'ಆಟದಲ್ಲಿ ಕ್ರೀಡಾ ಮನೋಭಾವದಿಂದ ಸ್ಪರ್ಧಿಸಿ'
ಬಾಳೆಹೊನ್ನೂರು: ಕ್ರೀಡೆಗಳಲ್ಲಿ ಕ್ರೀಡಾ ಮನೋಭಾವದಿಂದ ಸ್ಪರ್ಧಿಸಬೇಕು ಎಂದು ಹೋಬಳಿ ಯುವ ಕಾಂಗ್ರೆಸ್ ಅಧ್ಯಕ್ಷ ಮಹಮ್ಮದ್ ಶಹಾಬ್ ಹೇಳಿದ್ದಾರೆ.
ಇಲ್ಲಿನ ಕಲಾರಂಗ ಕ್ರೀಡಾಂಗಣದಲ್ಲಿ ಬಾಳೆಹೊನ್ನೂರು ಕ್ರಿಕೆಟ್ ಕ್ಲಬ್ ಭಾನುವಾರ ಆಯೋಜಿಸಿದ್ದ ಬಿಸಿಸಿ ಕಪ್ ಟೆನ್ನಿಸ್ಬಾಲ್ ಕ್ರಿಕೆಟ್ ಪಂದ್ಯಾವಳಿಯ ಸಮಾರೋಪ ಸಮಾರಂಭದಲ್ಲಿ ಮಾತನಾಡಿದರು. ಕ್ರೀಡೆಗಳಲ್ಲಿ ಭಾಗವಹಿಸುವುದು ಮುಖ್ಯ ಹೊರತು ಸೋಲು- ಗೆಲವು ಅಲ್ಲ. ಕ್ರೀಡೆಗಳಲ್ಲಿ ಭಾಗವಹಿಸುವುದರಿಂದ ಪರಸ್ಪರ ಸ್ನೇಹ ಬಾಂಧವ್ಯ ಬೆಳೆಯುತ್ತದೆ. ಕ್ರೀಡೆಗಳು ಇತರರೊಂದಿಗೆ ನಿಕಟ ಸಂಪರ್ಕ ಹೊಂದಲು ಸಹಕಾರಿ ಎಂದರು.
ಬಿ.ಕಣಬೂರು ಗ್ರಾಪಂ ಸದಸ್ಯ ಇಬ್ರಾಹಿಂ ಶಾಫಿ ಮಾತನಾಡಿ, ಸ್ಪರ್ಧಿಗಳು ಕ್ರೀಡಾಂಗಣದಲ್ಲಿ ಸಹನೆಯಿಂದ ವರ್ತಿಸಿ ಕ್ರೀಡಾ ಕ್ಷೇತ್ರಕ್ಕೆ ಗೌರವ ಸಲ್ಲಿಸಬೇಕು. ಎದುರಾಳಿ ತಂಡದ ಆಟಗಾರರೊಂದಿಗೆ ಸ್ನೇಹದಿಂದ ವರ್ತಿಸಬೇಕು ಎಂದರು.
ಬಿಸಿಸಿ ಅಧ್ಯಕ್ಷ ಶರೀಫ್ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ಚುಟುಕು ಸಾಹಿತ್ಯ ಪರಿಷತ್ ಅಧ್ಯಕ್ಷ ಯಜ್ಞಪುರುಷಭಟ್, ಪತ್ರಕರ್ತ ನಾಗರಾಜ್ ಭಟ್, ನಮನ ಕ್ರಿಕೆಟ್ ತಂಡದ ನಾಯಕ ಶ್ಯಾಮ್, ಇಸ್ಮಾಯಿಲ್, ತೀರ್ಪುಗಾರ ರಶೀದ್, ಇಮ್ರಾನ್, ಇಂದಾದ್, ಸಲ್ಮಾನ್, ರಫೀಕ್ ಇದ್ದರು.
ಪಂದ್ಯಾವಳಿಯಲ್ಲಿ ನಮನ ಕ್ರಿಕೆಟರ್ಸ್ ತಂಡವು ಪ್ರಥಮ ಸ್ಥಾನದೊಂದಿಗೆ 22,222 ನಗದು ಹಾಗೂ ಟ್ರೋಫಿ, ಯೂ2 ಗ್ರೂಪ್ ತಂಡ ದ್ವಿತೀಯ ಸ್ಥಾನದೊಂದಿಗೆ 11,111 ನಗದು ಬಹುಮಾನ ಹಾಗೂ ಟ್ರೋಫಿ ಪಡೆಯಿತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

