ರಾಷ್ಟ್ರಕವಿ ಜಿ.ಎಸ್.ಎಸ್ ನಿಧನಕ್ಕೆ ಸಂತಾಪ
ಬಾಳೆಹೊನ್ನೂರು: ಮಂಜೇಶ್ವರ ಗೋವಿಂದ ಪೈ ಮತ್ತು ಕುವೆಂಪುರವರ ನಂತರ ಮೂರನೇ ಕನ್ನಡದ ರಾಷ್ಟ್ರಕವಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದ ಜಿ.ಎಸ್. ಶಿವರುದ್ರಪ್ಪನವರ ನಿಧನ ಕನ್ನಡ ಸಾಹಿತ್ಯ ಲೋಕಕ್ಕೆ ತುಂಬಲಾರದ ನಷ್ಟವಾಗಿದೆ ಎಂದು ನರಸಿಂಹರಾಜಪುರ ತಾಲೂಕು ಚುಟುಕು ಸಾಹಿತ್ಯ ಪರಿಷತ್ ಅಧ್ಯಕ್ಷ ಚೈತನ್ಯ ವೆಂಕಿ ಹೇಳಿದ್ದಾರೆ.
ಜಿ.ಎಸ್.ಎಸ್. ನಿಧನದಿಂದ ನವೋದಯ ಸಾಹಿತ್ಯ ಪರಂಪರೆಯ ಕೊಂಡಿಯೊಂದು ಕಳಚಿದಂತಾಗಿದ್ದು, ಅವರಿಲ್ಲದೆ ಸಾಹಿತ್ಯ ಲೋಕ ಬಡವಾಗಿದೆ ಮತ್ತು ಬರಿದಾಗಿದೆ. ಕನ್ನಡ ಸಾಹಿತ್ಯ ಲೋಕಕ್ಕೆ ಅನನ್ಯ ಕೊಡುಗೆಗಳನ್ನು ನೀಡಿ ಹಲವು ಪ್ರಥಮಗಳಿಗೆ ಕಾರಣರಾಗಿದ್ದ, ಜಿ.ಎಸ್.ಎಸ್. ಕನ್ನಡಿಗರಿಗೆ ಪ್ರೇರಕ ಶಕ್ತಿಯಾಗಿ, ಅದಮ್ಯ ಚೇತನವಾಗಿದ್ದರು. ಎದೆ ತುಂಬಿ ಹಾಡಿದ ಕವಿಯು ತಮ್ಮ ಅನನ್ಯ ಸಾಹಿತ್ಯ ಸೇವೆಯು ಮೂಲಕ ಕನ್ನಡಿಗರೆಲ್ಲರ ಮನಸ್ಸಿನಲ್ಲಿ ಚಿರಸ್ಥಾಯಿಯಾಗಿ ಉಳಿಯಲಿದ್ದಾರೆ ಎಂದು ತಮ್ಮ ಸಂತಾಪ ಸೂಚಕ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಗಣ್ಯರ ಸಂತಾಪ
ತರೀಕೆರೆ: ರಾಷ್ಟ್ರಕವಿ ಜಿ.ಎಸ್. ಶಿವರುದ್ರಪ್ಪ ಅವರ ನಿಧನಕ್ಕೆ ಮಾಜಿ ಶಾಸಕ ಬಿ.ಆರ್. ನೀಲಕಂಠಪ್ಪ, ಕೆಪಿಸಿಸಿ ಸದಸ್ಯ ಟಿ.ವಿ. ಶಿವಶಂಕರಪ್ಪ, ಮಲೆನಾಡು ಪ್ರದೇಶ ಅಭಿವೃದ್ಧಿ ಮಂಡಳಿ ನಿಕಟಪೂರ್ವ ಅಧ್ಯಕ್ಷ ಎನ್.ಮಂಜುನಾಥ್, ಕನ್ನಡಶ್ರೀ ಬಿ.ಎಸ್. ಭಗವಾನ್, ಹಿರಿಯ ಪತ್ರಕರ್ತ ಎ.ವಿ. ನಾಗಭೂಷಣ್, ಎಚ್.ವಿ. ಸತ್ಯನಾರಾಯಣ್ ಪುರಸಭೆ ಸದಸ್ಯ ಟಿ.ಜಿ. ಅಶೋಕ್‌ಕುಮಾರ್ ಸಂತಾಪ ಸೂಚಿಸಿದ್ದಾರೆ.
ಜಿಎಸ್‌ಎಸ್ ನಿಧನಕ್ಕೆ ಸಂತಾಪ
ನರಸಿಂಹರಾಜಪುರ: ರಾಷ್ಟ್ರ ಕವಿ ಜಿ.ಎಸ್. ಶಿವರುದ್ರಪ್ಪ ನಿಧನಕ್ಕೆ ತಾಲೂಕು ಕಸಾಪ ಸಂತಾಪ ಸೂಚಿಸಿದೆ.
ತಾಲೂಕು ಕಸಾಪ ಅಧ್ಯಕ್ಷ ಎಸ್.ಜಿ. ಕೃಷ್ಣಮೂರ್ತಿ ಹಾಗೂ ಗೌರವ ಕಾರ್ಯದರ್ಶಿ ಭಾಗ್ಯಾ ನಂಜುಂಡಸ್ವಾಮಿ ಪತ್ರಿಕಾ ಹೇಳಿಕೆ ನೀಡಿ, ರಾಷ್ಟ್ರಕವಿ ಜಿ.ಎಸ್. ಶಿವರುದ್ರಪ್ಪ ಎದೆ ತುಂಬಿ ಹಾಡಿದ ಕನ್ನಡ ಕವಿಯಾಗಿದ್ದರು. ಭಾಗವಗೀತೆಗಳ ಸಾಹಿತ್ಯ ರಚಿಸುವ ಮೂಲಕ ಅವರು ಸಂಗೀತ ಲೋಕಕ್ಕೆ ತಮ್ಮದೇ ಆದ ಕೊಡುಗೆ ನೀಡಿದ್ದರು ಎಂದು ಶೋಕ ವ್ಯಕ್ತಪಡಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

