ಚಿಕ್ಕಮಗಳೂರು

'ಸಮಾಜ ಸೇವೆಗೆ ವಿದ್ಯಾರ್ಥಿಗಳು ಮುಂದಾಗಿ'

Published On :

ಚಿಕ್ಕಮಗಳೂರು: ವಿದ್ಯಾರ್ಥಿ ದೆಸೆಯಿಂದಲೇ ಮಕ್ಕಳು ಪಾಠ ಪ್ರವಚನದ ಜೊತೆಗೆ ಸಮಾಜ ಸೇವೆಯಲ್ಲೂ ತೊಡಗಿಸಿಕೊಳ್ಳಬೇಕು ಎಂದು ಅಂಬಳೆ ಗ್ರಾಮ ಪಂಚಾಯ್ತಿ ಅಧ್ಯಕ್ಷೆ ಚಂದ್ರಮ್ಮ ಬೀರೇಗೌಡ ಕರೆ ನೀಡಿದ್ದಾರೆ.
ಅಂಬಳೆ ಗ್ರಾಮದಲ್ಲಿ ಚಿಕ್ಕಮಗಳೂರಿನ ವಿಶ್ವವಿದ್ಯಾಲಯ ಪ್ರೌಢಶಾಲೆಯ ಎನ್‌ಸಿಸಿ ವಿದ್ಯಾರ್ಥಿಗಳು ಭಾನುವಾರ ಹಮ್ಮಿಕೊಂಡಿದ್ದ ಸ್ವಚ್ಛತಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಪಾಠ ಪ್ರವಚನಗಳಲ್ಲಿ ಸ್ವಚ್ಛತೆ ಕುರಿತು ಬೋಧನೆ ಮಾಡಿದರೆ ಸಾಲದು, ಮಕ್ಕಳಲ್ಲಿ ನಗರ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ಸ್ವಚ್ಛತೆ ಕಾಪಾಡಿಕೊಳ್ಳುವ ಬಗ್ಗೆ ಅರಿವು ಮೂಡಿಸಬೇಕು. ಅಂತಹ ಕಾರ್ಯಕ್ರಮಗಳಲ್ಲಿ ತೊಡಗಿಸಿಕೊಳ್ಳುವಂತೆ ಪ್ರೋತ್ಸಾಹ ನೀಡಬೇಕಾದದ್ದು ಶಿಕ್ಷಕರು ಹಾಗೂ ಪೋಷಕರ ಕರ್ತವ್ಯ ಎಂದು ತಿಳಿಸಿದರು.
ವಿಶ್ವವಿದ್ಯಾಲಯ ವಿದ್ಯಾ ಸಂಸ್ಥೆಯ ಪ್ರಾಂಶುಪಾಲ ಆರ್. ಶ್ರೀನಿವಾಸ್ ಮಾತನಾಡಿ, ಶಾಲೆಯ ನ್ಯ್ಸಿಸಿ ವಿದ್ಯಾರ್ಥಿಗಳು ಅಂಬಳೆ ಗ್ರಾಮವನ್ನು ದತ್ತು ಗ್ರಾಮವನ್ನಾಗಿ ಸ್ವೀಕರಿಸಿ ಇಲ್ಲಿ ಸ್ವಚ್ಛತೆಗೆ ಹೆಚ್ಚಿನ ಆಧ್ಯತೆ ನೀಡುತ್ತಿದ್ದಾರೆ. ಮಕ್ಕಳು ಬೆಳಿಗಿನಿಂದ ಹುಮ್ಮಸ್ಸಿನಿಂದ ಸ್ವಚ್ಛತಾ ಕಾರ್ಯದಲ್ಲಿ ತೊಡಗಿದ್ದಾರೆ. ಇಲ್ಲಿನ ಗ್ರಾ.ಪಂ. ಸದಸ್ಯರು ಮಕ್ಕಳೊಂದಿಗೆ ಕೈಜೋಡಿಸಿ ಪ್ರೋತ್ಸಾಹಿಸಿರುವುದು ಸಂತಸ ತಂದಿದೆ ಎಂದರು.
ಕಾರ್ಯಕ್ರಮದಲ್ಲಿ ಎನ್‌ಸಿಸಿ ಅಧಿಕಾರಿ ಡಿ. ಸಿದ್ದಯ್ಯ ಮಕ್ಕಳಿಗೆ ಮಾರ್ಗದರ್ಶನ ನೀಡಿ, ಉಸ್ತುವಾರಿ ವಹಿಸಿಕೊಂಡಿದ್ದರು. ಎನ್‌ಸಿಸಿ ತಂಡದ ನಾಯಕರುಗಳಾದ ಕಿರಣ್ ಮತ್ತು ಸಂಜಯ್, ಗ್ರಾ.ಪಂ. ಉಪಾಧ್ಯಕ್ಷ ಕೃಷ್ಣೇಗೌಡ ಹಾಗೂ ಇತರೆ ಸದಸ್ಯರು ಉಪಸ್ಥಿತರಿದ್ದರು. 80 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಸ್ವಚ್ಛತಾ ಕಾರ್ಯದಲ್ಲಿ ಪಾಲ್ಗೊಂಡಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.