'ವಾಣಿಜ್ಯ ಕಟ್ಟಡ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳಲಿ'
ಚಿಕ್ಕಮಗಳೂರು: ಜಿಲ್ಲೆಯ ಗಿರಿ ಪ್ರದೇಶದಲ್ಲಿ ನಾಯಿಕೊಡೆಗಳಂತೆ ವಾಣಿಜ್ಯ ಕಟ್ಟಡಗಳು ತಲೆ ಎತ್ತುತ್ತಿದ್ದು, ಇವುಗಳ ನಿಯಂತ್ರಣದಲ್ಲಿ ಜಿಲ್ಲಾಡಳಿತ ಮೌನ ವಹಿಸಿದೆ ಎಂದು ವನ್ಯಜೀವಿ ಸಂರಕ್ಷಣಾ ಕಾರ್ಯಕರ್ತ ಜಿ. ವೀರೇಶ್ ಆರೋಪಿಸಿದ್ದಾರೆ.
ಚಿಕ್ಕಮಗಳೂರಿನ ಪಶ್ಚಿಮಘಟ್ಟಗಳ ಸಾಲಿನ ಮುಳ್ಳಯ್ಯನಗಿರಿ, ಚಂದ್ರದ್ರೋಣ ಪರ್ವತ ಶ್ರೇಣಿಗಳಲ್ಲಿ ದಿನೇ ದಿನೇ ರೆಸಾರ್ಟ್ಗಳ ನಿರ್ಮಾಣ, ಇಕೋ ಸ್ಟೇ, ಹೋಂ ಸ್ಟೇ, ಗೆಸ್ಟ್ ಹೌಸ್ ಹೆಸರಿನಲ್ಲಿ ಕಾಂಕ್ರಿಟ್ ಕಟ್ಟಡ ಕಟ್ಟಲಾಗುತ್ತಿದ್ದು, ವಾಣಿಜ್ಯೋದ್ಯಮ ಉದ್ದೇಶದಿಂದ ಗಿರಿಸಾಲಿನ ಪರಿಸರ ಮತ್ತು ಅರಣ್ಯ ಹಾಳುಗೆಡವಲಾಗುತ್ತಿದೆ ಎಂದು ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಪ್ರವಾಸೋದ್ಯಮ ಹೆಸರಿನ ಕಟ್ಟಡಗಳು ನಾಯಿಕೊಡೆಗಳಂತೆ ಗಿರಿ ಭಾಗದಲ್ಲಿ ತಲೆ ಎತ್ತುತ್ತಿದ್ದರೂ ಜಿಲ್ಲಾಡಳಿತ, ಅರಣ್ಯ ಇಲಾಖೆ, ಕಂದಾಯ ಇಲಾಖೆ, ಮಾಲಿನ್ಯ ನಿಯಂತ್ರಣ ಮಂಡಳಿ, ಪ್ರವಾಸೋದ್ಯಮ ಇಲಾಖೆಗಳ ನಿರ್ಲಕ್ಷ್ಯತನದ ಪರಮಾವಧಿಯಿಂದ ಪರಿಸರ ಹಾಳಾಗುತ್ತಿದೆ. ಈ ಕೂಡಲೇ ಜಿಲ್ಲಾಡಳಿತ ಇತ್ತ ಗಮನಹರಿಸಿ ತಲೆ ಎತ್ತಿರುವ ರೆಸಾರ್ಟ್, ಇಕೋ ಸ್ಟೇ, ಹೋಂಸ್ಟೇ ಮುಂತಾದ ಪರಿಸರ ಪ್ರವಾಸೋದ್ಯಮ ಹೆಸರಿನ ಕಟ್ಟಡ ನಿಷೇಧಿಸಬೇಕೆಂದು ಒತ್ತಾಯಿಸಿದ್ದಾರೆ.
ಪರಿಸರಕ್ಕೆ ಹಾನಿ: ಹಿಮಾಲಯ ಪರ್ವತ ಶ್ರೇಣಿಗಿಂತಲೂ ಹಳೆಯದಾದ ಪಶ್ಚಿಮಘಟ್ಟಗಳ ಸಾಲಿನ ಚಂದ್ರದ್ರೋಣ ಪರ್ವತ ಶ್ರೇಣಿಯಲ್ಲಿ ಇತ್ತೀಚೆಗೆ ಪರಿಸರ ಪ್ರವಾಸೋದ್ಯಮ ಹೆಸರಿನಲ್ಲಿ ಸಾಕಷ್ಟು ಮಾಲಿನ್ಯ ಉಂಟಾಗುತ್ತಿದೆ.
ಖಾಸಗಿ ಹಿಡುವಳಿ ಪ್ರದೇಶಗಳಲ್ಲಿ ಮತ್ತು ಸರ್ಕಾರಿ ಭೂಮಿಯಲ್ಲಿ ಕೆಲವರು ರೆಸಾರ್ಟ್ ನಿರ್ಮಿಸುತ್ತಿದ್ದು, ಹಾಗೆ ಇಕೋಸ್ಟೇ, ಹೋಂ ಸ್ಟೇ ಇನ್ನೂ ಅನೇಕ ಮಾದರಿಯಲ್ಲಿ ಪ್ರವಾಸೋದ್ಯಮ ಪ್ರಚಾರಪಡಿಸುತ್ತಿದೆ.
ಇದರಿಂದ ಸಾಕಷ್ಟು ಹಾನಿ ಗಿರಿ ಶ್ರೇಣಿಗಳಲ್ಲಿ ಶೋಲಾ ಕಾಡುಗಳಿಗೂ ಮತ್ತು ಹುಲ್ಲುಗಾವಲಿಗೂ ಉಂಟಾಗುತ್ತಿದೆ.
ಮುಳ್ಳಯ್ಯನಗಿರಿ ಚಂದ್ರದ್ರೋಣ ಪರ್ವತ ಶ್ರೇಣಿಗಳಲ್ಲಿ ಎಲ್ಲೆಂದರಲ್ಲಿ ಕುಡಿದು ಬೀಸಾಡಿದ ಬಾಟಲಿಗಳು, ಪ್ಲಾಸ್ಟಿಕ್ ಚೀಲಗಳು ಇನ್ನು ಮುಂತಾದ ಪರಿಸರ ನಾಶವಸ್ತುಗಳು ಕಂಡುಬರುತ್ತಿವೆ. ಇದಕ್ಕೆ ಕಡಿವಾಣ ಹಾಕುವ ಕೆಲಸ ಆಗುತ್ತಿಲ್ಲ ಎಂದು ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

