ್ಲಿ ಮಂಗಳವಾರ ನಡೆದ ಯೋಜನೆಯ ಕಾರ್ಯಾಗಾರದ ಅಧ್ಯಕ್ಷತೆ ವಹಿಸಿ ಕಾಯಕ ಬಂಧುಗಳಿಗೆ ಗುರುತಿನ ಚೀಟಿ ವಿತರಿಸಿ ಅವರು ಮಾತನಾಡಿದರು.
ಗ್ರಾಮೀಣ ಪ್ರದೇಶದಲ್ಲಿ ನಿರುದ್ಯೋಗ ಸಮಸ್ಯೆ ನಿವಾರಣೆ ಮಾಡುವುದರ ಜೊತೆಗೆ ಗ್ರಾಮೀಣರನ್ನು ಆರ್ಥಿಕವಾಗಿ ಸದೃಢಗೊಳಿಸುವ ಮಹಾತ್ಮಾಕಾಂಕ್ಷೆ ಯೋಜನೆ ಉದ್ಯೋಗ ಖಾತ್ರಿ. ರೈತರು ಮತ್ತು ಕೃಷಿ ಕಾರ್ಮಿಕರು ಇದರ ಲಾಭ ಪಡೆಯಬೇಕು ಎಂದರು.
ಕಾರ್ಯಾಗಾರ ಉದ್ಘಾಟಿದ ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಜಿ. ಧನರಾಜ್, ಉದ್ಯೋಗ ಖಾತ್ರಿ ಯೋಜನೆ ಕುರಿತು ಗ್ರಾಮೀಣ ಜನತೆಗೆ ವಿವರ ನೀಡಿದರು.
ಡಿಸೆಂಬರ್ ತಿಂಗಳ ಮಾಹಿತಿ ಶಿಕ್ಷಣ ಸಂವಹನ ಕಾರ್ಯಕ್ರಮಕ್ಕೆ ಇದೇ ವೇಳೆ ಚಾಲನೆ ನೀಡಲಾಯಿತು. ತಾಪಂ ಸಹಾಯಕ ನಿರ್ದೇಶಕ ಗಂಗಾಧರಪ್ಪ, ಗ್ರಾಪಂ ಉಪಾಧ್ಯಕ್ಷೆ ಹೇಮಾ, ಅಭಿವೃದ್ಧಿ ಅಧಿಕಾರಿ ಕೆ. ಶೇಖ್ ಅಹ್ಮದ್, ಐಇಸಿ ಸಂಯೋಜಕ ಲೋಹಿತ್ ಉಪಸ್ಥಿತರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

