ಅಧಿಕಾರಿಗಳ ಮಾತಿಗೆ ಮೋಸಹೋಗದಿರಿ
ಕ.ಪ್ರ.ವಾರ್ತೆ, ಮೂಡಿಗೆರೆ, ಡಿ.30
ಜನಪ್ರತಿನಿಧಿಗಳು ಅಧಿಕಾರಿಗಳನ್ನು ಹಿಡಿತದಲ್ಲಿ ಇಟ್ಟುಕೊಂಡಿರದಿರುವುದರಿಂದ ಅಧಿಕಾರಿಗಳು ಮನಸ್ಸೋ ಇಚ್ಚೆ ಕರ್ತವ್ಯ ನಿರ್ವಹಿಸುತ್ತಿದ್ದಾರೆ ಎಂದು ತಾಪಂ ಸದಸ್ಯ ರಂಜನ್ ಅಜಿತ್ ಕುಮಾರ್ ಅಭಿಪ್ರಾಯಿಸಿದರು.
ಪಟ್ಟಣದ ತಾಪಂ ಆವರಣದಲ್ಲಿ ಜಿಪಂ ಚಿಕ್ಕಮಗಳೂರು, ತಾಪಂ ಮೂಡಿಗೆರೆ ಇವರ ಸಂಯುಕ್ತ ಆಶ್ರಯದಲ್ಲಿ ಮಹಾತ್ಮಾ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆ ಮಾಹಿತಿ, ಶಿಕ್ಷಣ, ಸಂವಹನ ಕಾರ್ಯಾಗಾರದ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಅವರು ಮಾತನಾಡಿದರು.
ಉತ್ತಮ ಫಲ: ಈ ಹಿಂದೆ ಖಾತ್ರಿ ಯೋಜನೆಯಡಿಯಲ್ಲಿ ಫಲಾನುಭವಿಗಳಿಗೆ ಕಿತ್ತಲೆ ಗಿಡ ವಿತರಿಸಲಾಗಿದ್ದು. ಕೆಲವೊಂದು ಕಿಡಿಗೇಡಿಗಳ ಕೃತ್ಯದಿಂದ ಕಳಪೆ ಮಟ್ಟದ ಕಿತ್ತಲೆ ಗಿಡಗಳೆಂದು ದಾರಿ ತಪ್ಪಿಸುವ ಮೂಲಕ ಫಲಾನುಭವಿಗಳಿಗೆ ಕಿತ್ತಲೆ ಗಿಡ ವಿತರಣೆ ಮಾಡದ ಹಾಗೇ ತಡೆದರು. ಆದರೆ ಅದೇ ಕಿತ್ತಲೆ ಗಿಡಗಳನ್ನು ತಾವು ಸೇರಿದಂತೆ ಅನೇಕರು ಹಾಕಿದ್ದು ಇಂದು ಫಲವನ್ನು ನೀಡುತ್ತಿದೆ ಎಂದರು.
ಹಾಗಾಗಿ ಗ್ರಾಪಂ ಅಧಿಕಾರಿಗಳು ಗಾಳಿಮಾತಿಗೆ ಅಥವಾ ಬೆದರಿಕೆಗೆ ಬೆದರದೆ ಸರ್ಕಾರದಿಂದ ಬಂದಂತಹ ಸವಲತ್ತುಗಳನ್ನು ಸಮರ್ಪಕವಾಗಿ ವಿತರಿಸುವಂತೆ ತಿಳಿಸಿದರು.
