'ವಿದ್ಯಾರ್ಥಿಗಳು ಉತ್ತಮ ಮೌಲ್ಯ ರೂಢಿಸಿಕೊಳ್ಳಲಿ'
ಕ.ಪ್ರ.ವಾರ್ತೆ ಶೃಂಗೇರಿ ಡಿ.23
ವಿದ್ಯಾರ್ಥಿ ಜೀವನದಲ್ಲಿ ಗುರಿ ಬಗ್ಗೆ ಸ್ಪಷ್ಟ ನಿಲುವು ಇರಬೇಕು. ಜೊತೆಗೆ ಉತ್ತಮ ಮೌಲ್ಯ ಬೆಳೆಸಿಕೊಳ್ಳಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಪ್ರಸನ್ನಕುಮಾರ್ ತಿಳಿಸಿದರು.
ಪಟ್ಟಣದ ಆದಿಚುಂಚನಗಿರಿ ಸಮುದಾಯ ಭವನದಲ್ಲಿ ಮಂಗಳೂರಿನ ಸ್ವರೂಪ್ ಅಧ್ಯಯನ ಕೇಂದ್ರ, ಭಾರತ್ ವಿಕಾಸ್ ಪರಿಷತ್, ಜೆಸಿಐ ಸಂಸ್ಥೆ, ರೋಟರಿ ಕ್ಲಬ್ ಸಹಯೋಗದೊಂದಿಗೆ ನಡೆದ ರಾಜ್ಯ ಮಟ್ಟದ ಶಿಕ್ಷಣ ಜಾಗೃತಿ ಜಾಥಾ ಉದ್ಘಾಟಿಸಿ ಮಾತನಾಡಿದರು.
ಉದಾತ್ತ ಮೌಲ್ಯ, ಭಾವನೆ ಬೆಳೆಸಿಕೊಳ್ಳುವುದರಿಂದ ವಿದ್ಯಾರ್ಥಿಗಳಲ್ಲಿರುವ ಆಂತರಿಕ ಚೈತನ್ಯ ಹೊರಹಾಕಲು ಸಾಧ್ಯವಾಗುತ್ತದೆ. ಎಳೆಯ ಮಕ್ಕಳ ಮನಸ್ಸುಗಳಿಗೆ ಒಳ್ಳೆಯ ವಿಚಾರ ತುಂಬಬೇಕು.ಪೋಷಕರು, ಸಮುದಾಯದವರು ಅರ್ಥ ಮಾಡಿಕೊಂಡು ಮಕ್ಕಳ ಆಸಕ್ತಿಗೆ ಅನುಗುಣವಾಗಿ ಬೆಳೆಯಲು ಬಿಡಬೇಕು. ಆಗಲೇ ಪರಿಪಕ್ವ ವ್ಯಕ್ತಿತ್ವ ಅರಳಲು ಸಾಧ್ಯವಾಗುತ್ತದೆ ಎಂದರು.
ಮಂಗಳೂರಿನ ಸ್ವರೂಪ್ ಅಧ್ಯಯನ ಕೇಂದ್ರದ ನಿರ್ದೇಶಕ ಗೋಪಾಡ್ಕರ್ ಮಾತನಾಡಿ, ದೇಶದಲ್ಲಿ ಹುಟ್ಟಿದ ಎಲ್ಲಾ ಮಕ್ಕಳಿಗೂ ಅದ್ಭುತವಾದ ಸಾಮರ್ಥ್ಯವಿದೆ. ಆದರೆ, ಜಗತ್ತಿಗೆ ಶ್ರೇಷ್ಠರಾಗುವ ಶಕ್ತಿ ಇರುವವರು ಇಲ್ಲಿ ಎಲ್ಲೋ ಸರ್ಟಿಫಿಕೇಟಿನೊಳಗೆ ಅಡಗಿರುತ್ತಾರೆ. ಮಕ್ಕಳಲ್ಲಿ ಸುಪ್ತ ಪ್ರತಿಭೆ ಅಡಗಿದೆ. ಆ ಪ್ರತಿಭೆ ಹೊರಹಾಕಲು ಪೋಷಕರು, ಶಿಕ್ಷಕರು ಶ್ರಮಿಸಬೇಕು ಎಂದರು.
ಜೆಸಿಐ ಅಧ್ಯಕ್ಷ ರಮೇಶ್ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ರೋಟರಿ ಅಧ್ಯಕ್ಷ ಮಹೇಶ್, ಭಾರತ್ ವಿಕಾಸ್ ಪರಿಷತ್ ಅಧ್ಯಕ್ಷ ಸತ್ಯನಾರಾಯಣ, ವಿಜಯಕುಮಾರ್, ಗಣೇಶ್ ಮತ್ತಿತರರು ಉಪಸ್ಥಿತರಿದ್ದರು. ಬಿ.ಎಲ್. ರವಿಕುಮಾರ್ ನಿರೂಪಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

