ಚಿಕ್ಕಮಗಳೂರು

'ವಾಜಪೇಯಿ ಸಹೃದಯಿ ಸಾಧಕ'

Published On :

ಕ.ಪ್ರ.ವಾರ್ತೆ, ತರೀಕೆರೆ, ಡಿ.25 ಮಾಜಿ ಪ್ರಧಾನಿ ವಾಜಪೇಯಿ ಅವರ ಸಾಧನೆ ಅಪಾರವಾಗಿದ್ದು, ವಾಜಪೇಯಿ ಅವರು ದೇಶದ ಹಳ್ಳಿ ಹಳ್ಳಿಗೂ ಅಚ್ಚುಕಟ್ಟಾದ ರಸ್ತೆ ನಿರ್ಮಿಸಿದರು. ಹಲವು ಅಭಿವೃದ್ಧಿ ಕೆಲಸ ನಿರ್ವಹಿಸಿದರು ಎಂದು ತಾಲೂಕು ಬಿಜೆಪಿ ಅಧ್ಯಕ್ಷ ಮೋಹನ್ ಕುಮಾರ್ ಕರಕುಚ್ಚಿ ತಿಳಿಸಿದರು.
ಅವರು, ಬುಧವಾರ ತಾಲೂಕು ಬಿಜೆಪಿ, ರೋಟರಿ ಸಂಸ್ಥೆ ವತಿಯಿಂದ ಪಟ್ಟಣದ ಸಾಲುಮರದಮ್ಮನವರ ದೇವಸ್ಥಾನ ಆವರಣದಲ್ಲಿ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಜನ್ಮದಿನಾಚರಣೆ ಅಂಗವಾಗಿ ಏರ್ಪಡಿಸಲಾಗಿದ್ದ ರಕ್ತದಾನ ಶಿಬಿರದ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದರು.
ರಕ್ತದಾನ ಶಿಬಿರ: ಮಾಜಿ ಶಾಸಕ ಟಿ.ಎಚ್. ಶಿವಶಂಕಕರಪ್ಪ ಮಾತನಾಡಿ, ವಾಜಪೇಯಿ ಜನ್ಮದಿನಾಚರಣೆ ಅಂಗವಾಗಿ ರಕ್ತದಾನ ಶಿಬಿರ ಏರ್ಪಡಿಸಿರುವುದು ಸಂತೋಷ ತಂದಿದೆ ಎಂದು ತಿಳಿಸಿದರು. ಬಿಜೆಪಿ ಮುಖಂಡ ಟಿ.ಎಂ. ಭೋಜರಾಜ್ ಮಾತನಾಡಿದರು.
ಮಂಜುನಾಥ್ ಕಾರ್ಯಕ್ರಮ ಉದ್ಘಾಟಿಸಿದರು. ಬಿಜೆಪಿ ರೈತ ಮೋರ್ಚಾ ಕಾರ್ಯಕಾರಿಣಿ ಸದಸ್ಯ ಎಂ.ಆರ್. ಲೋಹಿತ್, ಜಿಪಂ ಸದಸ್ಯ ಕಲ್ಮುರಡಪ್ಪ, ತಾಲೂಕು ಬಿಜೆಪಿ ಪ್ರಧಾನ ಕಾರ್ಯದರ್ಶಿ ಟಿ.ಜಿ. ಸದಾನಂದ್, ರವಿಶಂಕರ್ ಮಾತನಾಡಿದರು. ಸುನೀಲ್‌ಕುಮಾರ್,  ಅಜಯ್‌ಕುಮಾರ್, ಪಕ್ಷದ ಪದಾಧಿಕಾರಿಗಳು, ಸದಸ್ಯರು ಮೊದಲಾದವರು ಸಮಾರಂಭದಲ್ಲಿ ಭಾಗವಹಿಸಿದ್ದರು. ಶಿಬಿರದಲ್ಲಿ 25 ಜನರು ರಕ್ತದಾನ ಮಾಡಿದರು.
--

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.