ಸದಸ್ಯ ಎ.ಜೆ.ಸುಬ್ರಾಯ ಮಾತನಾಡಿ, ಖಾತ್ರಿ ಯೋಜನೆ ಒಂದು ಉತ್ತಮ ಯೋಜನೆಯಾಗಿದ್ದು. ಕಾರ್ಮಿಕರು ಜಾಬ್ ಕಾರ್ಡ್ಗಳನ್ನು ಹೊಂದದೇ ಇರುವ ಕಾರಣ ಪಂಚಾಯತ್ಗಳಲ್ಲಿ ಅಭಿವೃದ್ಧಿ ಕಾರ್ಯ ಆಮೆ ಗತಿಯಲ್ಲಿ ಸಾಗುತ್ತಿದೆ.ಮಹಾತ್ಮಾ ಗಾಂಧಿ ಯೋಜನೆಯಡಿ ಕಾರ್ಯ ನಿರ್ವಹಿಸುವ ಕಾರ್ಮಿಕರಿಗೆ ಸಮರ್ಪಕವಾಗಿ ಜಾಬ್ ಕಾರ್ಡ್ ವಿತರಣೆ ಮಾಡಿದಲ್ಲಿ ಕೆಲಸಗಳು ತ್ವರಿತಗತಿಯಲ್ಲಿ ಮುಗಿಯುತ್ತದೆ ಎಂದರು.
ದುರದೃಷ್ಟಕರ: ಕೆಲವು ಯೋಜನೆಗಳು ಸಮರ್ಪಕವಾಗಿ ಫಲಾನುಭವಿಗಳಿಗೆ ತಲುಪುತ್ತಿಲ್ಲ. ಗುಡಿಸಲು ಮನೆಯಲ್ಲಿದ್ದವರು ಗುಡಿಸಲಲ್ಲೇ ಇರಬೇಕಾಗಿದೆ, ಸ್ವಂತಮನೆ ಇದ್ದವರಿಗೆ ಮನೆಗಳು ಸಿಗದಿರುವುದು ದುರದೃಷ್ಟಕರ ಎಂದರು.
ಸಹಾಯಕ ನಿರ್ದೇಶಕ ರಾಮಚಂದ್ರ ಮತ್ತು ತಾಂಪಂ ಕಾರ್ಯ ನಿರ್ವಾಹಕ ಅಧಿಕಾರಿ ಚಂದ್ರಮೌಳಿ ಮಾತನಾಡಿ, ಉದ್ಯೋಗ ಖಾತ್ರಿ ಯೋಜನೆಯಲ್ಲಿ ಫಲಾನುಭವಿಗಳಿಗೆ ಆಗಲಿ ಅಥವಾ ಕಾರ್ಮಿಕರಿಗೆ ಆಗಲಿ ಏನಾದರು ತೊಂದರೆ ಆದಲ್ಲಿ ಅಥವಾ ಮಾಹಿತಿ ಬೇಕಾದಲ್ಲಿ ಕಾರ್ಯನಿರ್ವಾಹಕ ಅಧಿಕಾರಿ ಚಂದ್ರಮೌಳಿ ಮೊ. 9480860115 ಅಥವಾ ಸಹಾಯಕ ನಿರ್ದೇಶಕ ರಾಮಚಂದ್ರ ಮೊ. 9480860116 ಗೆ ಕರೆ ಮಾಡಿದಲ್ಲಿ ಸ್ಪಂದಿಸುವುದಾಗಿ ತಿಳಿಸಿದರು. ಅಧ್ಯಕ್ಷತೆಯನ್ನು ಹಳೇ ಮೂಡಿಗೆರೆ ಗ್ರಾಪಂ ಅಧ್ಯಕ್ಷ ಎಚ್.ಆರ್. ಕುಮಾರ್ ವಹಿಸಿದ್ದರು. ತಾಪಂ ಅಧ್ಯಕ್ಷ ಎಂ.ಎ. ಶೇಷಗಿರಿ, ಬಿದರಹಳ್ಳಿ ಗ್ರಾಪಂ ಅಧ್ಯಕ್ಷ ಎಚ್.ಎಂ. ಪ್ರಭಾಕರ್ ಉಪಸ್ಥಿತರಿದ್ದರು. 6 ಗ್ರಾಪಂಗಳ ಅಧ್ಯಕ್ಷರು, ಕಾರ್ಯದರ್ಶಿಗಳು, ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ಭಾಗವಹಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

