ಚಿಕ್ಕಮಗಳೂರು

ಸಚಿವ ಜೈನ್ ರಾಜಿನಾಮೆಗೆ ಆಗ್ರಹ

Published On :

ಚಿಕ್ಕಮಗಳೂರು: ಮುಲ್ಕಿಯಲ್ಲಿ ಆಟೋ ಚಾಲಕರ ಮೇಲೆ ಹಲ್ಲೆ ನಡೆಸಿರುವ ಯುವಜನ ಸೇವಾ ಮತ್ತು ಕ್ರೀಡಾ ಸಚಿವ ಕೆ. ಅಭಯಚಂದ್ರ ಜೈನ್ ಅವರನ್ನು ಸಚಿವ ಸಂಪುಟದಿಂದ ವಜಾ ಮಾಡುವಂತೆ ನಗರ ಬಿಜೆಪಿ ಅಧ್ಯಕ್ಷ ವರಸಿದ್ಧಿ ವೇಣುಗೋಪಾಲ್ ಆಗ್ರಹಿಸಿದ್ದಾರೆ. ಆಟೋ ಚಾಲಕರು, ಮಾಲೀಕರು ಮುಲ್ಕಿ ನಾಡ ಕಚೇರಿ ಎದುರು ರಸ್ತೆ ದುರಸ್ತಿಗೆ ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿದ್ದ ಸಂದರ್ಭದಲ್ಲಿ ಸಚಿವ ಕೆ. ಅಭಯಚಂದ್ರ ಜೈನ್ ಅವರು ಆಟೋ ಚಾಲಕರ ಮೇಲೆ ಹಲ್ಲೆ ಮಾಡಿರುವುದು ದುರದೃಷ್ಟಕರ. ಇದು ರಾಜ್ಯದ ಜನತೆಗೆ ಮಾಡಿರುವ ಅವಮಾನ ಎಂದು ಹೇಳಿಕೆಯಲ್ಲಿ ತಿಳಿಸಿದ್ದಾರೆ. ಸಚಿವರು ಸಾರ್ವಜನಿಕರ ಕೆಲಸ ಮಾಡುವುದು ಆದ್ಯ ಕರ್ತವ್ಯ. ಆದರೆ, ಅವರು ಸಾರ್ವಜನಿಕರ ಕೆಲಸಗಳನ್ನು ಮಾಡದೇ ಗೂಂಡಾ ವರ್ತನೆ ಮಾಡಿರುವುದು ರಾಜ್ಯದಲ್ಲಿ ಗೂಂಡಾ ಸರ್ಕಾರ ಇದೆ ಎಂಬ ಭಾವನೆ ರಾಜ್ಯದ ಜನತೆಯಲ್ಲಿ ಮೂಡುತ್ತಿದೆ. ಒಬ್ಬ ಸಚಿವರು ಸಾರ್ವಜನಿಕರ ಅಹವಾಲನ್ನು ಸ್ವೀಕರಿಸದೇ ಆಟೋ ಚಾಲಕರ ಮೇಲೆ ಗೂಂಡಾ ವರ್ತನೆ ಮಾಡಿರುವುದು ಖಂಡನೀಯ ಎಂದು ಹೇಳಿದ್ದಾರೆ.
ಜ.2ಕ್ಕೆ ಸಂವಾದ ಕಾರ್ಯಕ್ರಮ
ತರೀಕೆರೆ: ಪ್ರಕೃತಿ ಶ್ರೀ ಕಲಾ ಕುಟೀರ, ರೋಟರಿ ಸಂಸ್ಥೆ, ಇನ್ನರ್ ವೀಲ್ ಸಂಸ್ಥೆ ವತಿಯಿಂದ ಜನವರಿ 2 ರಂದು ಸಂಜೆ 5-30ಕ್ಕೆ ರೋಟರಿ ಶಾಲಾ ಆವರಣದಲ್ಲಿ “ÈÚß}æ¡ ಮತ್ತೆ }æÞdÒÊ’ ಸಾಕ್ಷ್ಯ ಚಿತ್ರ ಪ್ರದರ್ಶನ ಮತ್ತು ಸಂವಾದ ಕಾರ್ಯಕ್ರಮವನ್ನು ಏರ್ಪಡಿಸಲಾಗಿದೆ. ಭಗವತಿಕೆರೆಯ, ತೇಜಸ್ವಿಯವರ ಒಡನಾಡಿ ಕಡಿದಾಳ್ ಶಾಮಣ್ಣ ಅವರು ಕಾರ್ಯಕ್ರಮದಲ್ಲಿ ಇರಲಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.