ಜಾನುವಾರು ರಕ್ಷಣೆ ಪಶುಪರೀಕ್ಷಕರ ಹೊಣೆ
ಕ.ಪ್ರ.ವಾರ್ತೆ ಟಿ ಚಿಕ್ಕಮಗಳೂರು ಟಿ ಡಿ.29
ರೈತರ ಬೆನ್ನೆಲುಬಾದ ಜಾನುವಾರುಗಳನ್ನು ರಕ್ಷಿಸಿ ಅವುಗಳನ್ನು ಮುಂದಿನ ಪೀಳಿಗೆಗೆ ಉಳಿಸುವ ಮಹತ್ತರ ಹೊಣೆಗಾರಿಕೆ ಪಶು ಪರೀಕ್ಷಕರ ಮೇಲಿದೆ ಎಂದು ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ರೇಖಾ ಹುಲಿಯಪ್ಪಗೌಡ ಹೇಳಿದ್ದಾರೆ.
ನಗರದ ಶ್ರೀಕಾಮಧೇನು ಗಣಪತಿ ದೇವಾಲಯದಲ್ಲಿ ಪಶು ವೈದ್ಯಕೀಯ ಪರೀಕ್ಷಕರ ಸಂಘ ಶನಿವಾರ ಏರ್ಪಡಿಸಿದ್ದ ಪಶು ಪರೀಕ್ಷಕರ ಜಿಲ್ಲಾಮಟ್ಟದ ತಾಂತ್ರಿಕ ಸಮ್ಮೇಳನ ಉದ್ಘಾಟಿಸಿ ಅವರು ಮಾತನಾಡಿದರು.
ಜಾನುವಾರುಗಳು ರೈತರ ಬದುಕಿನ ಜೀವನಾಡಿಗಳು. ಅವುಗಳಿಲ್ಲದೇ ಕೃಷಿಕರ ಬದುಕು ನಡೆಯುವುದಿಲ್ಲ. ಪಶುಪರೀಕ್ಷಕರು ಪ್ರಾಮಾಣಿಕವಾಗಿ ಕೆಲಸ ಮಾಡುವ ಮೂಲಕ ಪಶು ಸಂರಕ್ಷಣೆ ಮಾಡಬೇಕು. ಆ ಮೂಲಕ ರೈತಾಪಿ ವರ್ಗವನ್ನು ಕಾಪಾಡಬೇಕು ಎಂದು ಕಿವಿಮಾತು ಹೇಳಿದರು.
ಪಶು ವೈದ್ಯಕೀಯ ಪರೀಕ್ಷಕರು ಎದುರಿಸುತ್ತಿರುವ ಮೂಲಭೂತ ಸೌಲಭ್ಯಗಳ ಕೊರತೆ ಮತ್ತು ಸಮಸ್ಯೆಗಳನ್ನು ಪರಿಹರಿಸುವಂತೆ ಇಲಾಖೆಯ ಸಚಿವರು ಹಾಗೂ ಹಿರಿಯ ಅಧಿಕಾರಿಗಳಿಗೆ ತಾವೇ ಖುದ್ದಾಗಿ ಪತ್ರ ಬರೆದು ಮನವಿ ಮಾಡುವುದಾಗಿ ಭರವಸೆ ನೀಡಿದರು.
ಅಧ್ಯಕ್ಷತೆ ವಹಿಸಿ ಮಾತನಾಡಿದ ಸಂಘದ ಸ್ಥಾಪಕ ಅಧ್ಯಕ್ಷ ಎಂ.ಎಸ್. ನಂಜುಂಡಸ್ವಾಮಿ, ಜಿಲ್ಲಾದ್ಯಂತ ಪಶು ಪರೀಕ್ಷಕರು ಕುಡಿಯುವ ನೀರು ಶೌಚಾಲಯ ಸೇರಿದಂತೆ ಆನೇಕ ಮೂಲಭೂತ ಸೌಲಭ್ಯಗಳಿಂದ ವಂಚಿತರಾಗಿದ್ದಾರೆ. ಔಷಧಿಗಳ ಕೊರತೆ ವೈದ್ಯರು ಮತ್ತು ಸಂಬಳವಿಲ್ಲದೇ ಪರದಾಡುತ್ತಿದ್ದಾರೆ ಎಂದು ಹೇಳಿದರು.
