ಚಿಕ್ಕಮಗಳೂರು

ಮೂಲ ಸೌಕರ್ಯ ಒದಗಿಸಲು ಆಗ್ರಹ

Published On :

ಕನ್ನಡಪ್ರಭ ವಾರ್ತೆ, ತರೀಕೆರೆ, ಡಿ.23
ಎನ್‌ಎಸ್‌ಯುಐ ತಾಲೂಕು ಘಟಕ ವತಿಯಿಂದ ಸೋಮವಾರ ಪಟ್ಟಣದ ಬಾಲಕರ ಸ.ಪ. ಪೂರ್ವ ಕಾಲೇಜಿನ ವೇಳಾಪಟ್ಟಿ ಬದಲಾವಣೆ ಮಾಡುವಂತೆ ಮತ್ತು ಕಾಲೇಜಿಗೆ ಮೂಲ ಸೌಕರ್ಯ ಒದಗಿಸುವಂತೆ ಒತ್ತಾಯಿಸಿ ಪ್ರತಿಭಟನೆ ನಡೆಸಲಾಯಿತು.
ಈ ಸಂದರ್ಭದಲ್ಲಿ ಮಾತನಾಡಿದ ವಿದ್ಯಾರ್ಥಿಗಳು, ಪಟ್ಟಣದ ಬಾಲಕರ ಸರ್ಕಾರಿ ಪಪೂ ಕಾಲೇಜಿನಲ್ಲಿ 200ಕ್ಕೂ ಹೆಚ್ಚು ಅಧಿಕ ವಿದ್ಯಾರ್ಥಿಗಳು ಅಭ್ಯಾಸ ಮಾಡುತ್ತಿದ್ದಾರೆ. ಇದರಲ್ಲಿ ಬಹುತೇಕ ವಿದ್ಯಾರ್ಥಿಗಳು ಗ್ರಾಮೀಣ ಪ್ರದೇಶಕ್ಕೆ ಸೇರಿದವರು.
ಕಡುಬಡವರು, ಹಿಂದುಳಿದವರು, ಪರಿಶಿಷ್ಟ ಜಾತಿ, ಪಂಗಡಕ್ಕೆ ಸೇರಿದವರಾಗಿದ್ದಾರೆ. ಈ ಹಿಂದೆ ಕಾಲೇಜಿನ ವೇಳಾಪಟ್ಟಿಯೂ ಬೆಳಗ್ಗೆ 9.30 ರಿಂದ ಮಧ್ಯಾಹ್ನ 1.30 ರವರೆಗೆ ನಿಗದಿಯಾಗಿತ್ತು. ಈ ಅವಧಿಯಲ್ಲಿ ತರಗತಿಗಳು ನಡೆಯುತ್ತಿದ್ದವು. ಈ ಸಮಯವು ಗ್ರಾಮೀಣ ಪ್ರದೇಶದವರಿಗೆ ಸಾಕಷ್ಟು ಅನುಕೂಲವಾಗಿತ್ತು.
ಆದರೆ, ಕಾಲೇಜಿಗೆ ಹೊಸದಾಗಿ ಆಗಮಿಸಿದ ಪ್ರಾಂಶುಪಾಲರು ವೇಳಾಪಟ್ಟಿ ಬದಲಾವಣೆ ಮಾಡಿದ್ದಾರೆ. ಈ ನೂತನ ವೇಳಾ ಪಟ್ಟಿಯ ಪ್ರಕಾರ ಕಾಲೇಜಿನ ತರಗತಿಗಳು ಬೆಳಗ್ಗೆ 9.30 ರಿಂದ ಮಧ್ಯಾಹ್ನ 3.30 ರವರೆಗೆ ನಡೆಯಲಿದೆ. ಇದರಿಂದ ಗ್ರಾಮಾಂತರ ಪ್ರದೇಶದ ವಿದ್ಯಾರ್ಥಿಗಳಿಗೆ ತೊಂದರೆ ಎಂದು ಆರೋಪಿಸಿದರು.
ಈ ಕುರಿತು ಪ.ಪೂ. ಶಿಕ್ಷಣ ಇಲಾಖೆಯ ನಿರ್ದೇಶಕರು ಈ ಹಿಂದಿನಂತೆಯೇ ಕಾಲೇಜಿನ ವೇಳಾಪಟ್ಟಿ ನಿಗದಿ ಮಾಡಬೇಕು ಎಂದು ಆಗ್ರಹಿಸಿದರು.
ಮೂಲ ಸೌಕರ್ಯ: ಕಾಲೇಜಿನ ಕಟ್ಟಡ ಸಂಪೂರ್ಣ ಅವ್ಯವಸ್ಥೆಯ ಆಗರವಾಗಿ ಪರಿಣಮಿಸಿದೆ. ಕೊಠಡಿಗಳು ಸಂಪೂರ್ಣ ಶಿಥಿಲವಾಗಿದ್ದು, ಮಳೆ ಬಂದಾಗ ಸೋರುತ್ತದೆ.
ಗ್ರಂಥಾಲಯ ವ್ಯವಸ್ಥೆ ಉತ್ತಮವಾಗಿಲ್ಲ. ಸಮಸ್ಯೆಗಳ ಪರಿಹಾರಕ್ಕೆ ಪದವಿ ಪೂರ್ವ ಶಿಕ್ಷಣ ಇಲಾಖೆ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು. ಈ ಕುರಿತು ತಹಸೀಲ್ದಾರ್ ಅವರಿಗೆ ಮನವಿ ಪತ್ರ ಸಲ್ಲಿಸಲಾಯಿತು. ಎನ್‌ಎಸ್‌ಯುಐ ತಾಲೂಕು ಘಟಕದ ಅಧ್ಯಕ್ಷ ಎನ್.ವಿ. ಸುನೀಲ್, ಕೆ.ಎಂ. ಸಂತೋಷ್, ಕೆ.ವಿ. ಯತೀಶ್, ಎನ್.ವಿ. ಸತೀಶ್‌ಕುಮಾರ್, ಹೇಮಂತ್ ಅಮೃತಾಪುರ, ಶಿವರಾಜ್ ಕುಂಟಿನಮಡು, ವಿದ್ಯಾರ್ಥಿಗಳು ಮೆರವಣಿಗೆಯಲ್ಲಿ ಭಾಗವಹಿಸಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.