ಚಿಕ್ಕಮಗಳೂರು

ಅಧ್ಯಕ್ಷರ ಕುರ್ಚಿ, ಫೋನು ಮಾಯ!

Published On :

ಕ.ಪ್ರ.ವಾರ್ತೆ, ಮೂಡಿಗೆರೆ, ಡಿ.27
'ಪಟ್ಟಣ ಪಂಚಾಯಿತಿಯಲ್ಲಿ ಸದಸ್ಯರ ಆಯ್ಕೆಯಾಗಿ 10 ತಿಂಗಳು ಕಳೆದರೂ, ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ ಯಾಗದೇ ಇರುವುದರಿಂದ ಅಧಿಕಾರಿಗಳು ಆಡಿದ್ದೇ ಆಟ ಎಂಬಂತಾಗಿದೆ...'
ಹೀಗೆಂದು ಪಟ್ಟಣ ಪಂಚಾಯಿತ್ ಸದಸ್ಯ ಕೆ.ವೆಂಕಟೇಶ್ ಸಿಬ್ಬಂದಿಯನ್ನು ತರಾಟೆಗೆ ತೆಗೆದುಕೊಂಡರು.
ಪಪಂಗೆ ಆಗಮಿಸಿದ್ದ 9 ಸದಸ್ಯರು ಅಧ್ಯಕ್ಷರ ಕೊಠಡಿಗೆ ಕಾಲಿಡುತ್ತಿದ್ದ ಹಾಗೆ ದಿಗ್ಭ್ರಾಂತರಾದರು. ಕಾರಣ ಅಧ್ಯಕ್ಷರ ಕುರ್ಚಿ, ಕೊಠಡಿಯ ದೂರವಾಣಿ ನಾಪತ್ತೆಯಾಗಿದ್ದು. ತಕ್ಷಣವೇ ಸಿಬ್ಬಂದಿಗಳನ್ನು ತರಾಟೆಗೆ ತೆಗೆದುಕೊಂಡ ಸದಸ್ಯ ಕೆ.ವೆಂಕಟೇಶ್, ಮುಖ್ಯಾಧಿಕಾರಿ ಗಣೇಶ್ ಅವರು ಪ.ಪಂ.ಗೆ ಬಂದಾಗಿನಿಂದಲೂ ಕಚೇರಿಯಲ್ಲಿ ಕಾರ್ಯನಿರ್ವಹಿಸದೇ ಬೆಂಗಳೂರು ಮಂಗಳೂರು ಚಿಕ್ಕಮಗಳೂರು ಮೀಟಂಗ್ ಎಂದು ಹೇಳಿ ಕಚೇರಿ ಕೆಲಸವನ್ನು ನಿರ್ವಹಿಸದೇ ಇರುವುದರಿಂದ ಸಾರ್ವಜನಿಕರಿಗೆ ತೊಂದರೆ ಆಗುತ್ತಿದೆ. ಅವರಿಗೆ ವರ್ಗಾವಣೆ ಆದೇಶ ಬಂದರೂ ರಿಲೀವ್ ಆಗದೆ ತಮ್ಮ ಹಳೆಯ ಚಾಳಿ ಮುಂದುವರಿಸಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಕುಡಿಯುವ ನೀರಿನ ಪಂಪ್ ಹಾಳಾಗಿ ತಿಂಗಳುಗಳೇ ಕಳೆದಿದೆ. ಆದರೆ, ಅದನ್ನು ದುರಸ್ತಿಪಡಿಸಲು ಅಧಿಕಾರಿಗಳ ನಿರ್ಲಕ್ಷ್ಯದ ಬಗ್ಗೆ ತರಾಟೆಗೆ ತೆಗೆದುಕೊಂಡರು. ಕಾಮಗಾರಿಗಳು ಕಳಪೆ ಗುಣಮಟ್ಟದ್ದಾಗಿದೆ ಎಂದು ಸಾರ್ವಜನಿಕರು ದೂರುತ್ತಿದ್ದಾರೆ. ಅದರ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳು ಎಚ್ಚೆತ್ತುಕೊಳ್ಳಬೇಕು ಎಂದರು.
ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವ ಕಡೂರು-ಮಂಗಳೂರು ರಸ್ತೆ ಅಗಲೀಕರಣಕ್ಕೆ ಸರ್ಕಾರದಿಂದ ಯಾವುದೇ ಹಣ ಬಂದಿಲ್ಲ. ಕೆಲವು ರಾಜಕಾರಣಿಗಳು ತಮ್ಮ ಬೇಳೆ ಬೇಯಿಸಿಕೊಳ್ಳಲು ರಸ್ತೆ ಅಗಲೀಕರಣಕ್ಕೆ ಸರ್ಕಾರದಿಂದ ಹಣ ಬಂದಿದೆ ಎಂದು ಸುಳ್ಳು ಮಾಹಿತಿ ನೀಡಿ, ವ್ಯಾಪಾರಸ್ಥರು ಮತ್ತು ಸಾರ್ವಜನಿಕರಲ್ಲಿ ಆತಂಕವನ್ನು ಸೃಷ್ಟಿ ಮಾಡಿದ್ದಾರೆ. ನೌಕರರಿಗೆ ಕಿರುಕುಳ ನೀಡುತ್ತಿರುವ ಮುಖ್ಯಾಧಿಕಾರಿ ಗಣೇಶ್ ಅವರನ್ನು ಕೂಡಲೇ ವರ್ಗಾವಣೆ ಮಾಡುವಂತೆ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸುವುದಾಗಿ ತಿಳಿಸಿದರು.
ಈ ಸಂದರ್ಭ ಸದಸ್ಯರಾದ ನಯನಾ ಲೋಕಪ್ಪಗೌಡ, ಮದೀಶ್, ಲತಾ ಲಕ್ಷ್ಮಣ್, ಸುಲೋಚನಾ ಗೋಪಾಲ್, ರಾಮಕೃಷ್ಣ, ನಯೀಮಾಪರ್ವಿನ್, ಜಿ.ಭಿ. ಧರ್ಮಪಾಲ್, ಪಾರ್ವತಮ್ಮ ಉಪಸ್ಥಿತರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.