'ಅಡಕೆ ನಿಷೇಧ ಪ್ರಸ್ತಾವಕ್ಕೆ ಕೈ ಕಾರಣವಲ್ಲ'
ಕ.ಪ್ರ.ವಾರ್ತೆ, ಮೂಡಿಗೆರೆ, ಡಿ. 30
ಅಡಕೆ ನಿಷೇಧ ಪ್ರಸ್ತಾವಕ್ಕೆ ಆಡಳಿತ ಪಕ್ಷ ಕಾರಣವಲ್ಲ, ಈ ಹಿಂದೆ ಇದ್ದ ಬಿಜೆಪಿ ಅಫಿಡವಿಟ್ ಸಲ್ಲಿಸಿದ್ದರ ಪರಿಣಾಮ ಕೇಂದ್ರ ಸರ್ಕಾರ ಅಡಕೆ ಬೆಳೆ ನಿಷೇಧದ ಬಗ್ಗೆ ಪ್ರಸ್ತಾಪಿಸಿದೆ. ಬಿಜೆಪಿ ಮಾಡಿದ ತಪ್ಪಿಗೆ ಕಾಂಗ್ರೆಸ್ ಶಿಕ್ಷೆ ಅನುಭವಿಸುತ್ತಿದೆ ಎಂದು ಸಂಸದ ಜಯಪ್ರಕಾಶ್ ಹೆಗ್ಡೆ ತಿಳಿಸಿದರು.
ಪಟ್ಟಣದ ಲ್ಯಾಂಪ್ಸ್ ಸಹಕಾರ ಸಂಘದಲ್ಲಿ ನಿರ್ಮಿಸಿದ ವ್ಯಾಪಾರ ಮಳಿಗೆ ಹಾಗೂ ಸಾಂಸ್ಕೃತಿಕ ಭವನ ಕಟ್ಟಡ ಉದ್ಘಾಟಿಸಿ ಮಾತನಾಡಿ, ಕೇಂದ್ರ ಸರ್ಕಾರ ಯಾವುದೇ ನಿರ್ಣಯವನ್ನು ಏಕಪಕ್ಷವಾಗಿ ತೆಗೆದುಕೊಳ್ಳುವು ದಿಲ್ಲ. ರಾಜ್ಯ ಸರ್ಕಾರದ ಒಪ್ಪಿಗೆಯ ನಂತರವೇ ತೀರ್ಮಾನ ತೆಗೆದುಕೊಳ್ಳುವುದು.
ಕಾಂಗ್ರೆಸ್ ಸರ್ಕಾರ ಆಡಳಿತಕ್ಕೆ ಬಂದು ಕೆಲವೇ ತಿಂಗಳುಗಳೂ ಕಳೆದಿವೆ. ಆದರೆ, ಈ ಹಿಂದೆ ಆಡಳಿತ ನಡೆಸಿದ ಬಿಜೆಪಿ ಮಾಡಿದ ತಪ್ಪನ್ನು ಕಾಂಗ್ರೆಸ್ ಮೇಲೆ ಹಾಕುವುದು ಸರಿಯಲ್ಲ ಎಂದರು. ಮಲೆನಾಡು ಭಾಗದಲ್ಲಿ ಲ್ಯಾಂಪ್ಸ್ ಸಹಕಾರ ಸಂಘ ಉತ್ತಮವಾಗಿ ಕಾರ್ಯ ನಿರ್ವಹಿಸುತ್ತಿದ್ದು, ಸದಸ್ಯರ ಮೂಲಕ ಅರಣ್ಯ ಉತ್ಪನ್ನ ಸಂಗ್ರಹಿಸಿ ಮಾರಾಟ ಮಾಡಿ ಲಾಭಗೊಳಿಸುವುದರೊಂದಿಗೆ ಸದಸ್ಯರಿಗೆ ಉದ್ಯೋಗ ಕಲ್ಪಿಸಿರುವುದು ಸಂತಸದ ವಿಷಯ ಎಂದರು.
ಶಾಸಕ ಬಿ.ಬಿ. ನಿಂಗಯ್ಯ ವೇದಿಕೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಯವುದೇ ಸಹಕಾರ ಸಂಘ ಒಂದು ಘಟ್ಟ ಮುಟ್ಟಬೇಕಾದರೆ ಹಂತ- ಹಂತವಾಗಿ ಮೇಲೆ ಬರುತ್ತದೆ ಎನ್ನುವುದಕ್ಕೆ ಈ ಲ್ಯಾಂಪ್ಸ್ ಸಹಕಾರ ಸಂಘ ಒಂದು ಉದಾಹರಣೆ ಎಂದರು.
ಮಾಜಿ ಶಾಸಕ ಎಂ.ಪಿ. ಕುಮಾರಸ್ವಾಮಿ ಮಾತನಾಡಿದರು. ಅಧ್ಯಕ್ಷತೆಯನ್ನು ಲ್ಯಾಂಪ್ಸ್ ಸಹಕಾರ ಸಂಘದ ಅಧ್ಯಕ್ಷ ಮುತ್ತಪ್ಪ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ತಾಪಂ ಅಧ್ಯಕ್ಷ ಎಂ.ಎ. ಶೇಷಗಿರಿ, ರಾಜ್ಯ ಲ್ಯಾಂಪ್ಸ್ ಮಹಾಮಂಡಳಿಯ ಅಧ್ಯಕ್ಷ ಎಂ. ಕೃಷ್ಣಯ್ಯ, ಉಪನಿಬಂಧಕ ಕೆ.ಎಂ. ಶಿವಕುಮಾರಸ್ವಾಮಿ, ಕೆ.ರಾಜಮ್ಮ, ಜಿಪಂ ಸದಸ್ಯ ಎಂ.ಎಸ್. ಅನಂತು, ತಾಪಂ ಸದಸ್ಯರಾದ ರಂಜನ್ ಅಜಿತ್‌ಕುಮಾರ್, ಎ.ಜೆ. ಸುಬ್ರಾಯಗೌಡ, ಬಿ.ಎಸ್. ಜಯರಾಮ್, ಕೆ. ವೆಂಕಟೇಶ್, ಎಂ.ಸಿ. ನಾಗೇಶ್ ಸೇರಿದಂತೆ ಅನೇಕ ಗಣ್ಯರು ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

