ಚಿಕ್ಕಮಗಳೂರು

ದತ್ತಪೀಠದಲ್ಲಿ ಹೊರ ಜಿಲ್ಲೆಗಳವರಿಂದಅಶಾಂತಿಗೆ ಯತ್ನ: ದೇವರಾಜ್ ಆರೋಪ

Published On :

ಚಿಕ್ಕಮಗಳೂರು:  ರಾಜಕೀಯ ಪ್ರೇರಿತ ಸಂಘ ಸಂಸ್ಥೆಗಳು ದತ್ತಪೀಠದಲ್ಲಿ ನಡೆಸುವ ಕಾರ್ಯಕ್ರಮಗಳನ್ನು ನಿಷೇಧಿಸಬೇಕೆಂದು ಜೆಡಿಎಸ್ ಜಿಲ್ಲಾ ಮಾಜಿ ಅಧ್ಯಕ್ಷ ಎಚ್.ಎಚ್. ದೇವರಾಜ್ ಸರ್ಕಾರವನ್ನು ಆಗ್ರಹಿಸಿದ್ದಾರೆ.
ಸ್ಥಳೀಯರು ದತ್ತಪೀಠಕ್ಕೆ ಹೋಗಿ ದಾಂಧಲೆ ಮಾಡುತ್ತಿಲ್ಲ. ಹೊರ ಜಿಲ್ಲೆಗಳಿಂದ ದತ್ತಪೀಠಕ್ಕೆ ಬರುವವರು ಶಾಂತಿ ಕದಡುವ ಕೆಲಸ ಮಾಡುತ್ತಿದ್ದಾರೆ. ಭಾವನಾತ್ಮಕ ವಿಷಯಗಳನ್ನು ಕೆಣಕುವ ಕೆಲಸ ಮಾಡುತ್ತಿದ್ದಾರೆ ಎಂದು ಸುದ್ದಿಗೋಷ್ಠಿಯಲ್ಲಿ ಬುಧವಾರ ತಿಳಿಸಿದರು.
ಶಾಂತಿ ಮತ್ತು ಸೌಹಾರ್ದಯುತವಾದ ಜಿಲ್ಲೆಯಲ್ಲಿ ಜಾತಿ ಮತ್ತು ಧರ್ಮದ ವಿಷಯದಲ್ಲಿ ವಿಷಬೀಜ ಬಿತ್ತುವ ಕೆಲಸ ಸಂಘ ಪರಿವಾರ ಮಾಡುತ್ತಿದೆ. ಚಿಕ್ಕಮಗಳೂರು ನಗರದಲ್ಲಿ ಶೋಭಾಯಾತ್ರೆ ಹಾಗೂ ದತ್ತಪೀಠದಲ್ಲಿ ನಡೆದ ಧಾರ್ಮಿಕ ಸಭೆಯಲ್ಲಿ ಭಾಗವಹಿಸಿದ್ದ ಮಾಜಿ ಸಚಿವರು, ಶಾಸಕರು, ಮಠಾಧೀಶರು ಪ್ರಚೋದನಕಾರಿ ಭಾಷಣ ಮಾಡಿದ್ದಾರೆ. ಬಿಜೆಪಿ ಅಧಿಕಾರದಲ್ಲಿದ್ದಾಗ ಏನೂ ಮಾತನಾಡದ ಶಾಸಕ ಸಿ.ಟಿ.ರವಿ ಅವರು, ಇದೀಗ ದತ್ತಪೀಠದ ವಿಷಯದಲ್ಲಿ ತಾಳ್ಮೆ ಪರೀಕ್ಷೆ ಮಾಡಬಾರದು ಎಂದು ಹೇಳಿದ್ದಾರೆ. ಮುಂದಿನ ಲೋಕಸಭಾ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಈ ರೀತಿಯ ಹೇಳಿಕೆ ನೀಡುತ್ತಿದ್ದಾರೆ ಜಿಲ್ಲೆಯ ಶಾಂತಿ ಸುವ್ಯವಸ್ಥೆ ಕಾಪಾಡುವಲ್ಲಿ ವಿಫಲವಾಗಿರುವ ಜಿಲ್ಲಾ ಉಸ್ತುವಾರಿ ಸಚಿವರು, ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದರು.
ಅಡಿಕೆ ವಿಷಪೂರಿತ ವಸ್ತು ಎಂದು ಕೇಂದ್ರ ಸರ್ಕಾರ ಸುಪ್ರೀಂಕೋರ್ಟ್‌ಗೆ ಪ್ರಮಾಣಪತ್ರ ಸಲ್ಲಿಸಿದೆ. ಈ ಕುರಿತು ಪುನರ್ ಪರಿಶೀಲನೆ ನಡೆಸುವಂತೆ ನ್ಯಾಯಾಲಯಕ್ಕೆ ಮನವಿ ಮಾಡಬೇಕು. ಈ ವಿಷಯದಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರ ಹಾರಿಕೆ ಉತ್ತರ ನೀಡಬಾರದು. ಜವಬ್ದಾರಿಯಿಂದ ನುಣುಚಿಕೊಂಡಿದ್ದೆಯಾದರೆ ಇದು, ಅಡಿಕೆ ಬೆಳೆಗಾರರ ಪಾಲಿಗೆ ಮರಣ ಶಾಸನವಾಗಲಿದೆ ಎಂದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.