ಚಿಕ್ಕಮಗಳೂರು

ಸುದ್ದಿ ಸಂಕ್ಷೇಪ

Published On :

ಪ್ರೊಜೆಕ್ಟ್ ಅಸಿಸ್ಟೆಂಟ್ ಹುದ್ದೆಗೆ ಆಹ್ವಾನ
ಚಿಕ್ಕಮಗಳೂರು: ಕುವೆಂಪು ವಿಶ್ವವಿದ್ಯಾನಿಲಯ ಸ್ನಾತಕೋತರ ಕೇಂದ್ರ, ಕಡೂರು ಹಾಗೂ ಡಿಎಸ್‌ಟಿ ಇಂಡಿಯಾ ವತಿಯಿಂದ ಸಂಶೋಧನೆ ಕೈಗೊಳ್ಳುವ ಸಂಬಂಧ ಪ್ರೊಜೆಕ್ಟ್ ಅಸಿಸ್ಟೆಂಟ್ ಹುದ್ದೆಯ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು 2014 ರ ಜ. 15 ಕೊನೆಯ ದಿನ. ಎಂಎಸ್ಸಿ ಕೆಮಿಸ್ಟ್ರಿಯಲ್ಲಿ ಉತ್ತೀರ್ಣರಾದವರು ಅರ್ಜಿ ಸಲ್ಲಿಸಬಹುದಾಗಿದ್ದು, ಹೆಚ್ಚಿನ ಮಾಹಿತಿಗಾಗಿ ನಿರ್ದೇಶಕರು, ಡಾ. ಕೆ.ಎಂ. ಮಹಾದೇವನ್, ಪ್ರಾಧ್ಯಾಪಕರು ಹಾಗೂ ಪ್ರಧಾನ ಸಂಶೋಧಕರು, ಸ್ನಾತಕೋತ್ತರ ರಸಾಯನಶಾಸ್ತ್ರ, ಅಧ್ಯಯನ ವಿಭಾಗ, ಪಿ.ಸಿ. ಸೆಂಟರ್, ಕಡೂರು ದೂ. 08267- 213655, ಮೊ. 9164621170 ಸಂಪರ್ಕಿಸಲು ಪ್ರಕಟಣೆಯಲ್ಲಿ ತಿಳಿಸಿದೆ.
ರಾಷ್ಟ್ರೀಯ ಗ್ರಾಹಕರ ದಿನಾಚರಣೆ  
ಚಿಕ್ಕಮಗಳೂರು: ಜಿಲ್ಲಾಡಳಿತ, ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ, ವಾರ್ತಾ ಮತ್ತು ಪ್ರಚಾರ ಇಲಾಖೆ, ಕಾನೂನು ಮಾಪನಶಾಸ್ತ್ರ ಇಲಾಖೆ ಹಾಗೂ ಗ್ರಾಹಕರ ಹಕ್ಕು ಶಿಕ್ಷಣ ಮತ್ತು ಅರಿವು ವೇದಿಕೆ ಚಿಕ್ಕಮಗಳೂರು ಇವರ ಆಶ್ರಯದಲ್ಲಿ ಡಿ. 24 ರಂದು ಬೆಳಗ್ಗೆ 9.30 ಕ್ಕೆ ವಾರ್ತಾ ಭವನದಲ್ಲಿ ರಾಷ್ಟ್ರೀಯ ಗ್ರಾಹಕರ ದಿನಾಚರಣೆ ಹಮ್ಮಿಕೊಳ್ಳಲಾಗಿದೆ. ಜಿಲ್ಲಾ ಗ್ರಾಹಕರ ವೇದಿಕೆಯ ನಿವೃತ್ತ ಸದಸ್ಯ ಎಚ್.ಎಸ್. ರುದ್ರಪ್ಪ ಕಾರ್ಯಕ್ರಮ ಉದ್ಘಾಟಿಸಲಿದ್ದು, ಜಿಲ್ಲಾಧಿಕಾರಿ ಬಿ.ಎಸ್. ಶೇಖರಪ್ಪ ಅಧ್ಯಕ್ಷತೆ ವಹಿಸಲಿದ್ದಾರೆ. ಅಪರ ಜಿಲ್ಲಾಧಿಕಾರಿ ಕೆ.ಪಿ. ಹೊನಕೇರಿ ಮುಖ್ಯ ಭಾಷಣ ಮಾಡಲಿದ್ದಾರೆ.
ಸಭೆ ಮುಂದೂಡಿಕೆ
ಚಿಕ್ಕಮಗಳೂರು: ಪ್ರಾದೇಶಿಕ ಸಾರಿಗೆ ಪ್ರಾಧಿಕಾರ ವತಿಯಿಂದ ಡಿ. 23 ರಂದು ಏರ್ಪಡಿಸಿದ್ದ ಪ್ರಾದೇಶಿಕ ಸಾರಿಗೆ ಪ್ರಾಧಿಕಾರ ಸಭೆಯನ್ನು ಅನಿವಾರ್ಯ ಕಾರಣಗಳಿಂದ ಮುಂದೂಡಲಾಗಿದೆ ಎಂದು ಕಾರ್ಯದರ್ಶಿ, ಪ್ರಾದೇಶಿಕ ಸಾರಿಗೆ ಪ್ರಾಧಿಕಾರ ಚಿಕ್ಕಮಗಳೂರು ಇವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ರೈತ ದಿನಾಚರಣೆ
ತರೀಕೆರೆ:  ತಾಲೂಕು ಕೃಷಿಕ ಸಮಾಜ ಕೃಷಿ ಇಲಾಖೆ ತರೀಕೆರೆ ವತಿಯಿಂದ ಸಮೀಪದ ಲಿಂಗದಹಳ್ಳಿ ಕೃಷಿ ತರಬೇತಿ ಕೇಂದ್ರದಲ್ಲಿ ಡಿ.23ರಂದು ಬೆಳಗ್ಗೆ 10.30 ಗಂಟೆಗೆ ಅಂತರರಾಷ್ಟ್ರೀಯ ರೈತ ದಿನಾಚರಣೆ ಏರ್ಪಡಿಸಲಾಗಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.