ಸುರಕ್ಷಿತ ರಸ್ತೆಯಿಂದ ಅಪಘಾತ ನಿಯಂತ್ರಣ
ಶೃಂಗೇರಿ: ರಸ್ತೆಗಳಲ್ಲಿನ ಗುಂಡಿಗಳನ್ನು ಮುಚ್ಚುವುದು, ಚರಂಡಿ ಸ್ವಚ್ಛತೆ ಮುಂತಾದ ಮುಂಜಾಗರೂಕತೆಯ ಕ್ರಮಗಳಿಂದ ಅಪಘಾತಗಳನ್ನು ನಿಯಂತ್ರಿಸಲು ಸಾಧ್ಯವಿದೆ ಎಂದು ಮೆಣಸೆ ಗ್ರಾಮ ಪಂಚಾಯಿತಿ ಸದಸ್ಯ ಎಂ.ಎಲ್. ಶಿವಶಂಕರ್ ತಿಳಿಸಿದರು. ಮೆಣಸೆ ಪಂಚಾಯಿತಿ ವ್ಯಾಪ್ತಿಯ ಮೆಣಸೆ ಕಿಕ್ರೆ ಕೂಡು ರಸ್ತೆಗೆ ಶೃಂಗೇರಿ ಸರ್ಕಾರಿ ಜೂನಿಯರ್ ಕಾಲೇಜಿನ ಎನ್ಎಸ್ಎಸ್ ಘಟಕದ ಸಹಯೋಗದೊಂದಿಗೆ ಆಯೋಜಿಸಲಾಗಿದ್ದ ಶ್ರಮದಾನ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.
ಗ್ರಾಮೀಣ ಪ್ರದೇಶಗಳಲ್ಲಿ ರಸ್ತೆಗಳು, ಚರಂಡಿಗಳು ನೀರಿನಿಂದ ಮುಚ್ಚಿರುತ್ತದೆ. ರಸ್ತೆಯ ಪಕ್ಕದಲ್ಲಿ ಗಿಡಗಳು ಬೆಳೆದು ರಸ್ತೆ ಸಂಚಾರಕ್ಕೆ ತೊಡಕು ಉಂಟುಮಾಡುತ್ತದೆ. ಇದು ಅಪಘಾತಗಳಿಗೆ ಕಾರಣವಾಗುತ್ತದೆ. ಗ್ರಾಮಸ್ಥರು, ಸಂಘಸಂಸ್ಥೆಗಳು ಪರಸ್ಪರ ಸಹಕಾರದಿಂದ ಶ್ರಮದಾನದ ಮೂಲಕ ಸ್ವಚ್ಛತೆ ಕಾಪಾಡಬೇಕು ಎಂದರು. ಕಾರ್ಯಕ್ರಮದಲ್ಲಿ ಸಸಿಮನೆ ಶಿವಶಂಕರ್, ಸರ್ಕಾರಿ ಜೂನಿಯರ್ ಕಾಲೇಜಿನ ಎನ್ಎಸ್ಎಸ್ ಘಟಕದ ಅಧಿಕಾರಿ ಶ್ರೀಮಂದಾರ ಮತ್ತಿತರರು ಉಪಸ್ಥಿತರಿದ್ದರು.
ನಾಗಬ್ರಹ್ಮ ದೀಪೋತ್ಸವ
ಶೃಂಗೇರಿ: ತಾಲೂಕಿನ ಮರ್ಕಲ್ ಪಂಚಾಯಿತಿ ಯಡದಾಳು ಗ್ರಾಮದ ಹೊಳೆಹೊದ್ದು ನಾಗಬ್ರಹ್ಮ ದೇವಾಲಯದಲ್ಲಿ ವಿಜೃಂಭಣೆಯ ದೀಪೋತ್ಸವ ಕಾರ್ಯಕ್ರಮ ನಡೆಯಿತು.
ದೀಪೋತ್ಸವದ ಅಂಗವಾಗಿ ಇಲ್ಲಿನ ದೇವಾಲಯದ ಮುಖ್ಯಸ್ಥ ರವೀಶ್ ಆಚಾರಿ ಸಮ್ಮುಖದಲ್ಲಿ ವಿಶೇಷ ಪೂಜೆ ಸೇರಿದಂತೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನೆರವೇರಿತು. ನೆರೆದ ಭಕ್ತಾದಿಗಳಿಗೆ ಪ್ರಸಾದ ವಿನಿಯೋಗ ಆಯೋಜಿಸಲಾಗಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

