ಚಿಕ್ಕಮಗಳೂರು

ಭವಿಷ್ಯ ರೂಪಿಸಲು ಅಂಗನವಾಡಿಯೂ ಸಹಕಾರಿ

Published On :

ಬಾಳೆಹೊನ್ನೂರು: ಮಕ್ಕಳ ಭವಿಷ್ಯ ರೂಪಿಸುವಲ್ಲಿ ಅಂಗನವಾಡಿ ಕೇಂದ್ರಗಳು ಮಹತ್ವದ ಪಾತ್ರ ವಹಿಸುತ್ತವೆ ಎಂದು ಶೃಂಗೇರಿ ಶಾಸಕ ಡಿ.ಎನ್. ಜೀವರಾಜ್ ಹೇಳಿದ್ದಾರೆ.
ಸಮೀಪದ ಕರ್ಕೇಶ್ವರ ಗ್ರಾಪಂ ವ್ಯಾಪ್ತಿಯ ಮೇಲ್ಪಾಲ್‌ನಲ್ಲಿ ಇತ್ತೀಚೆಗೆ ನೂತನ ಅಂಗನವಾಡಿ ಕಟ್ಟಡ ಉದ್ಘಾಟಿಸಿ ಮಾತನಾಡಿದರು.
ಅಂಗನವಾಡಿಗಳು ಅಕ್ಷರ ತಿದ್ದಿಸಿ ಕಲಿಸುವ ಕೇಂದ್ರವಾಗಿದೆ. ಆದರೆ, ಇಂದು ಪೋಷಕರು ಆಂಗ್ಲ ಮಾಧ್ಯಮ ಶಿಕ್ಷಣದ ವ್ಯಾಮೋಹದಲ್ಲಿ ಮಕ್ಕಳನ್ನು ಎಲ್‌ಕೆಜಿ, ಯುಕೆಜಿಗೆ ದಾಖಲಿಸುತ್ತಿದ್ದಾರೆ. ಇದರಿಂದಾಗಿ ಭವಿಷ್ಯದ ದಿನಗಳಲ್ಲಿ ಈ ಕೇಂದ್ರಗಳನ್ನು ಮುಚ್ಚುವ ಪರಿಸ್ಥಿತಿ ಉಂಟಾಗುತ್ತದೆ. ಈ ಹಿನ್ನೆಲೆಯಲ್ಲಿ ಅಂಗನವಾಡಿ ಕಾರ್ಯಕರ್ತರು ಪೋಷಕರ ಮನವೊಲಿಸಿ ಮಕ್ಕಳನ್ನು ಕೇಂದ್ರಕ್ಕೆ ಕರೆತಂದು ಉತ್ತಮ ಅಡಿಪಾಯ ಹಾಕುವಲ್ಲಿ ಮುಂದಾಗಬೇಕು ಎಂದರು.
ಒತ್ತಡ ಹಾಕಿ: ಕಸ್ತೂರಿರಂಗನ್ ವರದಿ ಗ್ರಾಮೀಣ ಪ್ರದೇಶದ ಜನತೆಗೆ ಮರಣ ಶಾಸನವಾಗಲಿದ್ದು, ಇದು ಜಾರಿಗೊಂಡಲ್ಲಿ ಅಭಿವೃದ್ಧಿ ಕಾಮಗಾರಿ ಮಾಡಲಾಗುವುದಿಲ್ಲ. ಸಂಘಟಿತ ಹೋರಾಟದಿಂದ ಈ ವರದಿ ಜಾರಿಗೆ ಬಾರದಂತೆ ಸರ್ಕಾರದ ಮೇಲೆ ಒತ್ತಡ ತರಬೇಕು ಎಂದು ಹೇಳಿದರು.
ಕರ್ಕೇಶ್ವರ ಗ್ರಾಪಂ ಅಧ್ಯಕ್ಷ ರತ್ನಾಕರ್ ಅಧ್ಯಕ್ಷತೆ ವಹಿಸಿದ್ದರು.ನರಸಿಂಹರಾಜಪುರ ತಾಪಂ ಅಧ್ಯಕ್ಷ ಜೆ.ಜಿ. ನಾಗರಾಜ್, ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷ ಕೆ.ಟಿ. ವೆಂಕಟೇಶ್, ಗ್ರಾಪಂ ಮಾಜಿ ಅಧ್ಯಕ್ಷ ದಿನಕರ್, ನಾಗರಾಜ್ ಉಪಸ್ಥಿತರಿದ್ದರು.


Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.