ಚಿಕ್ಕಮಗಳೂರು

ಜನವರಿ 14ರಿಂದ ಕಡೂರಿನಲ್ಲಿ ಸಿದ್ದರಾಮ ಜಯಂತಿ

Published On :

ಕ.ಪ್ರ.ವಾರ್ತೆ, ಕಡೂರು, ಡಿ.26
2014ರ ಜನವರಿ 14 ಮತ್ತು 15ರಂದು ಕಡೂರು ಪಟ್ಟಣದಲ್ಲಿ ನಡೆಯಲಿರುವ ಸಿದ್ದರಾಮ ಜಯಂತಿ ಆಚರಣೆ ಹಿನ್ನೆಲೆಯಲ್ಲಿ ಸ್ವಾಗತ ಸಮಿತಿ ಅಧ್ಯಕ್ಷ ಬಿ. ಗುರುಪ್ರಸಾದ್  ಅಧ್ಯಕ್ಷತೆಯಲ್ಲಿ ಪೂರ್ವಭಾವಿ ಸಭೆ ನಡೆಯಿತು.
ಈ ಬಗ್ಗೆ ಸಭೆಯಲ್ಲಿ ಮಾಹಿತಿ ನೀಡಿ ಮಾತನಾಡಿದ ಗುರುಪ್ರಸಾದ್, ಸಿದ್ದರಾಮ ಜಯಂತಿಗೆ ಪೂರಕವಾಗಿ ಸಕಲ ಸಿದ್ಧತೆ ನಡೆಯುತ್ತಿದ್ದು, ಅದಕ್ಕಾಗಿ ವಿವಿಧ ಸಮಿತಿ ರಚಿಸಲಾಗಿದೆ. ವಿವಿಧ ಸಮಿತಿ ಪದಾಧಿಕಾರಿಗಳು ಕಾರ್ಯಪ್ರವೃತ್ತರಾಗಿದ್ದು, ಈಗಾಗಲೇ ಸುಮಾರು ರು. 50 ಲಕ್ಷ ದೇಣಿಗೆ ಸಂಗ್ರಹಣೆಯಾಗಿದೆ. ಅಂತಿಮವಾಗಿ ಇನ್ನೂ ಹೆಚ್ಚಿನ ದೇಣಿಗೆ ಸಂಗ್ರಹದ ನಿರೀಕ್ಷೆ ಇದೆ ಎಂದರು.
ಪಟ್ಟಣದ ಚಿಕ್ಕಮಗಳೂರು ರಸ್ತೆಯಲ್ಲಿ ಕಲ್ಯಾಣ ಮಂಟಪ ನಿರ್ಮಿಸಲು 20 ಗುಂಟೆ ಜಮೀನು ಖರೀದಿಸಲಾಗಿದೆ ಹಾಗೂ 10 ಗಂಟೆ ಜಮೀನು ದಾನವಾಗಿ ಪಡೆಯಲಾಗಿದೆ. ಶಿಕ್ಷಣ ಸಂಸ್ಥೆಗಳ ಆರಂಭಕ್ಕಾಗಿ 44 ಎಕರೆ ಭೂಮಿಯನ್ನು ರಾ.ಹೆ. 206ರಲ್ಲಿ ಈ ಹಿಂದೆಯೇ ಖರೀದಿಸಲಾಗಿದೆ ಎಂದವರು ತಿಳಿಸಿದರು.
ಇದೇ ಸಂದರ್ಭದಲ್ಲಿ ಸಮಾಜ ಸೇವಕ ಕಡೂರು ಎಚ್. ಉಮೇಶ್ ಸಿದ್ದರಾಮ ಜಯಂತಿಗೆ ತಮ್ಮ ದೇಣಿಗೆಯನ್ನು ಸಮಿತಿಯ ಅಧ್ಯಕ್ಷರು ಹಾಗೂ ಪದಾಧಿಕಾರಿಗಳಿಗೆ ನೀಡಿದರು. ಇದೇ ಸಂದರ್ಭದಲ್ಲಿ ವಿವಿಧ ಸಮಿತಿಗಳ ಅಧ್ಯಕ್ಷರಾದ ಬೆಳ್ಳಿ ಪ್ರಕಾಶ್, ಕೆ.ಎಂ. ಕೆಂಪರಾಜು, ಎಸ್.ವಿ. ಉಮಾಪತಿ, ರೇಣುಕಾರಾಧ್ಯ ಮತ್ತಿತರರು              ಉಪಸ್ಥಿತರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.