ಅರ್ಜಿ ಆಹ್ವಾನ
ಚಿಕ್ಕಮಗಳೂರು: ವಾರ್ತಾ ಇಲಾಖೆ ವತಿಯಿಂದ ಛಾಯಾ ಮತ್ತು ಚಲನಚಿತ್ರ ಶಾಖೆಯಿಂದ ವಿಶೇಷ ಘಟಕ ಯೋಜನೆಯಡಿ ಪರಿಶಿಷ್ಟ ಜಾತಿಯ 40 ನಿರುದ್ಯೋಗಿ ಪದವೀಧರ ಯುವಕ- ಯುವತಿಯರಿಗೆ ಎಲೆಕ್ಟ್ರಾನಿಕ್ ಮಾಧ್ಯಮದಲ್ಲಿ ಛಾಯಾಗ್ರಹಣ, ಸಂಕಲನ, ಮಲ್ಟಿಮೀಡಿಯಾದಲ್ಲಿ ಒಂದು ತಿಂಗಳ ಸರ್ಟಿಫಿಕೇಟ್ ಕೋರ್ಸ್ನ ರೀತಿಯಲ್ಲಿ ತಾಂತ್ರಿಕ ವೃತ್ತಿ ತರಬೇತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ತರಬೇತಿಯು ಮೈಸೂರು ವಿಶ್ವವಿದ್ಯಾನಿಲಯದ ಶೈಕ್ಷಣಿಕ ಬಹುಮಾಧ್ಯಮ ಸಂಶೋಧನಾ ಕೇಂದ್ರದಲ್ಲಿ 2014 ನೇ ಜನವರಿ- ಫೆಬ್ರವರಿ ಮಾಹೆಯಲ್ಲಿ ನಡೆಯಲಿದೆ. ಅರ್ಜಿ ಸಲ್ಲಿಸಲು ಡಿ.31 ಕೊನೆಯ ದಿನವಾಗಿದ್ದು, ಅರ್ಜಿ ನಮೂನೆಯನ್ನು ತಮ್ಮ ಸ್ವವಿರವುಳ್ಳ ಮಾಹಿತಿಯನ್ನು ಬಿಳಿ ಹಾಳೆಯಲ್ಲಿ ಬೆರಳಚ್ಚುಗೊಳಿಸಿ ಅಥವಾ ಕೈಯಿಂದ ಸ್ಪಷ್ಟವಾಗಿ ತಯಾರಿಸಿಕೊಂಡು ಭರ್ತಿ ಮಾಡಿದ ಅರ್ಜಿಯನ್ನು ದೃಢೀಕೃತ ಅಗತ್ಯ ದಾಖಲೆಗಳನ್ನು ನಿರ್ದೇಶಕರು ವಾರ್ತಾ ಇಲಾಖೆ, ವಾರ್ತಾ ಸೌಧ, ನಂ.17, ಭಗವಾನ್ ಮಹಾವೀರ ರಸ್ತೆ, ಬೆಂಗಳೂರು- 1 ಇಲ್ಲಿಗೆ ಖುದ್ದಾಗಿ ಅಥವಾ ಅಂಚೆ ಕೊರಿಯರ್ ಮೂಲಕ ತಾಂತ್ರಿಕ ವೃತ್ತಿ ತರಬೇತಿಗೆ ಅರ್ಜಿ ಎಂದು ಲಕೋಟೆಯಲ್ಲಿ ನಮೂದಿಸಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಉಪ ನಿರ್ದೇಶಕರು (ಚಲನಚಿತ್ರ), ವಾರ್ತಾ ಇಲಾಖೆ, ಬೆಂಗಳೂರು, ದೂರವಾಣಿ ಸಂಖ್ಯೆ 080-22028052/56 ಇವರನ್ನು ಸಂಪರ್ಕಿಸಲು ಪ್ರಕಟಣೆಯಲ್ಲಿ ತಿಳಿಸಿದೆ.
ರೈತರ ದಿನಾಚರಣೆ
ಕೃಷಿ ಇಲಾಖೆ, ತಾಲೂಕು ಕೃಷಿಕ ಸಮಾಜ, ಆರಂಭ ಸೇವಾ ಟ್ರಸ್ಟ್, ಜನಸ್ಪಂಧನ ಡೆವಲಪ್ಮೆಂಟ್ ಸೊಸೈಟಿ, ಚಿಕ್ಕಮಗಳೂರು ಹಾಗೂ ತಾಲೂಕಿನ ಎಲ್ಲಾ ರೈತ ಶಕ್ತಿ ಗುಂಪುಗಳ ಸಂಯುಕ್ತಾಶ್ರಯದಲ್ಲಿ ಸೋಮವಾರ ಬೆಳಿಗ್ಗೆ 10.30 ಕ್ಕೆ ನಗರದ ಜಂಟಿ ಕೃಷಿ ನಿರ್ದೇಶಕರ ಕಚೇರಿ ಸಭಾಂಗಣದಲ್ಲಿ ರೈತರ ದಿನಾಚರಣೆಯನ್ನು ಹಮ್ಮಿಕೊಳ್ಳಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

