'ಅರ್ಹರಿಗೆ ಯೋಜನೆ ಸೌಲಭ್ಯ ತಲುಪಲಿ'
ತರೀಕೆರೆ: ವಿದ್ಯಾವಂತರು ಯೋಜನೆಗಳ ಬಗ್ಗೆ ಅರಿವು ಮೂಡಿಸುವುದರ ಜೊತೆಗೆ ಸೌಲಭ್ಯಗಳನ್ನು ತಲುಪಿಸಲು ಮುಂದಾಗಬೇಕೆಂದು ತಾ.ಪಂ. ಕಾರ್ಯನಿರ್ವಹಣಾಧಿಕಾರಿ ದೇವರಾಜಪ್ಪ ತಿಳಿಸಿದ್ದಾರೆ.
ಇಲ್ಲಿನ ತಾಪಂ ಸಭಾಂಗಣದಲ್ಲಿ ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯಿತಿ, ಮತ್ತು ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಏರ್ಪಡಿಸಿದ್ದ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಕಾಯ್ದೆ ಬಗ್ಗೆ ಪರಿಶಿಷ್ಟ ವರ್ಗದ ಜನಪ್ರತಿನಿಧಿಗಳು ಹಾಗೂ ಅನುಷ್ಠಾನ ಅಧಿಕಾರಿಗಳಿಗೆ ನಡೆದ ತರಬೇತಿ ಕಾರ್ಯಕ್ರಮದ ಉದ್ಘಾಟನೆ ನೆರವೇರಿಸಿ ಅವರು ಮಾತನಾಡಿದರು.
ಸರ್ಕಾರ ಆರ್ಥಿಕವಾಗಿ ದುರ್ಬಲವಾಗಿರುವವರ ಶ್ರೇಯೋಭಿವೃದ್ಧಿಗೆ ಸಾಕಷ್ಟು ಅಭಿವೃದ್ಧಿ ಕಾರ್ಯಗಳು, ಹೊಸ ಯೋಜನೆ ರೂಪಿಸಿದೆ. ಅವುಗಳನ್ನು ಸಮರ್ಪಕವಾಗಿ ಅನುಷ್ಠಾನಕ್ಕೆ ತರುವ ಮೂಲಕ, ಜೀವನಮಟ್ಟ ಸುಧಾರಣೆಗೆ ಪೂರಕ ವಾತಾವರಣ ನಿರ್ಮಿಸಬೇಕು ಎಂದರು.
ಸಕಾರದ ಪ್ರತಿ ಇಲಾಖೆಯ ಅನುದಾನದಲ್ಲೂ ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗಗಳ ಅಭಿವೃದ್ಧಿಗೆ ಮೀಸಲಿಟ್ಟ ಹಣ ಸಮರ್ಪಕವಾಗಿ ಬಳಕೆಯಾಗದೆ ಇರುವುದರಿಂದ ಕೆಲವು ಭಾಗಗಳಲ್ಲಿ ಆ ಜನಾಂಗ ನಿರೀಕ್ಷೆಗೆ ತಕ್ಕಂತೆ ಅಭಿವೃದ್ಧಿಯಾಗಿಲ್ಲ. ಕೆಲವು ಗ್ರಾ.ಪಂ.ಗಳಲ್ಲಿ ಅವರಿಗೆ ಮೀಸಲಿಟ್ಟಿದ್ದ ಹಣವನ್ನು ಪಂಚಾಯಿತಿ ವ್ಯಾಪ್ತಿಯಲ್ಲಿ ಆ ಜನಾಂಗದವರು ವಾಸವಾಗಿಲ್ಲ ಎನ್ನುವ ಕಾರಣದಿಂದ ಸರ್ಕಾರಕ್ಕೆ ಆ ಹಣವನ್ನು ವಾಪಸು ಹಿಂತಿರುಗಿಸಿದ ಪ್ರಸಂಗಗಳಿದೆ ಎಂದು ತಿಳಿಸಿದರು.
ಇನ್ನೂ ಕೆಲವು ಕಡೆ ಆ ಜನಾಂಗದವರು ಅವರು ವಾಸವಾಗಿದ್ದರೂ ಹಣ ಸದ್ಬಳಕೆ ಆಗದಿರುವುದು ಕಂಡುಬಂದಿದೆ. ವಿದ್ಯಾವಂತರು ಯೋಜನೆಗಳ ಬಗ್ಗೆ ಅರಿವು ಮೂಡಿಸುವುದರ ಜೊತೆಗೆ ಸೌಲಭ್ಯಗಳನ್ನು ತಲುಪಿಸಲು ಮುಂದಾಗಬೇಕು ಎಂದು ಅವರ ತಿಳಿಸಿದರು.
ವೃತ್ತ ನಿರೀಕ್ಷಕ ಸೈಫುಲ್ಲಾ ಮಾತನಾಡಿ, ನಿಜವಾಗಿ ದೌರ್ಜನ್ಯಕ್ಕೆ ಒಳಗಾದವರಿಗೆ ರಕ್ಷಣೆ ಸಿಗಬೇಕು. ಆಗ ಮಾತ್ರ ಅವರು ನಿರ್ಭೀತಿಯಿಂದ ಬದುಕಲು ಸಾಧ್ಯ. ಸಮಾಜದಲ್ಲಿ ಒಬ್ಬರಿಗೊಬ್ಬರು ಸಹಬಾಳ್ವೆಯಿಂದ ಜೀವನ ನಡೆಸಿದರೆ ದೌರ್ಜನ್ಯಗಳು ಕಡಿಮೆ ಆಗುತ್ತವೆ ಎಂದು ತಿಳಿಸಿದರು.
ತಾ.ಪಂ. ಅಧ್ಯಕ್ಷೆ ಶಕುಂತಲ ನಾಗರಾಜ್, ಸಹಾಯಕ ನಿರ್ದೇಶಕ ಗಂಗಾಧರಮೂರ್ತಿ, ಹರೀಶ್ಕುಮಾರ್, ಚಂದ್ರಶೇಖರ್, ಯೋಗೀಶ್ ಮತ್ತಿತರರು ಭಾಗವಹಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

