ಚಿಕ್ಕಮಗಳೂರು

ನ್ಯಾಯಬೆಲೆ ಅಂಗಡಿಯಲ್ಲಿ ಸಕ್ಕರೆ ವಿತರಣೆಗೆ ಆಗ್ರಹ

Published On :

ಕ.ಪ್ರ.ವಾರ್ತೆ, ಚಿಕ್ಕಮಗಳೂರು, ಡಿ. 25
ತಾಲೂಕಿನ ನ್ಯಾಯಬೆಲೆ ಅಂಗಡಿಗಳಲ್ಲಿ ಪಡಿತರ ಚೀಟಿಗಳಿಗೆ ಸಕ್ಕರೆ ನೀಡಬೇಕೆಂದು ಬಿಜೆಪಿ ಯುವ ಮೋರ್ಚಾದ ರಾಜ್ಯ ಕಾರ್ಯಕಾರಿಣಿ ಸದಸ್ಯ ಎಂ.ಕೆ. ಪ್ರೇಮೇಶ್ ಅವರು ಜಿಲ್ಲಾಧಿಕಾರಿಗಳನ್ನು ಆಗ್ರಹಿಸಿದ್ದಾರೆ.
ತಾಲೂಕಿನ ನ್ಯಾಯಬೆಲೆ ಅಂಗಡಿಗಳಲ್ಲಿ ಕಳೆದ ಮೂರು ತಿಂಗಳಿಂದ ಎಎವೈ ಹಾಗೂ ಬಿಪಿಎಲ್ ಪಡಿತರ ಚೀಟಿಗಳಿಗೆ ಸಕ್ಕರೆ ವಿತರಣೆ ಮಾಡಿಲ್ಲ. ಈ ಬಗ್ಗೆ ನ್ಯಾಯಬೆಲೆ ಅಂಗಡಿಗಳಲ್ಲಿ ವಿಚಾರಿಸಿದಾಗ ಸಕ್ಕರೆ ಸರಬರಾಜಾಗುತ್ತಿಲ್ಲ ಎಂಬ ಮಾಹಿತಿ ನೀಡಿದ್ದಾರೆ ಎಂದು ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಚಿಕ್ಕಮಗಳೂರು ಜಿಲ್ಲೆಗೆ ಡಿಸೆಂಬರ್ ಮಾಹೆಗೆ 1530 ಕ್ವಿಂಟಲ್ ಸಕ್ಕರೆ ಬಿಡುಗಡೆ ಮಾಡಿದ್ದು, ಇದರ ಪೈಕಿ ಚಿಕ್ಕಮಗಳೂರು ತಾಲೂಕಿಗೆ ಬಿಡುಗಡೆಯಾದ ಸಕ್ಕರೆಯನ್ನು ಟಿಎಪಿಸಿಎಂಎಸ್, ಸಗಟು ಮಳಿಗೆಯಿಂದ ಎತ್ತುವಳಿ ಮಾಡಿ ವಿತರಿಸಬೇಕೆಂದು ಜಿಲ್ಲಾಧಿಕಾರಿಗಳು ಆದೇಶಿಸಿರುವುದು ಸರಿಯಷ್ಟೆ. ಆದರೆ, ಮೂರು ತಿಂಗಳಿಂದ ಚಿಕ್ಕಮಗಳೂರು ತಾಲೂಕಿನಲ್ಲಿ ಸಕ್ಕರೆ ಎತ್ತುವಳಿ ಮಾಡಿ ವಿತರಣೆ ಮಾಡಿರುವುದಿಲ್ಲ. ಇದರಿಂದಾಗಿ ಎಎವೈ ಮತ್ತು ಬಿಪಿಎಲ್ ಕಾರ್ಡುದಾರರು ಸಕ್ಕರೆಯಿಂದ ವಂಚಿತರಾಗಿದ್ದಾರೆ. ಇದರಿಂದ ಶ್ರೀಸಾಮಾನ್ಯರು ಸರ್ಕಾರದ ಹಾಗೂ ಸಂಬಂಧಪಟ್ಟ ಅಧಿಕಾರಿಗಳ ಕಾರ್ಯವೈಖರಿ ಪ್ರಶ್ನಿಸುವಂತಾಗಿದೆ. ಇದರ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳು ಕೂಡಲೇ ಕ್ರಮ ತೆಗೆದುಕೊಂಡು ಬಾಕಿ ಉಳಿದಿರುವ ಮೂರು ತಿಂಗಳ ಸಕ್ಕರೆ ಸೇರಿಸಿ ಡಿಸೆಂಬರ್ ತಿಂಗಳಲ್ಲಿ ವಿತರಣೆ ಮಾಡದಿದ್ದರೆ ಹೋರಾಟ ಮಾಡಲಾಗುವುದು ಎಂದು ಎಚ್ಚರಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.