ಜಿಲ್ಲೆಯ ಪಶು ಆಸ್ಪತ್ರೆಗಳಲ್ಲಿರುವ ಮೂಲಭೂತ ಸೌಲಭ್ಯಗಳ ಕೊರತೆಯನ್ನು ನಿವಾರಿಸಬೇಕು ಖಾಲಿಯಿರುವ ವೈದ್ಯರು ಮತ್ತು ಸಿಬ್ಬಂದಿಗಳ ಹುದ್ದೆಯನ್ನು ಭರ್ತಿ ಮಾಡಬೇಕು ಕಾಮಧೇನು ಭವನದ ಅಭಿವೃದ್ಧಿಗೆ 5 ಲಕ್ಷ ಅನುದಾನ ನೀಡಬೇಕು. ಸಮಸ್ಯೆಗಳನ್ನು ಪರಿಹರಿಸದಿದ್ದಲ್ಲಿ ಜಿಲ್ಲಾ ಪಂಚಾಯಿತಿ ಎದುರು ಪ್ರತಿಭಟನೆ ಹಮ್ಮಿಕೊಳ್ಳುವ ಎಚ್ಚರಿಕೆ ನೀಡಿದರು.
ಇಲಾಖೆಯ ಸಹಾಯಕ ನಿರ್ದೇಶಕ ಡಾ.ರಾಜಶೇಖರ್ ತಾಂತ್ರಿಕ ಸಲಹೆ ನೀಡಿದರು. ಇತ್ತೀಚೆಗೆ ಸೇವೆಯಿಂದ ನಿವೃತ್ತರಾದ ಪಶು ವೈದ್ಯಕೀಯ ಪರೀಕ್ಷಕರನ್ನು ಸಮಾರಂಭದಲ್ಲಿ ಸನ್ಮಾನಿಸಲಾಯಿತು.
ಸಂಘದ ಜಿಲ್ಲಾಧ್ಯಕ್ಷ ಎಚ್.ಬಿ. ಪದ್ಮೇಗೌಡ, ಪ್ರಧಾನ ಕಾರ್ಯದರ್ಶಿ ಬಿ.ಎಂ. ಪ್ರಕಾಶ್, ಖಜಾಂಚಿ ಎನ್.ಎಸ್. ಜಯದೇವಮೂರ್ತಿ, ನಿರ್ದೇಶಕ ಟಿ.ಎನ್.ಲಕ್ಷಣರಾಜು ಉಪಸ್ಥಿತರಿದ್ದರು.
ಚಿಕ್ಕಮಗಳೂರಿನ ಶ್ರೀಕಾಮಧೇನು ಗಣಪತಿ ದೇವಾಲಯದಲ್ಲಿ ಶನಿವಾರ ನಡೆದ ಪಶು ಪರೀಕ್ಷಕರ ಜಿಲ್ಲಾ ಮಟ್ಟದ ತಾಂತ್ರಿಕ ಸಮ್ಮೇಳನವನ್ನು ರೇಖಾ ಹುಲಿಯಪ್ಪಗೌಡ ಉದ್ಘಾಟಿಸಿದರು.
ಜಾನುವಾರುಗಳು ರೈತರ ಬದುಕಿನ ಜೀವನಾಡಿಗಳು. ಅವುಗಳಿಲ್ಲದೇ ಕೃಷಿಕರ ಬದುಕು ನಡೆಯುವುದಿಲ್ಲ. ಪಶುಪರೀಕ್ಷಕರು ಪ್ರಾಮಾಣಿಕವಾಗಿ ಕೆಲಸ ಮಾಡುವ ಮೂಲಕ ಪಶು ಸಂರಕ್ಷಣೆ ಮಾಡಬೇಕು.
ಟಿ ರೇಖಾ, ಅಧ್ಯಕ್ಷೆ, ಜಿಪಂ
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

