'ಸುಳ್ಳು ಜಾತಿ ಪ್ರಮಾಣ ಪತ್ರ ರದ್ದಾಗಲಿ'
ಚಿಕ್ಕಮಗಳೂರು: ಸಾಮಾಜಿಕ, ಆರ್ಥಿಕ, ಶೈಕ್ಷಣಿಕ ಮತ್ತು ರಾಜಕೀಯವಾಗಿ ಭದ್ರಗೊಳ್ಳಲು ಹಿಂದುಳಿದ ವರ್ಗಗಳ ಒಕ್ಕೂಟದ ಸದಸ್ಯರೆಲ್ಲರೂ ಸಂಘಟಿತರಾಗಬೇಕು ಎಂದು ರಾಜ್ಯ ಹಿಂದುಳಿದ ವರ್ಗಗಳ ಒಕ್ಕೂಟದ ಉಪಾಧ್ಯಕ್ಷ ಕೆ.ಎಂ. ರಾಮಚಂದ್ರಪ್ಪ ಹೇಳಿದರು.
ನಗರದ ಸ್ಕೌಟ್ ಭವನದಲ್ಲಿ ಸೋಮವಾರ ನಡೆದ ಕರ್ನಾಟಕ ರಾಜ್ಯ ಹಿಂದುಳಿದ ಜಾತಿಗಳ ಒಕ್ಕೂಟದ ದಶಮಾನೋತ್ಸವ ಮತ್ತು ಜಾಗೃತಿ ಸಮಾವೇಶದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ಹಿಂದುಳಿದ ವರ್ಗಗಳ ಒಕ್ಕೂಟದ ಎಲ್ಲಾ ಜಾತಿಗಳು ಒಂದಾಗಿ ಸಮಾಜದಲ್ಲಿ ತಮ್ಮದೇ ಆದ ಭದ್ರತೆಯನ್ನು ಪಡೆದುಕೊಳ್ಳಬೇಕೆಂದರು.
ಸುಳ್ಳು ಜಾತಿ ಪತ್ರ: ಹಿಂದುಳಿದ ಪ್ರವರ್ಗ- 1 ಹಾಗೂ 2 ಎ ನಲ್ಲಿ ಮೇಲ್ವರ್ಗದ ಜನಾಂಗದವರು ಸುಮಾರು 65 ಸಾವಿರಕ್ಕೂ ಹೆಚ್ಚು ಮೀಸಲಾತಿ ಸುಳ್ಳು ಜಾತಿ ಪ್ರಮಾಣಪತ್ರಗಳನ್ನು ಪಡೆದು ಆ ವರ್ಗದವರಿಗೆ ಕೊಟ್ಟಂತಹ ಎಲ್ಲಾ ಮೀಸಲು ದುರುಪಯೋಗಪಡಿಸಿಕೊಂಡಿದ್ದಾರೆ. ತಕ್ಷಣವೇ ಸುಳ್ಳು ಜಾತಿ ಪ್ರಮಾಣ ಪತ್ರವನ್ನು ರದ್ದುಪಡಿಸಬೇಕು ಎಂದು ಹೇಳಿದರು.
ಬೆಂಗಳೂರಿನ ಅರಮನೆ ಮೈದಾನದಲ್ಲಿ ಜನವರಿ 12 ರಂದು ರಾಜ್ಯ ಹಿಂದುಳಿದ ವರ್ಗಗಳ ಒಕ್ಕೂಟದ ದಶಮಾನೋತ್ಸವ ಮತ್ತು ಜಾಗೃತಿ ಸಮಾವೇಶವನ್ನು ಹಮ್ಮಿಕೊಳ್ಳಲಾಗಿದ್ದು, ಮುಖ್ಯಮಂತ್ರಿ ಸಿದ್ಧರಾಮಯ್ಯನವರು ಈ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ ಎಂದರು.
ಸಭೆಯಲ್ಲಿ ಒಕ್ಕೂಟದ ಉಪಾಧ್ಯಕ್ಷರಾದ ಸುರೇಶ್ ಎಂ. ಲಾಥೋರ್, ಪ್ರಧಾನ ಕಾರ್ಯದರ್ಶಿ ಎಸ್.ಜೆ. ಕಾಳೇಗೌಡ, ಆಂತರೀಕ ಲೆಕ್ಕ ಪರಿಶೋಧಕರಾದ ಅಣ್ಣೆಗೆರೆ ಆರ್. ವೆಂಕಟರಾಮಯ್ಯ, ದೇವಾಂಗ ಸಂಘದ ಅಧ್ಯಕ್ಷ ಕೃಷ್ಣಶೆಟ್ಟಿ, ಜಿಲ್ಲಾ ಕುರುಬರ ಸಂಘದ ಅಧ್ಯಕ್ಷ ಕೆ.ಬಿ. ಮಂಜುನಾಥ್ ಉಪಸ್ಥಿತರಿದ್ದರು. ಕೃಷ್ಣಮೂರ್ತಿ ಸ್ವಾಗತಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

