ಚಿಕ್ಕಮಗಳೂರು

ಮಕ್ಕಳು ಸಹಜವಾಗಿ ಕಲಿಯುವಂತಾಗಲಿ

Published On :

ಸಾಗರ: ಪ್ರಾಥಮಿಕ ಹಂತದಲ್ಲಿ ಮಕ್ಕಳು ಸಹಜವಾಗಿ ಕಲಿಯುವಂತಾಗಬೇಕು ಎಂದು ಸಾಹಿತಿ ಡಾ. ನಾ. ಡಿಸೋಜ ಹೇಳಿದರು.
ಪಟ್ಟಣದ ಸಂತ ಜೋಸೆಫರ ಕನ್ನಡ ಮಾಧ್ಯಮ ಶಾಲೆಯ ವಾರ್ಷಿಕೋತ್ಸವ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿ, ಪ್ರಾಥಮಿಕ ಹಂತದಲ್ಲಿ ಮಕ್ಕಳ ಮೇಲೆ ಪೋಷಕರು ಹಾಗೂ ಶಿಕ್ಷಕರು ಒತ್ತಡ ಹೇರಿದರೆ ಅವರ ಮುಗ್ಧ ಮನಸ್ಸಿನ ಮೇಲೆ ವ್ಯತಿರಿಕ್ತ ಪರಿಣಾಮ ಬೀರುತ್ತದೆ ಎಂದು ಅಭಿಪ್ರಾಯಪಟ್ಟರು.
ಪ್ರಾಥಮಿಕ ಹಂತದಲ್ಲಿ ಮಕ್ಕಳಿಗೆ ಶಿಕ್ಷಣ ಶಿಕ್ಷೆಯಾಗಬಾರದು. ಆಟವಾಡುತ್ತ, ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ಪಾಲ್ಗೊಳ್ಳುತ್ತ ಪರಿಸರದೊಂದಿಗೆ ಕಲಿಯಬೇಕು. ಕೇವಲ ನಾಲ್ಕು ಗೋಡೆಗಳ ಶಿಕ್ಷಣದಿಂದ ಪರಿಪೂರ್ಣ ವ್ಯಕ್ತಿತ್ವ ನಿರ್ಮಾಣವಾಗುವುದಿಲ್ಲ. ಪುಸ್ತಕದ ಶಿಕ್ಷಣದ ಜೊತೆಗೆ ಸಮಾಜದಲ್ಲಿ ಹೇಗೆ ಬದುಕಬೇಕು, ಬದುಕನ್ನು ಹೇಗೆ ಎದುರಿಸಬೇಕು, ನಮ್ಮ ನಡತೆ ಹೇಗಿರಬೇಕು ಎನ್ನುವ ಬದುಕಿನ ಶಿಕ್ಷಣ ಕಲಿಸಬೇಕು ಎಂದು ಸಲಹೆ ಮಾಡಿದರು. ಎಲ್ಲ ಮಕ್ಕಳಲ್ಲಿಯೂ ಒಂದಿಲ್ಲೊಂದು ಪ್ರತಿಭೆ ಇರುತ್ತದೆ. ಮಕ್ಕಳ ಪ್ರತಿಭೆಯನ್ನು ಮನೆಯಲ್ಲಿ ಪೋಷಕರು, ಶಾಲೆಯಲ್ಲಿ ಶಿಕ್ಷಕರು ಗುರುತಿಸದಿದ್ದರೆ ಅದು ಕಮರಿ ಹೋಗುತ್ತದೆ. ಎಲ್ಲ ಪೋಷಕರು ತಮ್ಮ ಮಕ್ಕಳ ಏಳಿಗೆ ಬಯಸುತ್ತಾರೆ. ಆದರೆ, ಆ ದಿಸೆಯಲ್ಲಿ ತಮ್ಮ ಜವಾಬ್ದಾರಿ ಏನೆಂಬುದರ ಬಗ್ಗೆ ಚಿಂತಿಸುವುದಿಲ್ಲ ಎಂದು ಹೇಳಿದರು.
ಕ್ಷೇತ್ರ ಶಿಕ್ಷಣಾಧಿಕಾರಿ ಪಿ. ಲಿಂಗಪ್ಪ, ಸರ್ಕಾರ ಶಿಕ್ಷಣ ಕ್ಷೇತ್ರಕ್ಕೆ ಇನ್ನಿಲ್ಲದಷ್ಟು ಪ್ರೋತ್ಸಾಹ ನೀಡುತ್ತಿದೆ. ಶಾಲೆಗಳು ಹಾಗೂ ವಿದ್ಯಾರ್ಥಿಗಳು ಸರ್ಕಾರದ ಯೋಜನೆಗಳನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದು ಹೇಳಿದರು. ಧರ್ಮಗುರುಗಳಾದ ವೀನಸ್ ಇದ್ದರು.
--
ನಾಳೆ ಬಿಲ್ಲವ ಸಮಾಜ ಉದ್ಘಾಟನೆ
ಶೃಂಗೇರಿ:  ಪಟ್ಟಣದ ಡಾ.ಗೌರೀಶಂಕರ ಸಭಾಂಗಣದಲ್ಲಿ ಭಾನುವಾರ ಬ್ರಹ್ಮಶ್ರೀ ನಾರಾಯಣಗುರು ಬಿಲ್ಲವ ಸಮಾಜ ಶೃಂಗೇರಿ ಘಟಕದ ಉದ್ಘಾಟನಾ ಸಮಾರಂಭ ನಡೆಯಲಿದೆ. ಬೆಳಗ್ಗೆ 10 ಗಂಟೆಗೆ ರಾಷ್ಟ್ರೀಯ ಬಿಲ್ಲವ ಮಹಾಮಂಡಳಿ ಅಧ್ಯಕ್ಷ ಜಯಶೀ ಸುವರ್ಣ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ.  ತಾಲೂಕು ಬಿಲ್ಲವ ಸಮಾಜದ ಅಧ್ಯಕ್ಷ ಮಹಾಬಲ ಪೂಜಾರಿ ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ನಗರಾಭಿವೃದ್ಧಿ ಸಚಿವ ವಿನಯಕುಮಾರ್ ಸೊರಕೆ, ರಾಜ್ಯ ಯುವಜನ ಮತ್ತು ಮೀನುಗಾರಿಕೆ ಹಾಗೂ ಸಚಿವ ಅಭಯಚಂದ್ರ ಜೈನ್, ಸಂಸದ ಕೆ.ಜಯಪ್ರಕಾಶ್ ಹೆಗ್ಡೆ, ಕೋಟ ಶ್ರೀನಿವಾಸ ಪೂಜಾರಿ, ಗಾಯತ್ರಿ ಶಾಂತೇಗೌಡ, ಶಾಸಕ ಡಿ.ಎನ್. ಜೀವರಾಜ್ ಮತ್ತಿತರರು ಪಾಲ್ಗೊಳ್ಳಲಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.