ಚಿಕ್ಕಮಗಳೂರು

ತರಬೇತಿ ಕಾರ್ಯಾಗಾರ

Published On :

ಶೃಂಗೇರಿ: ಪಟ್ಟಣದ ಸರ್ಕಾರಿ ಬಾಲಕಿಯರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಸಭಾಂಗಣದಲ್ಲಿ ಶಾಲಾಭಿವೃದ್ಧಿ ಸಮಿತಿ ಸದಸ್ಯರಿಗಾಗಿ ತರಬೇತಿ ಕಾರ್ಯಾಗಾರ ನಡೆಯಿತು. ಜಿಪಂ ಸದಸ್ಯ ಬಿ. ಶಿವಶಂಕರ್ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಶಾಲೆಯ ಸರ್ವಾಂಗೀಣ ಅಭಿವೃದ್ಧಿಯಲ್ಲಿ ಪೋಷಕರ ಪಾತ್ರ ಮಹತ್ತರವಾಗಿದೆ ಎಂದರು.
ಮುಖ್ಯ ಅತಿಥಿಗಳಾಗಿ ಜಿಪಂ ಮಾಜಿ ಉಪಾಧ್ಯಕ್ಷ ಮಾವಿನಕಾಡು ರಂಗನಾಥ್, ಲಕ್ಷ್ಮಿ ನರಸಿಂಹ ಮತ್ತಿತರರು ಉಪಸ್ಥಿತರಿದ್ದರು. ರಾಜಣ್ಣ  ಪ್ರಾಸ್ತಾವಿಕ ಮಾತನಾಡಿದರು. ವೀಣಾ ಸ್ವಾಗತಿಸಿ, ರಾಜಪ್ಪ ನಿರೂಪಿಸಿ ಓಂಕಾರಸ್ವಾಮಿ ವಂದಿಸಿದರು.

ಸ್ಪಂದಿಸದ ಸರ್ಕಾರ
ಕೊಪ್ಪ: ಇಂದಿನ ದಿನಗಳಲ್ಲಿ ಕೃಷಿ ಅವನತಿಯತ್ತ ಸಾಗುತ್ತಿರುವ ಸಮಯದಲ್ಲಿ ಸರ್ಕಾರ ಕೃಷಿಯ ಬೆಳವಣಿಗೆ ಪೂರಕವಾದ ವಾತಾವರಣ ಸೃಷ್ಟಿಸುವ ಬದಲು ರೈತರನ್ನು ಇನ್ನಷ್ಟು ಸಂಕಷ್ಟಕ್ಕೆ ಸಿಲುಕಿಸುವ ಕೆಲಸವನ್ನು ಸರ್ಕಾರ ಮಾಡುತ್ತಿರುವುದು ವಿಷಾದನೀಯ ಸಂಗತಿ ಎಂದು ತಾಲೂಕು ರೈತ ಸಂಘದ ಪ್ರಧಾನ ಕಾರ್ಯದರ್ಶಿ ನವೀನ್ ಕರವಾನೆ ವಿಷಾದ ವ್ಯಕ್ತಪಡಿಸಿದರು. ಕಾರ್ಯಕ್ರಮವನ್ನು ಜಿಲ್ಲಾ ಕೃಷಿಕ ಸಮಾಜದ ಅಧ್ಯಕ್ಷ ಬಿ.ಸಿ. ನರೇಂದ್ರ ಉದ್ಘಾಟಿಸಿದರು. ತಾಲೂಕು ರೈತ ಸಂಘದ ಅಧ್ಯಕ್ಷ ಹರೀಶ್, ತಾಪಂ ಅಧ್ಯಕ್ಷೆ ಪದ್ಮಾವತಿ ರಮೇಶ್, ಉಪಾಧ್ಯಕ್ಷ ಪೂರ್ಣಚಂದ್ರ, ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.