ಮಹಿಳಾ ಸ್ವಸಹಾಯ ಗುಂಪಿನಿಂದ ಆರ್ಥಿಕ ಸಬಲತೆ: ಸುಜಾತಾ
ನರಸಿಂಹರಾಜಪುರ: ಮಹಿಳಾ- ಮಕ್ಕಳ ಅಭಿವೃದ್ಧಿ ಇಲಾಖೆ ಆಶ್ರಯದಲ್ಲಿ ಸಮಗ್ರ ಶಿಶು ಅಭಿವೃದ್ಧಿ ಯೋಜನೆಯಡಿ ಸ್ತ್ರೀಶಕ್ತಿ ಬ್ಲಾಕ್ ಸೊಸೈಟಿ, ಗೊಂಚಲು ಗುಂಪಿನ ಸದಸ್ಯರಿಗೆ ಒಂದು ದಿನದ ತರಬೇತಿ ಕಾರ್ಯಾಗಾರವು ಅಂಬೇಡ್ಕರ್ ಭವನದಲ್ಲಿ ಬುಧವಾರ ನಡೆಯಿತು. ಜಿಲ್ಲಾ ಪಂಚಾಯ್ತಿ ಉಪಾಧ್ಯಕ್ಷೆ ಸುಜಾತಾ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು. ಅಧ್ಯಕ್ಷತೆ ವಹಿಸಿದ್ದ ತಾಪಂ ಅಧ್ಯಕ್ಷ ಜೆ.ಜಿ. ನಾಗರಾಜ್ ಮಾತನಾಡಿ, ದೇಶದಲ್ಲಿ ಎಲ್ಲಾ ರಂಗದಲ್ಲೂ ಶೇ.33ರಷ್ಚು ಮೀಸಲಾತಿಯನ್ನು ಮಹಿಳೆಯರಿಗೆ ಮೀಸಲಿಡಬೇಕು ಎಂಬ ಕಾನೂನು ಇದ್ದರೂ ಸದ್ಯದ ಪರಿಸ್ಥಿತಿಯಲ್ಲಿ ಶೇ.33ಕ್ಕಿಂತ ಜಾಸ್ತಿ ಮಹಿಳೆಯರು ಎಲ್ಲಾ ರಂಗದಲ್ಲೂ ಸಕ್ರಿಯವಾಗಿದ್ದು ಯಶಸ್ವಿಯಾಗಿದ್ದಾರೆ ಎಂದರು. ಶಿಶು ಯೋಜನಾ ಅಭಿವೃದ್ಧಿ ಅಧಿಕಾರಿ ಜ್ಯೋತಿಲಕ್ಷ್ಮಿ ಪ್ರಾಸ್ತಾವಿಕವಾಗಿ ಮಾತನಾಡಿದರು. ತಾಪಂ ಇಒ ಜಗದೀಶ್, ಸ್ತ್ರೀಶಕ್ತಿ ಬ್ಲಾಕ್ ಸೊಸೈಟಿಯ ಅಧ್ಯಕ್ಷೆ ಮಾಲತಿ, ಆರೋಗ್ಯ ಇಲಾಖೆಯ ಲಲಿತ, ಕೆಎಂಎಫ್ನ ಮಾರುಕಟ್ಟೆ ಅಧಿಕಾರಿ ರಘು, ರಾಜೇಶ್ ಹಾಜರಿದ್ದರು. ಶಶಿಕಲಾ ಪ್ರಾರ್ಥಿಸಿ, ರತ್ನ ನಿರೂಪಿಸಿ, ಜ್ಯೋತಿಲಕ್ಷ್ಮಿ ವಂದಿಸಿದರು. ಸ್ತ್ರೀಶಸ್ತಿ ಸಂಘದ ಸದಸ್ಯರು, ಸ್ವಸಹಾಯ ಗುಂಪಿನ ಮಹಿಳಾ ಸದಸ್ಯರು ತರಬೇತಿಯಲ್ಲಿ ಪಾಲ್ಗೊಂಡಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

